ಬೀದರ್‌ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.1ರಂದು ಅರೆಬೆತ್ತಲೆ ಮೆರವಣಿಗೆ; ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Date:

ಮೂವತ್ತು ವರ್ಷಗಳ ಹೋರಾಟದ ಫಲವಾಗಿ ಕೇಂದ್ರ ಸರ್ಕಾರದ ಸಹಕಾರದಿಂದ ಸುಪ್ರಿಂಕೋರ್ಟ್ ಒಳ ಮೀಸಲಾತಿ ಜಾರಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ಒಂದು ವರ್ಷ ಗತಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಜಾರಿಗೆ ಕಾಲಹರಣ ಮಾಡುತ್ತಿದೆ ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಾಧ್ಯಕ್ಷ ಫರ್ನಾಂಡೀಸ್ ಹಿಪ್ಪಳಗಾಂವ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ʼಆಯಾ ರಾಜ್ಯಗಳ ದತ್ತಾಂಶದ ಆಧಾರದ ಮೇಲೆ ಒಳ ಮೀಸಲಾತಿ ಜಾರಿಗೊಳಿಸಿ ಎಂದರೂ ಸಚಿವ ಎಚ್.ಸಿ.ಮಹಾದೇವಪ್ಪ ಅವರ ಕುತಂತ್ರದಿಂದ ಸಿಎಂ ಅವರು ಜಾರಿಗೆ ಮೀನಮೇಷ ಎಣಿಸುತ್ತಿದ್ದಾರೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಆಗಸ್ಟ್‌ 1ಕ್ಕೆ ಒಳಮೀಸಲಾತಿ ಜಾರಿಗೆ ಆದೇಶಿಸಿ ಒಂದು ವರ್ಷ ಪೂರ್ಣವಾಗುತ್ತದೆ. ಸುಪ್ರಿಂಕೋರ್ಟ್‌ ಆದೇಶದಂತೆ ತೆಲಂಗಾಣ ಸೇರಿದಂತೆ ಕೆಲ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಆದರೆ, ರಾಜ್ಯದಲ್ಲಿ ಮಾತ್ರ ಒಳಮೀಸಲಾತಿ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಇದನ್ನು ನೋಡಿ ಸುಮ್ಮನಿರುವ ಬದಲು ಮಾದಿಗ ಸಮುದಾಯದ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಬರಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಾವು ಜಾತಿ ಜನಗಣತಿ ಮಾಡಿ ಎಂದು ಹೇಳಿಲ್ಲ. ಆದರೂ ಸರ್ಕಾರ ಮಾಡುತ್ತಿದೆ. ಇದುವರೆಗೆ ಕೇವಲ ಶೇ80ರಷ್ಟು ಜಾತಿ ಜನಗಣತಿ ಮಾತ್ರ ಮಾಡಲಾಗಿದೆ. ನಮ್ಮ ಪಾಲಿನ ಶೇ 6 ರಷ್ಟು ಒಳಮೀಸಲಾತಿ ಜಾರಿ ಮಾಡಿ ಎಂದರೂ ಸರ್ಕಾರಕ್ಕೆ ನಮ್ಮ ಕೂಗು ಕೇಳಿಸುತ್ತಿಲ್ಲ. ಹೀಗಾಗಿ ಒಕ್ಕೂಟದ ವತಿಯಿಂದ ಆಗಸ್ಟ್ 1ರಂದು ಬೆಳಿಗ್ಗೆ 11 ಗಂಟೆಗೆ ಅರೆಬೆತ್ತಲೆ ಮೆರವಣಿಗೆ ಮೂಲಕ ಸರ್ಕಾರದ ಶವಯಾತ್ರೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಲಾಗುವುದುʼ ಎಂದರು.

ಇದನ್ನೂ ಓದಿ : ಉಪರಾಷ್ಟ್ರಪತಿ ಆಯ್ಕೆ ಹೇಗೆ ನಡೆಯುತ್ತದೆ? ಚುನಾವಣಾ ಮಾನದಂಡಗಳೇನು?

ಮಾದಿಗ ಸಂಘಟನೆಗಳ ಒಕ್ಕೂಟದ ಪ್ರಮುಖರಾದ ವಿಜಯಕುಮಾರ ಹಿಪ್ಪಳಗಾಂವ, ಕಮಲಾಕರ ಹೆಗಡೆ, ಜಾಫೆಟರಾಜ ಕಡ್ಯಾಳ, ವೀರಶೆಟ್ಟಿ, ರವೀಂದ್ರ ಸೂರ್ಯವಂಶಿ,  ಜೈಶೀಲ ಮೇತ್ರೆ, ಡೇವಿಡ್ ವಾಡೆಕರ, ವಿಶಾಲ ಜೋಶಿ, ಹರೀಶ ಗಾಯಕವಾಡ, ಅಶೋಕ ಚಾಂಗಲೇರಾ, ದಯಾನಂದ ರೇಕುಳಗಿ, ಸಿದ್ರಾಮ ನಾವದಗೇರಿ, ಸನ್ನಿ ಹಿಪ್ಪಳಗಾಂವ, ಗುಂಡಪ್ಪ ಕೋಟೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...