ಬೀದರ್‌ | ಕೆಆರ್‌ಐಡಿಎಲ್ ಕಾರ್ಯ ನಿರ್ವಾಹಕ ಹುದ್ದೆ ನೇಮಕಾತಿಗೆ ಆಗ್ರಹ

Date:

ಬೀದರ್ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕ‌ಚೇರಿ(ಕೆಆರ್‌ಐಡಿಎಲ್)ಯಲ್ಲಿ ಕಾರ್ಯನಿರ್ವಾಹಕ ಅಭಿಯಂತರ ಹುದ್ದೆ ನೇಮಕಾತಿ ಮತ್ತು ಮೂಲ ಹುದ್ದೆಯಲ್ಲಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪೋಲಾ ಅಭಿಷೇಕ ಅವರನ್ನು ವರ್ಗಾಯಿಸುವಂತೆ ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾ ಘಟಕ ಒತ್ತಾಯಿಸಿದೆ.

ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾ ಘಟಕ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಬೀದರ್ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕಾರ್ಯನಿರ್ವಾಹಕ ಅಭಿಯಂತರರ ಹುದ್ದೆ ಖಾಲಿಯಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಖಾಲಿ ಹುದ್ದೆಯನ್ನು ಭರ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರು ಸ್ಥಳೀಯರಾಗಿರುವ ಕಾರಣ ಕಚೇರಿಗೆ ಸರಿಯಾದ ಸಮಯಕ್ಕೆ ಬರುವುದಿಲ್ಲ. ಸಾರ್ವಜನಿಕರು ಕೆಲಸದ ನಿಮಿತ್ತ ಕಚೇರಿಗೆ ತೆರಳಿದರೆ ಅಧಿಕಾರಿಗಳು ಇರುವುದಿಲ್ಲ. ಕರೆ ಮಾಡಿದರೆ ಹಾರಿಕೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು.

ಸದರಿ ಇಲಾಖೆಯಿಂದ ಬೀದರ ಜಿಲ್ಲೆಯಲ್ಲಿ ಕಳಪೆ ಮಟ್ಟದ ಕಾಮಗಾರಿಗಳು ನಡೆದಿವೆ. ಈ ಬಗ್ಗೆ ಸಂಬಂಧಪಟ್ಟ ಮೇಲಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಸರ್ಕಾರಿ ಶಾಲೆಯ ಮೂಲ ಸೌಕರ್ಯಕ್ಕೆ ಎಸ್‌ಐಒ ಆಗ್ರಹ

ನಮ್ಮ ಮನವಿಗೆ ಸ್ಪಂದಿಸಿ ಒಂದು ವಾರದೊಳಗಾಗಿ ಖಾಲಿ ಹುದ್ದೆ ನೇಮಕಾತಿ ಮಾಡಬೇಕು. ಹಾಗೂ ಸದರಿ ಅಧಿಕಾರಿಯನ್ನು ಬೇರೆಡೆ ವರ್ಗಾವಣೆ ಮಾಡಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಸಾಯಿ ಸಿಂಧೆ, ಪ್ರಮುಖರಾದ ಬಸವರಾಜ ಬಾವಿದೊಡ್ಡಿ, ವಿನೋದಕುಮಾರ ಶಿಂಧೆ, ಮಹೇಂದ್ರ ಕುಮಾರ್ ಹೊಸಮನಿ, ಶಿಂಧೆ, ಶಿವರಾಜ ಮಡಿವಾಳ, ಗುರು ನೇಮತಾಬಾದ್, ಧನರಾಜ್ ಮೇತ್ರೆ, ಪ್ರವೀಣ್ ಮೊರೆ, ಆಕಾಶ ತ್ರಿಮುಖ, ರಾಹುಲ್ ಡಾಂಗೆ, ರಮೇಶ, ಪುಟ್ಟರಾಜ ದೀನೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...