ಬೀದರ್‌ | ಜಿಲ್ಲಾ ಬೆಳೆ ಸಮೀಕ್ಷೆದಾರರ ಸಂಘ ಉದ್ಘಾಟನೆ

Date:

ಬೀದರ್‌ ನಗರದ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ಮಂಗಳವಾರ ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼರೈತರಿಗೆ ಬೆಳೆ ವಿಮೆ ಸೇರಿದಂತೆ ಅನೇಕ ಸೌಲಭ್ಯಗಳು ದಕ್ಕಬೇಕಾದರೆ ಬೆಳೆ ಸಮೀಕ್ಷೆ ಕಾರ್ಯ ಪ್ರಮುಖ ಪಾತ್ರವಹಿಸುತ್ತದೆ. ಬಿಸಿಲು, ಮಳೆ ಎನ್ನದೆ ರೈತರ ಜಮೀನುಗಳಿಗೆ ತೆರಳಿ ಬೆಳೆ ಸಮೀಕ್ಷೆ ನಡೆಸುವ ಗಣತಿದಾರರ ತುಂಬಾ ಮುಖ್ಯವಾಗಿದೆ. ಸರ್ಕಾರ, ಕೃಷಿ ಇಲಾಖೆ ಅವರ ಬೇಡಿಕೆಗಳಿಗೆ ಸ್ಪಂದಿಸಿ ವಿಶೇಷ ಸೌಲಭ್ಯ ಒದಗಿಸಬೇಕುʼ ಎಂದು ತಿಳಿಸಿದರು.

ʼಬೆಳೆ ಸಮೀಕ್ಷೆದಾರರು ಜಮೀನಿಗೆ ಬಂದು ಸಮೀಕ್ಷೆ ನಡೆಸುವ ವೇಳೆ ರೈತರು ಸಹಕರಿಸಬೇಕು. ರೈತರ ಬೆಳೆದ ಬೆಳೆಗೆ ಖರೀದಿ ನಿಗದಿಯಾಗುವುದು ಸಮೀಕ್ಷೆ ಆಧಾರದಲ್ಲಿ, ಹೀಗಾಗಿ ರೈತರ ಹಿತದೃಷ್ಟಿಯಿಂದ ನಿಖರವಾಗಿ ಸಮೀಕ್ಷೆ ನಡೆಸಿ ಮಾಹಿತಿ ನೀಡಬೇಕುʼ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಲ್ಕಿ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ ಮಾತನಾಡಿ, ʼಬೀದರ್‌ ಜಿಲ್ಲೆಯ ಬೆಳೆ ಸಮೀಕ್ಷೆದಾರರು ಅತ್ಯಂತ ಪ್ರಾಮಾಣಿಕತೆಯಿಂದ ಗಣತಿ ಕಾರ್ಯ ನಡೆಸುತ್ತಿದ್ದಾರೆ. ಕೃಷಿ ಇಲಾಖೆಯಿಂದ ಈಗಾಗಲೇ ಕೆಲವು ಬೇಡಿಕೆಗಳು ಈಡೇರಿಸಲಾಗಿದೆ. ಸಮೀಕ್ಷೆ ಕಾರ್ಯದೊಂದಿಗೆ ಕೃಷಿ ಇಲಾಖೆಯ ಯೋಜನೆಗಳ ಕುರಿತು ರೈತರಿಗೆ ಮಾಹಿತಿ ನೀಡುವ ಕೆಲಸ ಆಗಬೇಕಿದೆʼ ಎಂದರು.

ಜಿಲ್ಲಾ ಬೆಳೆ ಸಮೀಕ್ಷೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ ಕಾಂಬಳೆ ಮಾತನಾಡಿ, ʼರೈತರ ಹಿತದೃಷ್ಟಿ, ಕಾಳಜಿಯಿಂದ ಅತ್ಯಂತ ಕಡಿಮೆ ಗೌರವಧನದಲ್ಲಿ ಸಮೀಕ್ಷೆ ಕಾರ್ಯ ನಡೆಸುತ್ತಿದ್ದೇವೆ. ಈ ಕಾರ್ಯದಿಂದ ನಮಗೆ ತೃಪ್ತಿಯಿದೆ. ಮುಂದಿನ ದಿನಗಳಲ್ಲಿ ಸಂಘಟನೆ ಬಲಪಡಿಸಿ ವಿವಿಧ ಬೇಡಿಕೆಗಳಿಗೆ ಹೋರಾಟ ರೂಪಿಸಲಾಗುವುದುʼ ಎಂದರು.

WhatsApp Image 2025 07 22 at 7.16.33 PM
ಬೆಳೆ ಸಮೀಕ್ಷೆದಾರರ ಸಂಘದ ಜಿಲ್ಲೆಯ ಎಲ್ಲಾ ತಾಲೂಕಿನ ಅಧ್ಯಕ್ಷರಿಗೆ ಗೌರವಿಸಲಾಯಿತು.

ರಾಜ್ಯ ಬೆಳೆ ಸಮೀಕ್ಷೆದಾರರ ಸಂಘದ ಸಂಸ್ಥಾಪಕ, ಪ್ರಧಾನ ಕಾರ್ಯದರ್ಶಿ ರಾಜು ಡಿಫರೆಂಟ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಮೋಹನ್‌ ಮಾನೆ ಗಾದಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಇದನ್ನೂ ಓದಿ : ಶ್ರಾವಣ ಮಾಸ | ಜು.24 ರಿಂದ ಬೀದರ್ ಜಿಲ್ಲೆಯ 22 ಕಡೆಗಳಲ್ಲಿ ಪ್ರವಚನ : ಬಸವಲಿಂಗ ಪಟ್ಟದ್ದೇವರು

ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ಸಂಘಟನಾ ಕಾರ್ಯದರ್ಶಿ ಸುಂದರ್ ಹಲಗೆ, ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಂತಮ್ಮ ಮೂಲಗೆ, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ ಮಾಳಗೆ ರೈತ ಸಂಘದ ನಾಗಶೆಟ್ಟಿ ನಂಜವಾಡೆ, ವೀರಾರೆಡ್ಡಿ ಪಾಟೀಲ್, ಹೋರಾಟಗಾರ ಕೊಂಡಿಬಾರಾವ್‌ ಹಾಗೂ ಬೆಳೆ ಸಮೀಕ್ಷೆದಾರರ ಸಂಘದ ಭಾಲ್ಕಿ ತಾಲೂಕಾಧ್ಯಕ್ಷ ಏಕನಾಥ್ ಮೇತ್ರೆ, ಹುಮನಾಬಾದ್‌ ತಾಲೂಕಾಧ್ಯಕ್ಷ ಭೀಮಶಾ ಮೇಲಕೇಡಿ, ಬೀದರ್‌ ತಾಲೂಕಾಧ್ಯಕ್ಷ ಶಿವಕುಮಾರ್ ಶಿವಗೊಂಡ್, ಚಿಟಗುಪ್ಪಾ ತಾಲೂಕಾಧ್ಯಕ್ಷ ವಿನೋದ್ ಉಡಬಾಳ್, ಬಸವಕಲ್ಯಾಣ ತಾಲೂಕಾಧ್ಯಕ್ಷ ಶಂಕರಲಿಂಗ, ಹುಲಸೂರ ತಾಲೂಕಾಧ್ಯಕ್ಷ ಪರಮೇಶ್ವರ ಕಾದೆಪೂರ, ಔರಾದ್‌ ತಾಲೂಕಿನ ಜನಾರ್ಧನ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು, ರೈತ ಸಂಘದ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...