ಬೀದರ್‌ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿವೇತನ ಬಿಡುಗಡೆಗೆ ಆಗ್ರಹ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ(ಎಸ್‌ಸಿ/ಎಸ್‌ಟಿ) ಸಮುದಾಯದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೀದರ್ ಜಿಲ್ಲಾಧಿಕಾರಿ‌ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“2018-19ನೇ ಸಾಲಿನಿಂದ ಮ್ಯಾನೇಜ್‌ಮೆಂಟ್ ಕೋಟಾದಡಿಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕಗಳನ್ನು ಪಾವತಿಸಬಾರದೆಂದು ಆದೇಶಿಸಿದೆ. ಇದು ಸೂಕ್ತವಾದ ತೀರ್ಮಾನವಲ್ಲ. ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ 2019ನೇ ಸಾಲಿನಿಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಕೋಟಾದಡಿಯಲ್ಲಿ ಪ್ರವೇಶ ಪಡೆದಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರದಿಂದ ಶಿಷ್ಯವೇತನ ನಿಲ್ಲಿಸಲಾಗಿದೆ. ಇದರಿಂದ ಶೋಷಿತ ಸಮುದಾಯಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ” ಎಂದು ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ.

“ರಾಜ್ಯದಲ್ಲಿ ಹಲವಾರು ವೃತ್ತಿಪರ ಕೋರ್ಸ್‌ಗಳು ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಆಡಳಿತ ಮಂಡಳಿ ಕೋಟಾದಲ್ಲಿಯೇ ಹೆಚ್ಚಾಗಿವೆ. ಹಾಗಾಗಿ ಈ ಕೋರ್ಸ್ ಕಲಿಯಬೇಕಾದರೆ ಅನಿವಾರ್ಯವಾಗಿ ವಿದ್ಯಾರ್ಥಿಗಳು ಖಾಸಗಿ ಕೋಟಾದಡಿಯಲ್ಲಿಯೇ ಪ್ರವೇಶ ಪಡೆಯಬೇಕಾಗುತ್ತದೆ. ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆಯದಿದ್ದರೆ ಈ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ. ಕೂಡಲೇ ಈ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ದೊರೆಯುವಂತೆ ಸರ್ಕಾರ ಕ್ರಮ ವಹಿಸಬೇಕು” ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವ್ಯಾಸಾಂಗ ಮಾಡುವ ಪ್ರತಿ ವಿದ್ಯಾರ್ಥಿಗೂ ವಿದ್ಯಾರ್ಥಿವೇತನ ಮಂಜೂರು ಮಾಡಬೇಕು. ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯುವ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ಕೊಡಬೇಕು. ಇಲಾಖೆ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಲ್ಯಾಪ್‌ಟಾಪ್ ವಿತರಣೆ ಮಾಡುವ ಕಾರ್ಯ ಸ್ಥಗಿತಗೊಂಡಿದ್ದು, ಅದನ್ನು ಪುನಃ ಆರಂಭಿಸಬೇಕು. ಪ್ರತಿ ವಸತಿನಿಲಯಗಳನ್ನು ಶೈಕ್ಷಣಿಕ ಪೂರಕ ಕೆಂದ್ರವಾಗಿ ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸಂಶಿಯಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಆಗ್ರಹ

“ಪ್ರತಿ ವಸತಿ ನಿಲಯಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ಹಾಗೂ ಬೇಸಿಕ್ ಕಂಪ್ಯೂಟರ್ ಕೋರ್ಸ್ ಮೂಲಕ ತರಬೇತಿ ನೀಡಬೇಕು. ಪ್ರತಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಪಾಲಕರು ಹಾಗೂ ಇಲಾಖೆಯ ಅಧಿಕಾರಿಗಳೂ ಒಳಗೊಂಡಂತೆ ವಸತಿ ನಿಲಯ ಮೇಲುಸ್ತುವಾರಿ ಸಮಿತಿ ರಚಿಸಿ, ವಸತಿ ನಿಲಯಗಳಲ್ಲಿ ಶಿಸ್ತು ಕಾಪಾಡಬೇಕು” ಎಂದರು.

“ವಸತಿ ನಿಲಯ ಮೇಲುಸ್ತುವಾರಿ ಸಮಿತಿ ಸಭೆ ಕಡ್ಡಾಯವಾಗಿ ಪ್ರತಿ ತಿಂಗಳು ನಡೆಯುವಂತೆ ನೊಡಿಕೊಳ್ಳಬೇಕು. ವಸತಿ ನಿಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಗ್ರಂಥಾಲಯ ತೆರೆಯಬೇಕು. ಪ್ರಸ್ತುತ ಬೆಲೆ ಏರಿಕೆ ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ವಿದ್ಯಾರ್ಥಿವೇತನದಲ್ಲಿ ಶೇ.50ರಷ್ಟು ಏರಿಕೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಬೀದರ್ ತಾಲೂಕು ಸಂಚಾಲಕ ಅಶೋಕ್ ಚಲ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಾಲೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...