ಬೀದರ್‌ | ಆಹಾರ ಸುರಕ್ಷತೆ, ಗುಣಮಟ್ಟ ಪರೀಕ್ಷಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಬೀದರ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆ ಹೋಟೆಲ್‌, ಉಪಹಾರ ಕೇಂದ್ರ, ಕುಡಿಯುವ ನೀರಿನ ಘಟಕಗಳು ತಲೆ ಎತ್ತಿದ್ದು, ಆಹಾರ ಸುರಕ್ಷತೆ ನಿಯಮಗಳೇ ಅನ್ವಯವಾಗುತ್ತಿಲ್ಲ. ಆದರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಕಂಡೂ ಕಾಣದಂತೆ ಮೌನವಹಿಸಿದ್ದಾರೆ ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಗುರುದಾಸ ಅಮದಾಲಪಾಡ ದೂರಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಮಂಗಳವಾರ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ʼಜಿಲ್ಲಾ ಹಾಗೂ ತಾಲ್ಲೂಕಿನ ಪ್ರತಿಯೊಂದು ಬೀದಿಯಲ್ಲಿ ತಿಂಡಿ ತಿನಿಸುಗಳು ಹಾಗೂ ಹೋಟೆಲ್‌ಗಳಲ್ಲಿ ಸಿದ್ಧಪಡಿಸುವ ಉಪಹಾರ ಗುಣಮಟ್ಟ ಇಲ್ಲ. ಇನ್ನು ನೈರ್ಮಲ್ಯ ಕಾಪಾಡದೇ ಇರುವುದು ಕಂಡು ಬರುತ್ತಿದೆ. ಇದನ್ನು ಪರೀಕ್ಷಿಸುವುದು ಜಿಲ್ಲಾ ಅಂಕಿತಾಧಿಕಾರಿಗಳ ಕರ್ತವ್ಯವಿದೆ. ಆದರೆ, ಕಲಬೆರಕೆ ಆಹಾರ ಪರೀಕ್ಷೆಗೆ ಒಳಪಡಿಸಿ ಕ್ರಮಕೈಗೊಳ್ಳದೆ ಹೋಟೆಲ್ ಮಾಲಿಕರ ಜೊತೆ ಕೈಜೋಡಿಸಿ ಭ್ರಷ್ಟಾಚಾರದಲ್ಲಿ ತೊಡಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆʼ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಹೋಟೆಲ್ ವ್ಯಾಪಾರಿಗಳು, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಬೀದಿ ಬದಿಯ ತಿಂಡಿ ತಿನಿಸು ತಯ್ಯಾರಿಸುವ ಸಣ್ಣಪುಟ್ಟ ವ್ಯಾಪಾರಿಗಳು ಆಹಾರ ಸುರಕ್ಷತೆಯ ಇಲಾಖೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು. ಆದರೆ ಹಲವು ಕಡೆಯಲ್ಲಿರುವ ತಿಂಡಿ ತಿನಿಸು ತಯಾರಿಕಾ ಅಂಗಡಿಗಳು ಆಹಾರ ಸುರಕ್ಷತೆ ನಿಯಮಗಳು ಗಾಳಿಗೆ ತೂರಿ ಮನಬಂದಂತೆ ಆಹಾರ ಸಿದ್ಧಪಡಿಸುತ್ತಿದ್ದಾರೆʼ ಎಂದು ದೂರಿದರು.

ಇದನ್ನೂ ಓದಿ : ಬೀದರ್‌ | ಪ್ರೀತಿಸುವಂತೆ ಯುವಕನಿಂದ ಕಿರುಕುಳ : ಅಪ್ರಾಪ್ತೆ ನೇಣಿಗೆ ಶರಣು

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಲಾಖೆ ಅಂಕಿತಾಧಿಕಾರಿ ಸಂತೋಷ ಕಾಳೆ ಅವರ ನಿರ್ಲಕ್ಷ್ಯದಿಂದ ಜಿಲ್ಲೆಯ ಜನರು ಅಸುರಕ್ಷಿತ ಆಹಾರ ಹಾಗೂ ನೀರು ಸೇವಿಸಿ ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...