ಬೀದರ್‌ | ಬೀದಿಯಲ್ಲಿ ವಾಸಿಸುವ ಅಲೆಮಾರಿಗಳಿಗೆ ಶಾಶ್ವತ ನಿವೇಶನ ಕಲ್ಪಿಸಲು ಆಗ್ರಹ

Date:

ಕಳೆದ 40 ವರ್ಷಗಳಿಂದ ನೌಬಾದ್‌ನ ಸಮೀಪದ ಚೌಳಿ ಕಮಾನ್ ಹತ್ತಿರ ವಾಸಿಸುತ್ತಿರುವ 50 ಕ್ಕೂ ಹೆಚ್ಚಿನ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ವಿಶ್ವಕ್ರಾಂತಿ ದಿವ್ಯಪೀಠ ಸಂಘಟನೆಯ ನೇತೃತ್ವದಲ್ಲಿ ಅಲೆಮಾರಿಗಳು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼ2017ರಲ್ಲಿ ಅಂದಿನ ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರು 63 ಜನ ಅಲೆಮಾರಿ ಸಮುದಾಯದವರಿಗೆ ತಾಲೂಕಿನ ಗೋರನಳ್ಳಿ ಸಮೀಪ 2 ಎಕರೆ ಸರ್ಕಾರಿ ಜಮೀನಿನಲ್ಲಿ ವಾಸಿಸಲು ನಿವೇಶನ ಮಂಜೂರು ಮಾಡುವಂತೆ ನಗರಸಭೆಗೆ ಸೂಚಿಸಿದರು. ಆದರೆ, ಇಲ್ಲಿಯವರೆಗೆ ನಗರಸಭೆ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿವೇಶನ ಹಂಚಿಕೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶಾಶ್ವತ ನಿವೇಶನ ಇಲ್ಲದೇ ಖಾಸಗಿ ಜಾಗದಲ್ಲಿ ವಾಸಿಸುವ ಅಲೆಮಾರಿಗಳಿಗೆ ಒಕ್ಕಲೆಬ್ಬಿಸುವ ಘಟನೆಗಳು ನಡೆದಿವೆ. ಇತ್ತೀಚೆಗೆ ಕೆಲವರು ಬಂದು ಜಾಗ ಖಾಲಿ ಮಾಡಿ, ಇಲ್ಲವಾದರೆ ಜೆಸಿಬಿಗಳಿಂದ ತೆರವುಗೊಳಿಸಲಾಗುವುದು ಎಂದು ಹೆದರಿಸಿದ್ದಾರೆ. ಇದರಿಂದ ಅಲೆಮಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕೂಡಲೇ ಜಿಲ್ಲಾಡಳಿತ ಅವರ ನೆರವಿಗೆ ಧಾವಿಸಿ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕುʼ ಎಂದು ಆಗ್ರಹಿಸಿದರು.

ʼಕಳೆದ ಹತ್ತಾರು ವರ್ಷಗಳಿಂದ ಬಿಸಿಲು, ಮಳೆ, ಚಳಿ ಎನ್ನದೇ ಕತ್ತಲಲ್ಲಿ ಬಾಣಂತಿಯರು, ಮಹಿಳೆಯರು, ಪುಟ್ಟ ಮಕ್ಕಳು, ವಯಸ್ಸಾದವರು ಅಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ಏಕಾಏಕಿ ಅಲ್ಲಿಂದ ತೆರವುಗೊಳಿಸಿದರೆ ಅವರು ಬೀದಿಪಾಲಾಗುತ್ತಾರೆ. ಜಿಲ್ಲಾಡಳಿತ ಅವರಿಗೆ ಶಾಶ್ವತ ನಿವೇಶನ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಡಿಟಿಐ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ!

ಈ ಸಂದರ್ಭದಲ್ಲಿ ವಿಶ್ವ ಕ್ರಾಂತಿ ದಿವ್ಯಪೀಠ ಸಂಘಟನೆಯ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹಾಗೂ ಅಲೆಮಾರಿ ಸಮುದಾಯದವರು ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...