ಅತಿವೃಷ್ಟಿಯಿಂದ ಹಾಳಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಶೀಘ್ರ ಬೆಳೆ ಹಾನಿ ಪರಿಹಾರ ವಿತರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷಕುಮಾರ್ ಗುದಗೆ ಆಗ್ರಹಿಸಿದ್ದಾರೆ.
ʼಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆಗಳು ಸಂಪೂರ್ಣ ಹಾಳಾಗಿವೆ. ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್‌ಗೆ 8,500 ರೂ. ಪರಿಹಾರ ಹಾಗೂ ಹೆಚ್ಚುವರಿಯಾಗಿ 8,500 ರೂ. ನೀಡುವುದಾಗಿ ಘೋಷಿಸಿತು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈ ಹಿಂದೆ ದೀಪಾವಳಿ ಒಳಗಾಗಿ ಬೆಳೆ ಪರಿಹಾರ ಜಮೆ ಮಾಡಲಾಗುವುದು ಎಂದು ತಿಳಿಸಿದರು. ಆದರೆ, ಇಲ್ಲಿಯವರೆಗೆ ಬೆಳೆ ಕಳೆದುಕೊಂಡ ಎಲ್ಲ ರೈತರಿಗೆ ಪರಿಹಾರ ಜಮೆಯಾಗಿಲ್ಲʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ʼಈ ಬಾರಿ ರೈತರು ದೀಪಾವಳಿ ಹಬ್ಬದ ಒಳಗಾಗಿ ಪರಿಹಾರ ಹಣ ಜಮೆಯಾಗುತ್ತದೆ. ಹಬ್ಬ ಖುಷಿಯಿಂದ ಮಾಡಬಹುದು ಎಂದು ಆಶಾಭಾವನೆ ಇಟ್ಟುಕೊಂಡಿದ್ದರು. ಕೆಲ ತಾಲೂಕಿನ ರೈತರಿಗೆ ಮಾತ್ರ ಹಣ ಜಮೆಯಾಗಿದೆ. ಹೀಗಾಗಿ ಎಲ್ಲ ತಾಲೂಕಿನ ರೈತರಿಗೆ ಯಾವುದೇ ತಾರತಮ್ಯ ಮಾಡದೆ ಶೀಘ್ರದಲ್ಲಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಪರಿಹಾರ ಹಣ ರೈತರ ಖಾತೆಗೆ ಜಮೆ ಪಾವತಿಸಬೇಕುʼ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಬೀದರ್ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆ ಮಾಡಿ : ಶಾಸಕ ಶೈಲೇಂದ್ರ ಬೆಲ್ದಾಳೆ





