ಬೀದರ್‌ | ಮಹಾನಗರ ಪಾಲಿಕೆಯಲ್ಲಿನ ಅವ್ಯವಸ್ಥೆ ಸುಧಾರಣೆಗೆ ಆಗ್ರಹ

Date:

ಬೀದರ್ ಮಹಾನಗರ ಪಾಲಿಕೆಯಲ್ಲಿ ಕಾಣಿಸಿಕೊಂಡಿರುವ ಅವ್ಯವಸ್ಥೆ ಮತ್ತು ನಾಗರಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಕುರಿತು ಸಾಮಾಜಿಕ ಕಾರ್ಯಕರ್ತ ಜಗದೀಶ್ವರ ವಿ. ಬಿರಾದಾರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಗರಸಭೆಯ ಕಚೇರಿಯಲ್ಲಿ ಇ-ಖಾತಾ ಸೇರಿದಂತೆ ಹಲವು ಕೆಲಸಗಳು ತಿಂಗಳಗಳಿಂದ ನಿಲುಗಡೆಯಾಗಿವೆ ಎಂದು ಆರೋಪಿಸಲಾಗಿದೆ. ನಾಗರಿಕರು ತಮ್ಮ ನಿವೇಶನಗಳ ದಾಖಲೆಗಾಗಿ ಕಚೇರಿಗೆ ಅಲೆದಾಡಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ʼಕಳೆದ ತಿಂಗಳು ಮಹಾನಗರ ಪಾಲಿಕೆಯ ಆಯುಕ್ತರಾಗಿ ಐಎಎಸ್‌ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ. ಆದರೆ ಅವರಿಗೆ ಇನ್ನೂ ಸಹಿ ಮಾಡುವ ಅಧಿಕಾರ ನೀಡಿಲ್ಲವೆಂಬ ಮಾಹಿತಿ ಕಚೇರಿಯೊಳಗಿನಿಂದ ತಿಳಿದು ಬಂದಿದೆ. ಇದು ಆಡಳಿತದ ವೈಫಲ್ಯ ಮತ್ತು ಸಾರ್ವಜನಿಕರಿಗೆ ಅನ್ಯಾಯʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆಯ ವಿವಿಧ ಹಂತಗಳ ನೌಕರರ ವರ್ತನೆ ಜನರಲ್ಲಿ ಅಸಮಾಧಾನವನ್ನು ಹುಟ್ಟಿಸಿದೆ. ಸಾಮಾನ್ಯ ನಾಗರಿಕ ವೇಷದಲ್ಲಿ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿದರೆ ನಿಜಸ್ಥಿತಿ ಗೊತ್ತಾಗುತ್ತದೆ. ನಗರಸಭೆಯು ಪೌರಾಡಳಿತ ಇಲಾಖೆಯ ಅಡಿಯಲ್ಲಿ ಬರುವುದರಿಂದ, ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ; ಚಾಟಿ ಏಟು ತಿಂದ ಶಾಸಕ ಶರಣು ಸಲಗರ

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಓಂಪ್ರಕಾಶ ರೊಟ್ಟೆ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...