ಬೀದರ್ | ಎಲ್ಲ ಸಂಸ್ಥೆಗಳಲ್ಲೂ ಕನ್ನಡ ನಾಮಫಲಕ ಅಳವಡಿಸುವಂತೆ ಕರವೇ ಆಗ್ರಹ

Date:

ಸರ್ಕಾರದ ಅಧೀನದಲ್ಲಿರುವ ಕೈಗಾರಿಕೆ, ಶಿಕ್ಷಣ, ಸಾರಿಗೆ, ವ್ಯಾಪಾರ ಕಚೇರಿ ಹಾಗೂ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕಡೆಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಲು ಸೂಚಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಬೀದರ್ ಜಿಲ್ಲೆಯ ಔರಾದ ಪಟ್ಟಣ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದ ಕರವೇ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಪಂಚಾಯತಿ ಸಿಇಒಗೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ. “ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಆದರೆ, ಗಡಿ ತಾಲೂಕು ಔರಾದದಲ್ಲಿ ಅನ್ಯಭಾಷೆಯ ಪ್ರಭಾವ ದಟ್ಟವಾಗಿದ್ದು, ಕನ್ನಡ ಕುಂಠಿತವಾಗುತ್ತಿದೆ. ಕೇವಲ ಅಂಗಡಿ ಮುಂಗಟ್ಟುಗಳ ನಾಮಫಲಕ ಬದಲಾದರೆ ಕನ್ನಡ ಅನುಷ್ಠಾನಕ್ಕೆ ಬರುವುದಿಲ್ಲ. ತಾಲೂಕಿನ ಶಾಲಾ ಕಾಲೇಜು, ವಾಹನ, ಬ್ಯಾಂಕ್, ವಾಣಿಜ್ಯ, ನ್ಯಾಯಾಂಗ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಕನ್ನಡದಲ್ಲಿ ನಾಮ ಫಲಕಗಳನ್ನು ಅಳವಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕನ್ನಡ ಸಾಹಿತ್ಯ ಪರಿಷತ್ತು, ಜನಪದ ಸಾಹಿತ್ಯ ಪರಿಷತ್ತು ಮತ್ತು ಇತರ ಕನ್ನಡ ಸಂಘ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು ಕನ್ನಡ ಅನುಷ್ಠಾನಕ್ಕೆ ತರಲು ಶ್ರಮಿಸಬೇಕು. ವಾರದೊಳಗೆ ಕನ್ನಡ ನಾಮ ಫಲಕಗಳನ್ನು ಹಾಕದಿದ್ದಲ್ಲಿ, ಜುಲೈ 18ರಂದು ಅನ್ಯ ಭಾಷೆಯ ಫಲಕಗಳಿಗೆ ಮಸಿ ಬಳಿಯಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಅನೀಲ ದೇವಕತ್ತೆ, ಗೌರವಾಧ್ಯಕ್ಷ ಬಸವರಾಜ ಶೇಟಕರ, ನಗರ ಘಟಕದ ಅಧ್ಯಕ್ಷ ಬಾಲಾಜಿ ದಾಮಾ, ಮಹೇಶ ಹಳೆಂಬುರೆ, ಪಪ್ಪು ಹಕ್ಕೆ, ಅರ್ಜುನ್ ಭಂಗೆ ,ಧರ್ಮ ಕಾಂಬಳೆ ,ದೀಲಿಪ ಹಕ್ಕೆ ,ಮೇಹಬುಬ ಭಾಗವಾನ, ಯೋವನ ಕಾಂಬಳೆ, ಕಪೀಲ ಚೌವಾಣ, ಮುನ್ನಾ ಹಕ್ಕೆ ,ಕಪೀಲ‌ ಹತ್ನೋಳೆ, ಸಂಗಮೇಶ ಮೇತ್ರೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...