ಬೀದರ್‌ | ಫೆ.24ಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕಚೇರಿ ಎದುರು ಧರಣಿ : ಶರಣಬಸಪ್ಪ ಮಮಶೆಟ್ಟಿ

Date:

ಬಗರ್ ಹುಕುಂ ಸಾಗುವಳಿದಾರರರಿಗೆ ಹಕ್ಕು ಪತ್ರ ಕೊಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.24ರಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಕಚೇರಿ ಎದುರು ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಅರಣ್ಯ ಸಚಿವರ ಹಾಗೂ ಸಂಸದ ಸಾಗರ್‌ ಖಂಡ್ರೆ ಹಾಗೂ ಎಲ್ಲ ಶಾಸಕರ ಮನೆ ಮುಂದೆ ಧರಣಿ ನಡೆಸಲಾಗುವುದುʼ ಎಂದು ಹೇಳಿದರು.

ಪ್ರತಿ ಕ್ವಿಂಟಲ್ ತೊಗರಿಗೆ ₹12,500 ಬೆಂಬಲ ಬೆಲೆಯನ್ನು ಕೊಡುವಂತೆ, ಅರಣ್ಯ ಭೂಮಿ ಸಾಗುವಳಿದಾರರಿಗೆ ಒಕ್ಕಲೆಬ್ಬಿಸುತ್ತಿರುವುದನ್ನು ತಡೆಗಟ್ಟುವಂತೆ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ಕೊಡಬೇಕು. ನೆಟೆ ರೋಗದಿಂದ ಒಣಗುತ್ತಿರುವ ತೊಗರಿ ಬೆಳೆ ಸಮೀಕ್ಷೆ ಮಾಡಬೇಕು. ನೆಟೆ ರೋಗದಿಂದ ಒಣಗಿದ ತೊಗರಿಗೆ ಎಕರೆಗೆ ₹25 ಸಾವಿರ ಪರಿಹಾರ ಕೊಡಬೇಕು. ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸುತ್ತಿರುವ ಅಧಿವೇಶನದಲ್ಲಿ ₹30 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ತೊಗರಿ ಬೆಳಗಾರರ ನೆರವಿಗೆ ರಾಜ್ಯ ಸರ್ಕಾರ ಬರಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಗಳಿಂದ ಜಂಟಿಯಾಗಿ ಧರಣಿ ಹಮ್ಮಿಕೊಳ್ಳಲಾಗಿದೆ. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಕಲಬುರಗಿ ಜಿಲ್ಲೆಯ ಚಿಂಚೋಳಿ, ಕಾಳಗಿ, ಬೀದರ್‌ ಜಿಲ್ಲೆಯಲ್ಲಿ ಬಡ ರೈತರಿಗೆ ಕೊಡುತ್ತಿರುವ ಕಿರುಕುಳ ತಡೆಯಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಎಟಿಎಂ ದರೋಡೆ ಪ್ರಕರಣ: ಆರೋಪಿಗಳ ಫೋಟೊ ಬಿಡುಗಡೆ; ಮಾಹಿತಿ ಕೊಟ್ಟವರಿಗೆ ₹5 ಲಕ್ಷ ಬಹುಮಾನ!

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ಸೈಯದ್ ಇಸಾಮೊದ್ದಿನ್, ಜಿಲ್ಲಾ ಕಾರ್ಯದರ್ಶಿ ದೇವಾನಂದ್ ಗಾಯಕವಾಡ, ಸಂಘದ ಪ್ರಮುಖರಾದ ದಿಲೀಪ್ ನಾಗೂರೆ, ಸಂಗ್ರಾಮ ಖಾಜಾಮಿಯ್ಯಾ ಸೇರಿಕಾರ್, ಭುಜಂಗ್ ಔರಾದ್‌, ಆರ್.ಪಿ ರಾಜಾ, ಸಂತೋಷ ಬಿ. ಕೊರವಾ ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...