ಬೀದರ್ | ಹಾಲು ಶುದ್ಧೀಕರಣ ಘಟಕದ ತ್ಯಾಜ್ಯ ವಿಲೇವಾರಿಗೆ ಸ್ಥಳೀಯರ ಆಗ್ರಹ

Date:

ಕಮಲನಗರ ತಾಲೂಕಿನ ಠಾಣಾ ಕುಶನೂರ ಗ್ರಾಮದಲ್ಲಿರುವ ಹಾಲು ಶುದ್ಧೀಕರಣ ಘಟಕ (ಕೆಎಂಎಫ್)ದಿಂದ ಹೊರಸೂಸುವ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿಲ್ಲ. ಪರಿಣಾಮ ಸುತ್ತಲಿನ ನಿವಾಸಿಗಳಿಗೆ ಅನೈರ್ಮಲ್ಯ ಕಾಡುತ್ತಿದೆ. ಕೂಡಲೇ ಕ್ರಮ ಕೈಗೊಂಡು ತ್ಯಾಜ್ಯ ವಿಲೇವಾರಿ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಬೀದರ್ ಜಿಲ್ಲೆಯ ಔರಾದ ಹಾಗೂ ಕಮಲನಗರ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ಸಂಗ್ರಹವಾದ ಹಾಲು ಠಾಣಾ ಕುಶನೂರ ಗ್ರಾಮದ ಕೆಎಂಎಫ್ ಶುದ್ಧೀಕರಣ ಘಟಕದಲ್ಲಿ ಶೇಖರಣೆಯಾಗುತ್ತವೆ. ಈ ಶುದ್ಧೀಕರಣ ಘಟಕ ಗ್ರಾಮದಲ್ಲಿ ಅಂಚಿನಲ್ಲೇ ಇದ್ದು, ಘಟಕದ ತ್ಯಾಜ್ಯ ನೀರನ್ನು ರಸ್ತೆ ಪಕ್ಕದ ಚರಂಡಿಗಳಿಗೆ ಹರಿಸಲಾಗುತ್ತಿದೆ. ಇದರಿಂದ ಸುತ್ತಲಿನ ನಿವಾಸಿಗಳಿಗೆ, ಅಂಗಡಿ ಮುಂಗಟ್ಟುಗಳ ವ್ಯಾಪಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗ್ಗೆ ಕಳೆದ ಜನವರಿಯಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಕ್ರಮ ಕೈಗೊಳ್ಳುವಂತೆ ಕೇಳಿದ್ದೆವು. ನಮ್ಮ ಮನವಿಗೆ ಸ್ಪಂದಿಸಿದ ಪಿಡಿಒ ಕೆಎಂಎಫ್ ಶುದ್ಧೀಕರಣ ಘಟಕಕ್ಕೆ ನೋಟೀಸ್ ನೀಡಿದ್ದಾರೆ. ಆದರೆ, ಕೆಎಂಎಫ್‌ ಯಾವುದೇ ಪ್ರತಿಕ್ರಿಯೆ ನೀಡದೆ, ತ್ಯಾಜ್ಯವನ್ನು ಚರಂಡಿಗೆ ಹರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ತ್ಯಾಜ್ಯ ನೀರು ಬರದಂತೆ ತಡೆಯಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಿವಾಸಿಗಳಾದ ರವೀಂದ್ರ ಕಾಶಿನಾಥ್, ವೀರಭದ್ರ ಬಿರಾದಾರ, ಸಂತೋಷ್ ಜೀರ್ಗೆ, ಸುನಿಲ್ ವಾಘಮಾರೆ, ಜೈರಾಜ ಖೇಮಶೆಟ್ಟಿ, ಮಾರುತಿ ಜೀರ್ಗೇ, ಬಾಬುರಾವ್ ಜೀರ್ಗೆ, ಸಂತೋಷ ಸ್ವಾಮಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...