ಬೀದರ್‌ | ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಆಗ್ರಹ

Date:

ಅರಣ್ಯ ಭೂಮಿ ಸಾಗುವಳಿದಾರರಿಗೆ ಒಕ್ಕಲೆಬ್ಬಿಸುತ್ತಿರುವುದು ತಡೆಗಟ್ಟಿ ಅರಣ್ಯ ಅಧಿಕಾರಿಗಳ ಕಿರುಕುಳ ನಿಲ್ಲಿಸಿ ರೈತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ಕುರಿತು ನಗರದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಎದುರು ಧರಣಿ ನಡೆಸಿದರು. ನಂತರ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಚೇರಿಯ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ʼಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಾ ಅರಣ್ಯ ಭೂಮಿ, ಸರ್ಕಾರಿ ಭೂಮಿ ಮೇಲೆ ಅವಲಂಬಿತರಾಗಿ ಉಪಜೀವನ ನಡೆಸುತ್ತಿರುವ ಜಿಲ್ಲೆಯ ವಿವಿಧ ಗ್ರಾಮದ ಬಡ ಸಾಗುವಳಿದಾರರಿಗೆ ಒಕ್ಕಲೆಬ್ಬಿಸುತ್ತಿರುವುದು ತಕ್ಷಣವೇ ನಿಲ್ಲಿಸಿ ಸಾಗುವಳಿದಾರರಿಗೆ ಹಕ್ಕು ಪತ್ರ ಕೊಡಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು. ಪ್ರತಿ ಕ್ವಿಂಟಲ್ ತೊಗರಿಗೆ 14,500 ರೂಪಾರಿ ಬೆಂಬಲ ಬೆಲೆ ನಿಗದಿ ಮಾಡಬೇಕು. ಹಾಲು ಉತ್ಪಾದಕರ ಸಹಕಾರ ಸಂಘಗಳು ಕೆಎಂಎಫ್ ಮಾದರಿಯಲ್ಲಿ ತೊಗರಿ ಬೆಳೆಗಾರರ ಸಂರಕ್ಷಣೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕಲ್ಯಾಣ ಕರ್ನಾಟಕ ಬೀದರ್, ಕಲಬುರಗಿ ಜಿಲ್ಲೆಯಲ್ಲಿ ತೇವಾಂಶದ ಕೊರತೆಯಿಂದ ಒಣಗಿದ ತೊಗರಿಗೆ ಪ್ರತಿ ಎಕರೆಗೆ 25,000 ರೂಪಾಯಿ ಪರಿಹಾರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!

ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾಧ್ಯಕ್ಷ ಸೈಯದ್‌ ಇಸಾಮೊದ್ದೀನ್‌, ಕಾರ್ಯದರ್ಶಿ ದೇವಾನಂದ ಗಾಯಕವಾಡ ಸೇರಿದಂತೆ ಪ್ರಮುಖರಾದ ಖಾಜಾಮಿಯ್ಯಾ ಶೇರಿಕಾರ್‌, ಪರಮೇಶ್ವರ ಕಾಂತಾ,‌ ಜಾಫರ್‌ ಖಾನ್ ಹಾಗೂ ರೈತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...