ಬೀದರ್‌ | ಕಟ್ಟಡ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯ

Date:

ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ, ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ರವರಿಗೆ ಮನವಿ ಸಲ್ಲಿಸಿ, ಜಿಲ್ಲೆಯ ಕಟ್ಟಡ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ದೊಡ್ಡ ಕಾರ್ಖಾನೆಗಳಿಲ್ಲದೆ ಕೃಷಿಯೇ ಪ್ರಮುಖ ವೃತ್ತಿಯಾಗಿದ್ದು, ತಾಂತ್ರಿಕ ಯಂತ್ರೋಪಕರಣಗಳ ಬಳಕೆಯಿಂದಾಗಿ ಹಳ್ಳಿಗಳ ಕಾರ್ಮಿಕರು ನಗರ, ಪಟ್ಟಣಗಳಿಗೆ ವಲಸೆ ಬಂದು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ನಿಜವಾದ ಕಾರ್ಮಿಕರು ಕಲ್ಯಾಣ ಮಂಡಳಿಯೊಡನೆ ನೋಂದಣಿಯಾಗದೇ ಉಳಿದಿದ್ದು, ಕೆಲವರು ಮಾತ್ರ ಆನ್‌ಲೈನ್ ಮೂಲಕ ಸೌಲಭ್ಯ ಪಡೆದಿದ್ದಾರೆ ಎಂದು ಸಂಘವು ದೂರಿದೆ.

ಕಾರ್ಮಿಕ ಇಲಾಖೆ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಮಂಜೂರಾದರೂ, ಇನ್ನೂ ನಿರ್ಮಾಣ ಪ್ರಕ್ರಿಯೆ ಪ್ರಾರಂಭವಾಗದಿರುವುದರ ಬಗ್ಗೆ ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೀದರ್ ಜಿಲ್ಲೆಯಲ್ಲಿ ಸ್ವಂತ ಕಾರ್ಮಿಕರ ಕಚೇರಿ ನಿರ್ಮಿಸಬೇಕು. ಕಾರ್ಮಿಕರು ಸೇರುವ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ಮತ್ತು ಶೌಚಾಲಯಗಳ ವ್ಯವಸ್ಥೆ ಮಾಡಬೇಕು. ಹೊಸ ನೋಂದಣಿ ಮತ್ತು ನವೀಕರಣ ಅರ್ಜಿಗಳನ್ನು ಕಾರ್ಮಿಕ ಕಚೇರಿಯಲ್ಲೇ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಅತಿವೃಷ್ಟಿಯಿಂದ ಕೆಲಸವಿಲ್ಲದ ಕಾರ್ಮಿಕರಿಗೆ ಪರಿಹಾರ ಧನ ಘೋಷಿಸಬೇಕುʼ ಎಂದು ಬೇಡಿಕೆಯಿಟ್ಟರು.

ಇದನ್ನೂ ಓದಿ : ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ : ಸಚಿವ ಈಶ್ವರ ಖಂಡ್ರೆ

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಎಂ.ಡಿ. ಶಫಾಯತ್ ಅಲಿ, ತಾಲೂಕಾ ಕಾರ್ಯದರ್ಶಿ ಪ್ರಭು ತಗಣಿಕರ್ ಬಗದಲ್ ಹಾಗೂ ಸದಸ್ಯೆ ಜೈಶೀಲ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...