ಬೀದರ್‌ | ಪ್ರತಿ ಟನ್‌ ಕಬ್ಬಿಗೆ ₹3,100 ದರ ನಿಗದಿಗೆ ಆಗ್ರಹಿಸಿ ಮುಂದುವರೆದ ಅಹೋರಾತ್ರಿ ಧರಣಿ

Date:

ಪ್ರತಿ ಟನ್‌ ಕಬ್ಬಿಗೆ ₹3,100 ದರ ಕೊಡಲೇಬೇಕೆಂದು ಆಗ್ರಹಿಸಿ ಬೀದರ್‌ ನಗರದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಾರ್ಯಾಲಯ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ರಾಜಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತ್ರತ್ವದ ತಂಡ ಶನಿವಾರ ಭೇಟಿ ನೀಡಿ ಹೋರಾಟ ರೈತರ ಹೋರಾಟಕ್ಕೆ ಬೆಂಬಲಿಸಿತು.

ಬಳಿಕ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, ʼರಾಜ್ಯದಲ್ಲಿ ಕಬ್ಬಿಗೆ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ರೈತರು ಬೆಳಗಾವಿಯಲ್ಲಿ ಆರಂಭಿಸಿದ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಟನ್‌ ಕಬ್ಬಿಗೆ 3100 ಬೆಲೆ ನಿಗದಿಪಡಿಸಿದೆ. ಅದರಂತೆ ಬೀದರ್‌ ಜಿಲ್ಲೆಯಲ್ಲಿಯೂ ಬೆಲೆ ನೀಡಬೇಕು. ಆದರೆ ರಿಕವರಿ ಕಡಿಮೆ ನೆಪವೊಡ್ಡಿ ಬೆಲೆ ನೀಡದಿರುವುದು ಕಬ್ಬು ಬೆಳಗಾರರಿಗೆ ಮೋಸ ಮಾಡಿದಂತೆ ಆಗುತ್ತದೆʼ ಎಂದರು.

ಜಿಲ್ಲಾಡಳಿತವು ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಮೂರು ಸಭೆಗಳು ವಿಫಲವಾಗಿರುವ ಹಿನ್ನೆಲೆ ರೈತರು ಪ್ರತಿಭಟನೆ ನಡೆಸಬೇಕಾದ ಅನಿವಾರ್ಯ ಬಂದಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಡಳಿತದೊಂದಿಗೆ ಮಾತುಕತೆ ನಡೆಸಿ ರೈತರಿಗೆ ಮೋಸ ಆಗದಂತೆ ಬೆಲೆ ನೀಡಿ ನ್ಯಾಯ ಒದಗಿಸಬೇಕು. ಈ ಹೋರಾಟಕ್ಕೆ ರಾಜ್ಯ ಘಟಕ ಸಂಪೂರ್ಣವಾಗಿ ಬೆಂಬಲಿಸುತ್ತದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಮಾತನಾಡಿ, ʼಈ ಬಾರಿ ಬೀದರ್‌ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ರೈತರು ಬೆಳೆದಿದ್ದ ಉದ್ದು, ಹೆಸರು, ತೊಗರಿ, ಸೋಯಾಬಿನ್‌ ಸೇರಿ ಇತರ ಬೆಳೆಗಳು ಸಂಪೂರ್ಣ ಹಾಳಾಗಿವೆ. ಒಂದಿಷ್ಟು ಕಬ್ಬು ಬೆಳೆ ಕೈಗೆ ಬಂದಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕಾರ್ಖಾನೆ ಮಾಲೀಕರು ಕಬ್ಬಿಗೆ ಬೆಂಬಲ ನೀಡಲು ಒಪ್ಪದಿರುವುದು ನೋವಿನ ಸಂಗತಿʼ ಎಂದರು.

ʼಪ್ರತಿ ಟನ್‌ ಕಬ್ಬಿಗೆ ರಾಜ್ಯ ಸರ್ಕಾರ ನಿಗದಿಪಡಿಸಿದ ಬೆಲೆ ಜಿಲ್ಲೆಯ ರೈತರಿಗೂ ದೊರಕಬೇಕು. ಆದರೆ, ಜಿಲ್ಲಾಡಳಿತ, ಕಾರ್ಖಾನೆ ಮಾಲೀಕರು ಅದಕ್ಕೆ ಒಪ್ಪದೆ ತಾರತಮ್ಮ ಮಾಡುತ್ತಿದ್ದಾರೆ. ರಾಜ್ಯದ ಇತರೆ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಕಬ್ಬಿಗೆ ಉತ್ತಮ ಬೆಲೆ ಕೊಡುತ್ತಿದ್ದಾರೆ. ಬೀದರ್‌ ಜಿಲ್ಲೆಯ ರೈತರಿಗೆ ಮಾತ್ರ ಈ ರೀತಿಯ ಅನ್ಯಾಯ ಆಗುತ್ತಿದೆ. ಕೂಡಲೇ ಜಿಲ್ಲಾಡಳಿತ ರೈತರೊಂದಿಗೆ ಮಾತುಕತೆ ನಡೆಸಿ ಬೇಡಿಕೆಗೆ ಸ್ಪಂದಿಸಬೇಕು. ಇಲ್ಲದಿದ್ದರೆ ರಾಜ್ಯದ ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಬೀದರ್‌ ಬಂದ್‌ಗೆ ಕರೆ ನೀಡಿ ಬೃಹತ್‌ ರೈತ ಸಮಾವೇಶ ನಡೆಸಲಾಗುವುದುʼ ಎಂದು ತಿಳಿಸಿದರು.

ರೈತರ ಹೋರಾಟಕ್ಕೆ ಜನಪ್ರತಿನಿಧಿಗಳ ಸಾಥ್‌ :

ಕಬ್ಬಿಗೆ ಸೂಕ್ತ ಬೆಲೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ವಿಧಾನ ಪರಿಷತ್‌ ಸದಸ್ಯ ಚಂದ್ರಶೇಖರ್ ಪಾಟೀಲ್‌ ಹುಮನಾಬಾದ್‌, ಮಾಜಿ ಸಚಿವ ರಾಜಶೇಖರ್‌ ಪಾಟೀಲ್‌, ಮಾಜಿ ಎಂಎಲ್ಸಿ ಅರವಿಂದ ಕುಮಾರ್‌ ಅರಳಿ,‌ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಅಭಿಷೇಕ ಪಾಟೀಲ್‌, ಕಾಂಗ್ರೆಸ್‌ ಮುಖಂಡರಾದ ಅಬ್ದುಲ್‌ ಮನ್ನಾನ್‌ ಸೇಠ್‌, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್‌, ಬಿಜೆಪಿ ಮುಖಂಡರಾದ ರಾಜಶೇಖರ್‌ ನಾಗಮೂರ್ತಿ, ಜಗನಾಥ ಚಿಲ್ಲಾಬಟ್ಟೆ, ಈಶ್ವರ ಸಿಂಗ್‌ ಠಾಕೂರ್‌ ಮತ್ತಿತರರು ಭೇಟಿ ನೀಡಿ ರೈತರಿಗೆ ಬೆಂಬಲ ನೀಡಿ ಮಾತನಾಡಿದರು.

image 76 1

ಮಾಜಿ ಸಚಿವ ರಾಜಶೇಖರ್‌ ಪಾಟೀಲ್‌ ಮಾತನಾಡಿ, ʼರೈತರು ನಡೆಸುತ್ತಿರುವ ಹೋರಾಟಕ್ಕೆ ಸಂಪೂರ್ಣವಾಗಿ ಬೆಂಬಲ ನೀಡುವೆ. ಬೀದರ್‌ ಜಿಲ್ಲೆಯ ರೈತರ ಬೇಡಿಕೆಗೆ ಸ್ಪಂದಿಸಿ ಟನ್‌ ಕಬ್ಬಿಗೆ 3100 ಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಮನವಿ ಮಾಡುವೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

ಕಬ್ಬಿಗೆ ನ್ಯಾಯಯುತ್‌ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನಾಕಾರರು ನಗರದ ಅಂಬೇಡ್ಕರ್‌ ವೃತ್ತದಿಂದ ಭಗತ್‌ ಸಿಂಗ್‌ ವೃತ್ತದ ಮಾರ್ಗವಾಗಿ ಛತ್ರಪತಿ ಶಿವಾಜಿ ಚೌಕ್‌ ಮುಖಾಂತರ ಧರಣಿ ಸ್ಥಳಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ‌ ಮಲ್ಲಿಕಾರ್ಜುನ್‌ ಸ್ವಾಮಿ, ರೈತ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ನಾಗೇಂದ್ರ ಥಂಬೆ, ಮುಖಂಡರಾದ ಗೋಪಾಲ್‌, ಸೈಯದ್ ಖಾಸೀಮ ಅಲಿ, ಶಂಕರೆಪ್ಪಾ ಮರಕಲ್, ಕೊಂಡಿಬಾ ಪಾಂಡ್ರೆ, ಶಿವರಾಜ ಪಾಟೀಲ್ ಅತಿವಾಳ, ಬಾಬುರಾವ ಹೊನ್ನಾ,‌ ಶಿವರಾಯ ಮುದಾಳೆ, ಖಾಶೆಪ್ಪಾ ಬೇಲೂರ. ಧುಳಪ್ಪಾ. ರುದ್ರಸ್ವಾಮಿ, ಸಂತೋಷ ಗುದಗೆ, ಮಲ್ಲಿಕಾರ್ಜುನ ಸಂಗಮ, ನಜೀರ್ ಅಹ್ಮದ್ ಚೊಂಡಿ, ಪ್ರಕಾಶ ಬಾವುಗೆ, ಶಾಂತಮ್ಮ ಮೂಲಗೆ, ಶಿವಲೀಲಾ ಹೋಳಸಮುದ್ರ, ವಿಜಯಕುಮಾರ ಬಾವುಗೆ, ವೀರಾರೆಡ್ಡಿ, ವಿಠಲರಾವ, ನಾಗಶೆಟ್ಟಿ, ಭೀಮರಾವ, ಖಮರ ಪಟೇಲ್, ವಿಜಯ ರೇಡ್ಡಿ, ನಾಗಶೇಟ್ಟಿ ಚೆನ್ನಮಲ್ಲ, ಮುಖೀಮೊದ್ದಿನ ನಂದಗಾಂವ, ಖಾನ್‌ಸಾಬ್ ನಾರಾಯಣಪುರ, ಸಂಜು ಪಾಟೀಲ್ ಹುಣಜಿ, ಬಾಬುರಾವ ಪಾಟೀಲ್, ಶಿವಕಾಂತ ಖಂಡೆ, ಸುರೇಶ ಪಾಟೀಲ್, ಬಸವರಾಜ ಅಷ್ಟೂರ, ಸೋಮನಾಥ ಏಳಕೂರ ಸೇರಿದಂತೆ ಅನೇಕ ರೈತ ನಾಯಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...