ಬೀದರ್ |‌ ರಿಶೈನ್‌ ಆರ್ಗನೈಸೇಶನ್‌ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ವೆಟರ್‌ ವಿತರಣೆ

Date:

ಬೀದರ್‌ ನಗರದ ರಿಶೈನ್‌ ಆರ್ಗನೈಸೇಶನ್‌ ವತಿಯಿಂದ ಔರಾದ್ ತಾಲೂಕಿನ‌ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ದಿನದಂದು 30 ಮಕ್ಕಳಿಗೆ ಉತ್ತಮ ಗುಣಮಟ್ಟದ ಸ್ವೆಟರ್‌ಗಳನ್ನು ವಿತರಿಸಲಾಯಿತು.

ರಿಶೈನ್‌ ಆರ್ಗನೈಸೇಶನ್‌ (ಎನ್‌ಜಿಒ) ಅಧ್ಯಕ್ಷ ರೋಹನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಗ್ರಾಮೀಣ ಭಾಗದ ಬಡ ಪ್ರತಿಭಾವಂತ ಮಕ್ಕಳಿಗೆ ನಮ್ಮ ಸೇವೆ ಇರಬೇಕೆಂದು ಬಯಸಿ ಈ ಶಾಲೆ ಆಯ್ಕೆ ಮಾಡಿಕೊಂಡಿದ್ದೇವೆ. ಮಕ್ಕಳು ಶಾಲಾ ದಿನಗಳಲ್ಲೇ ಸತ್ಯ, ನಿಷ್ಠೆ, ಪ್ರಾಮಾಣಿಕತೆ ಮೈಗೂಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು. ಬಡ, ಅನಾಥ, ನಿರ್ಗತಿಕರಿಗೆ ಸಂಕಷ್ಟಕ್ಕೆ ಸಹಕಾರ ನೀಡಿದರೆ ನಮ್ಮ ಬದುಕು ಸಾರ್ಥಕವಾಗುತ್ತದೆʼ ಎಂದು ಹೇಳಿದರು.

ಪತ್ರಕರ್ತ ಬಾಲಾಜಿ ಕುಂಬಾರ್‌ ಮಾತನಾಡಿ, ʼವಿದ್ಯಾರ್ಥಿಗಳು ಕೇವಲ ಪಠ್ಯದ ಓದಿಗೆ ಸೀಮಿತರಾಗದೇ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಮಾಜಿಕ ಬದಲಾವಣೆಗೆ ಅಣಿಯಾಗಬೇಕು. ಮೌಲ್ಯಯುತ ಶಿಕ್ಷಣ ಜೊತೆಗೆ ಉತ್ತಮ ಸಂಸ್ಕಾರ ಕಲಿಯುವುದು ಇಂದಿನ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ ಬಿತ್ತುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿ ಉಚಿತವಾಗಿ ಸ್ವೆಟರ್‌ ವಿತರಿಸುವುದು ಶ್ಲಾಘನೀಯʼ ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 15 at 9.30.31 PM

ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ ಪ್ರಾಸ್ತಾವಿಕವಾಗಿ ಮಾತನಾಡಿ,ʼಇಂದಿನ ಮಕ್ಕಳು ಮೊಬೈಲ್‌ ಸೇರಿದಂತೆ ಅನೇಕ ದುಶ್ಛಟಗಳಿಗೆ ಬಲಿಯಾಗುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಇದರಿಂದ ಯುವ ಸಮೂಹ ತಮ್ಮ ಅಮೂಲ್ಯವಾದ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಪೋಷಕರ ಸಂಕಷ್ಟಗಳನ್ನು ಅರ್ಥೈಸಿಕೊಂಡು ಬದುಕಿನಲ್ಲಿ ಯಶಸ್ಸು ಕಾಣಲು ಹೆಚ್ಚಿನ ಅಧ್ಯಯನ ನಡೆಸಬೇಕುʼ ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯಗುರು ಮನೋಹರ ಬಿರಾದರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಅಡುಗೆ ಸಹಾಯಕಿಯರಿಗೆ ಸ್ವೆಟರ್‌ ವಿತರಿಸಿದ ರಿಶೈನ್‌ ಸಂಸ್ಥೆಯವರ ಕಾರ್ಯ ಅಪರೂಪವಾಗಿದೆ. ಬೀದರ್‌ ನಗರದಲ್ಲಿ ಬಡ, ಅನಾಥ, ನಿರ್ಗತಕರಿಗೆ ಅನ್ನದಾಸೋಹ ಮೂಲಕ ನೂರಾರು ಜನರ ಹೊಟ್ಟೆ ತಣಿಸುವ ಕಾರ್ಯ ಮಾನವೀಯತೆಗೆ ಸಾಕ್ಷಿಯಾಗಿದೆʼ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಔರಾದ್‌ ತಾಲೂಕು ಚುನಾವಣೆಯಲ್ಲಿ ಜಯ ಸಾಧಿಸಿದ ಶಿಕ್ಷಕ ಶಿವಾನಂದ ಸ್ವಾಮಿ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ವಾರಕ್ಕೆ 70 ಗಂಟೆ ದುಡಿಮೆ | ನಾನು ಸತ್ತರೂ ನನ್ನ ಅಭಿಪ್ರಾಯ ಬದಲಿಸಿಕೊಳ್ಳಲ್ಲ: ನಾರಾಯಣ ಮೂರ್ತಿ

ಕಾರ್ಯಕ್ರಮದಲ್ಲಿ ರಿಶೈನ್‌ ಸಂಸ್ಥೆಯ ಸಚಿನ್‌ ಕೆಂಚಾ, ಸ್ಟೀಫನ್‌ ಪಾಲ್‌ ಹಾಗೂ ಶಾಲೆಯ ಶಿಕ್ಷಕರಾದ ರಾಜಶೇಖರ ಕುಶನೂರೆ, ಈಶ್ವರ ಪವಾರ್‌, ಸಂಗೀತಾ ಪಾಟೀಲ್‌, ಶಶಿಕಲಾ ಜಾರ್ಜ್‌, ಸವಿತಾ ಕಾಂಬಳೆ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಭಾಷ ಚಂದ್ರ ಬೋಸ್‌ ನಂದಾದೀಪ ಬೋರಾಳೆ ನಿರೂಪಿಸಿ, ವಂದಿಸಿದರು.

ನಾಲಂದಾ ಶಾಲೆಯ ಮಕ್ಕಳಿಗೆ ಸ್ವೆಟರ್‌ ವಿತರಣೆ :

ಔರಾದ್‌ ಪಟ್ಟಣದ ನಾಲಂದಾ ಪ್ರೌಢ ಶಾಲೆಯ ಕನ್ನಡ ಹಾಗೂ ಮರಾಠಿ ಮಾಧ್ಯಮದ ವಿದ್ಯಾರ್ಥಿಗಳಿಗೆ ರಿಶೈನ್‌ ಆರ್ಗನೈಸೇಶನ್‌ ವತಿಯಿಂದ ಸ್ವೆಟರ್‌ ವಿತರಿಸಲಾಯಿತು.

WhatsApp Image 2024 11 15 at 9.30.30 PM 1
ಔರಾದ್‌ ಪಟ್ಟಣದ ನಾಲಂದಾ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ರಿಶೈನ್‌ ಸಂಸ್ಥೆಯಿಂದ ಸ್ವೆಟರ್‌ ವಿತರಿಸಲಾಯಿತು.

ಈ ಸಂದರ್ಭದಲ್ಲಿ ನಾಲಂದಾ ಪಿಯು ಕಾಲೇಜು ಪ್ರಾಚಾರ್ಯ ಡಾ.ಮನ್ಮಥ ಡೋಳೆ, ಹಣೆಗಾಂವ ಹಿರೇಮಠದ ಶಂಕರಲಿಂಗ ಶಿವಚಾರ್ಯ, ವೈದ್ಯರಾದ ಡಾ.ಧನರಾಜ ರಾಗಾ, ಡಾ. ಕಿರಣ ಉಪ್ಪೆ, ನರಸಿಂಗ್‌ ಬೆಲ್ದಾರ್‌, ದಿಲೀಪ ಮೇತ್ರಿ, ಮುಖಂಡ ಶರಣಪ್ಪಾ ಪಾಟೀಲ್‌ ಸೇರಿದಂತೆ ಶಾಲಾ, ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...