ಬೀದರ್‌ | ಒಳಮೀಸಲಾತಿ ಜಾರಿ ವಿಳಂಬ : ಮಾದಿಗ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ

Date:

ಒಳಮೀಸಲಾತಿ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್‌ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು.

ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಅರೆಬೆತ್ತಲೆ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದವರೆಗೆ ನಡೆಯಿತು.

ಪ್ರತಿಭಟನೆಯಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಅಲ್ಲಿ ಕೆಲ ಹೊತ್ತು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೆಲ ಕಾರ್ಯಕರ್ತರು ಕೇಶಮುಂಡನ ಮಾಡಿಸಿಕೊಂಡು ಸರ್ಕಾರ ವಿರುದ್ಧ ಆಕ್ರೋಶ ದಾಖಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ನೆಹರೂ ಕ್ರೀಡಾಂಗಣ, ಮಡಿವಾಳ ಮಾಚಿದೇವರ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿದರು. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

WhatsApp Image 2025 08 01 at 7.04.21 PM
ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ ಮಾತನಾಡಿ, ʼಕಳೆದ 35 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ. ಸುಪ್ರೀಂ ಕೋರ್ಟ್ ಪರಿಶಿಷ್ಟ ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ದತ್ತಾಂಶಗಳ ಆಧಾರದ ಮೇಲೆ ಆಯಾ ರಾಜ್ಯಗಳು ಒಳಮೀಸಲಾತಿ ಜಾರಿ ಮಾಡಿ ಎಂದು ತೀರ್ಪು ನೀಡಿದರೂ ರಾಜ್ಯ ಸರ್ಕಾರ ಕುಂಟು ನೆಪವೊಡ್ಡಿ ವಿಳಂಬ ನೀತಿ ಅನುಸರಿಸುತ್ತಿದೆʼ ಎಂದು ಖಂಡಿಸಿದರು.

ಮುಖಂಡರು ಮಾತನಾಡಿ, ʼಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿಯಲ್ಲಿವೆ. ಇದೇ ಆಗಸ್ಟ್ 11ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದೆ. ಸರ್ಕಾರ ವಿಳಂಬ ಮಾಡದೇ ಒಳಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದರೆ ಜನಾಕ್ರೋಶ ಉಗ್ರ ಸ್ವರೂಪ ತಾಳುತ್ತದೆʼ ಎಂದು ಎಚ್ಚರಿಸಿದರು.

ಒಳಮೀಸಲಾತಿ ಹೋರಾಟಗಾರರ ಮೇಲೆ ಹಾಕಲಾದ ರೌಡಿಶೀಟರ್ ಪ್ರಕರಣ ಹಿಂಪಡೆಯಬೇಕು. ಸುರಕ್ಷತಾ ಪರಿಕರ ಇಲ್ಲದೆ ಮ್ಯಾನ್‌ಹೋಲ್‌ಗೆ ಇಳಿಸಿದ ಘಟನೆ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

WhatsApp Image 2025 08 01 at 7.04.01 PM

ಇದನ್ನೂ ಓದಿ : ಈ ದಿನ ಸಂಪಾದಕೀಯ | ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ಹತ್ಯೆಗಳಲ್ಲವೇ?

ವಿವಿಧ ಸಂಘಟನೆಗಳ ಪ್ರಮುಖರಾದ ವಿಜಯಕುಮಾರ ಹಿಪ್ಪಳಗಾಂವ, ರಾಜು ಕಡ್ಯಾಳ, ಪ್ರಭುರಾವ ತಾಳಮಡಗಿ, ಕಮಲಾಕರ ಹೆಗಡೆ, ಪರಮೇಶ್ವರ ಕಾಳಮದರಗಿ, ಡೇವಿಡ್ ವಾಡೆಕರ್, ಪೀಟರ್ ಶ್ರೀಮಂಡಲ, ವಿಶಾಲ ಜೋಶಿ, ಜಯಶೀಲ ಮೇತ್ರೆ, ಪೀಟರ್ ಚಿಟಗುಪ್ಪ, ಜೈಶೀಲ ಕಲವಾಡೆ, ವೀರಶೆಟ್ಟಿ ಬಂಬುಳಗಿ, ದಯಾನಂದ ರೇಕುಳಗಿ, ಯುವರಾಜ ಬೆಂಡೆ, ತುಕಾರಾಮ ಲಾಡೆ, ಯೋಹಾನ್ ಡಿಸೋಜಾ, ಹರಿಹರ ಗೋಖಲೆ, ಸ್ವಾಮಿದಾಸ ಕೆಂಪೇನೂರ್, ಪ್ರದೀಪ ಹೆಗಡೆ, ವೀರಶೆಟ್ಟಿ, ಗೋರಖ ನಿಂಬೂರ, ರವಿ ಸೂರ್ಯವಂಶಿ
ವಿಜಯಕುಮಾರ ಸೂರ್ಯವಂಶಿ, ಸ್ವಾಮಿದಾಸ ಚಂಡಿಕೆ, ಲಾಲಪ್ಪ ನಿರ್ಣಾ, ಸಚಿನ ಅಂಬೆಸಿಂಗೆ, ರಾಜು ಸೋನೆ, ಜೀವನ ರಿಕ್ಕೆ ಸೇರಿದಂತೆ ವಿವಿಧ ತಾಲೂಕಿನ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...