ಬೀದರ್‌ | ಎನ್‌ಎಸ್‌ಎಸ್‌ಕೆ ಆರ್ಥಿಕ ಬಲವರ್ಧನೆಗೆ ಡಿಸಿಸಿ ಬ್ಯಾಂಕ್‌ ಸಹಕಾರ ಅಗತ್ಯ

Date:

ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಹಾಗೂ ಎನ್‌ಎಸ್‌ಎಸ್‌ಕೆ ಮಂಡಳಿಯವರು ತಮ್ಮ ರಾಜಕೀಯ ಪ್ರತಿಷ್ಠೆಗೆ ಬಿದ್ದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಹಳ್ಳಿಖೇಡದ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಗೆ ಬಂದ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕು ಎಂದು ಭಾರತೀಯ ಕಿಸಾನ್‌ ಸಂಘ ಆಗ್ರಹಿಸಿದೆ.

“ಜಿಲ್ಲೆಯ ಡಿಸಿಸಿ ಬ್ಯಾಂಕ್  ದಿವಂಗತ ವೀರಶೆಟ್ಟಿ ಕುಶನೂರ ಅವರು ಪ್ರಾರಂಭಿಸಿ ನಂತರ ದಿವಂಗತ ಗುರುಪಾದಪ್ಪಾ ನಾಗಮಾರಪಳ್ಳಿರವರ ಅಧ್ಯಕ್ಷತ್ಯೆಯಲ್ಲಿ ಮುನ್ನಡೆದು ಇಡೀ ರಾಜ್ಯದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿತ್ತು. ಮುಂದೆ ಗುರುಪಾದಪ್ಪಾ ನಾಗಮಾರಪಳ್ಳಿಯವರ ಪುತ್ರ ಉಮಾಕಾಂತ ನಾಗಮಾರಪಳ್ಳಿಯವರ ಅಧ್ಯಕ್ಷತೆ ಅವಧಿಯಲ್ಲಿಯೂ ಬ್ಯಾಂಕ್‌ ಉತ್ತಮ ಸಾಧನೆ ಮಾಡಿದೆ. ಹಲವು ದಶಕಗಳ ಬಳಿಕ ಇದೀಗ ನಡೆದ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಸಹೋದರ ಅಮರ ಖಂಡ್ರೆ ಅವರ ಪೆನಾಲ್ ಜಯ ಸಾಧಿಸಿದ್ದು ಹೊಸ ಬೆಳವಣಿಗೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.

“ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ  ಡಿಸಿಸಿ ಬ್ಯಾಂಕಿನ ನಂಟು ಮೊದಲಿನಿಂದಲೂ ಇದೆ. ಸದ್ಯಕ್ಕೆ ನಾರಂಜಾ ಸಕ್ಕರೆ ಕಾರ್ಖಾನೆ (ಎನ್.ಎಸ್.ಎಸ್.ಕೆ) ಸಾಲದಲ್ಲಿ ಮುಳುಗಿ ಆರ್ಥಿಕ ಸಂಕಷ್ಟದಲ್ಲಿದೆ. ಆದ್ದರಿಂದ ಡಿ.ಸಿ.ಸಿ.ಬ್ಯಾಂಕಿನ ಹೊಸ ಆಡಳಿತ ಮಂಡಳಿ ಮೊದಲಿನಂತೆ ಸಹಕರಿಸಿದರೆ ನಾರಂಜಾ ಸಕ್ಕರೆ ಕಾರ್ಖಾನೆಯ ರೈತರ ಬಾಳು ಹಸನವಾಗುತ್ತದೆ. ಇಲ್ಲವಾದಲ್ಲಿ ಹಳಿಖೇಡ (ಬಿ) ಬಿ.ಎಸ್.ಎಸ್.ಕೆ. ಪರಿಸ್ಥಿತಿ ಉಂಟಾಗುವ  ಲಕ್ಷಣಗಳು ಮೇಲ್ನೋಟಕ್ಕೆ ಕಂಡು ಬರುತ್ತಿವೆ. ಈ ಬಗ್ಗೆ ಡಿಸಿಸಿ ಬ್ಯಾಂಕಿನ ಹೊಸ ಆಡಳಿತ ಮಂಡಳಿ ಯೋಚಿಸಿ ನಾರಂಜಾ ಸಕ್ಕರೆ ಕಾರ್ಖಾನೆ ಆರ್ಥಿಕ ಸುಧಾರಣೆಗೆ ಸಹಕರಿಸಬೇಕೆಂದು” ಕಬ್ಬು ಬೆಳೆಗಾರರ ಪರವಾಗಿ ಭಾರತೀಯ ಕಿಶಾನ್‌ ಸಂಘದ ಪದಾಧಿಕಾರಿಗಳು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಸಹಕಾರ ಖಾತೆಯಲ್ಲಿ ನುರಿತ, ಅನುಭವಿಗಳು. ಹೀಗಾಗಿ ಕಬ್ಬು ಬೆಳೆಗಾರರ ಸಹಾಯ ಹಸ್ತಕ್ಕಾಗಿ ಪುನಃ ಅವರ ಅಧ್ಯಕ್ಷತೆಯಲ್ಲಿಯೇ ಸಹಕಾರ ಸಕ್ಕರೆ ಕಾರ್ಖಾನೆ ಮುನ್ನಡೆಸಬೇಕು. ಇದಕ್ಕೆ ಡಿ.ಸಿ.ಸಿ. ಬ್ಯಾಂಕಿನ ಹೊಸ ಆಡಳಿತ ಮಂಡಳಿಯವರು ಸಹಕಾರ ಕೊಟ್ಟು ಸಕ್ಕರೆ ಕಾರ್ಖಾನೆ ಮುಂದುವರೆಸಿದರೆ ಕಬ್ಬು ಬೆಳೆಗಾರರ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿಶ್ವದ ಶೇ.20% ಜನರು ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ

ಜಿಲ್ಲಾ ಭಾರತೀಯ ಕಿಸಾನ್ ಸಂಘದ ಗೌರವಾಧ್ಯಕ್ಷ ವೈಜಿನಾಥ ನೌಬಾದೆ, ಜಿಲ್ಲಾಧ್ಯಕ್ಷ ಪ್ರಭು ಮೂಲಗೆ, ಕಾರ್ಯದರ್ಶಿ ಅಮೀತಕುಮಾರ, ನಿರ್ದೇಶಕ ಬಸವರಾಜ ಪಾಟೀಲ್ ಬೀರಿ (ಬಿ) ಅವರು ಜಂಟಿಯಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...