ಬೀದರ್‌ | ಬಸವಾದಿ ಶರಣರ ತ್ಯಾಗ,ಬಲಿದಾನ ಮರೆಯದಿರಿ : ಬಸವಲಿಂಗ ಪಟ್ಟದ್ದೇವರು

Date:

12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಜಯದಶಮಿ (ದಸರಾ) ನಿಮಿತ್ತ ಗುರುವಾರ ಆಯೋಜಿಸಿದ್ದ ಮರಣವೇ ಮಹಾನವಮಿ ಮತ್ತು ಕಲ್ಯಾಣ ಕ್ರಾಂತಿ ವಿಜಯೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. 

ʼಬಸವಣ್ಣನವರ ಕ್ರಾಂತಿಯಲ್ಲಿ ಅನೇಕ ಮಹಾಶರಣರು ಭಾಗಿಯಾಗಿದ್ದರು. ಅದರಲ್ಲಿ ಶರಣ ಹರಳಯ್ಯ ಮತ್ತು ಶರಣ ಮಧುವಯ್ಯನವರು ಬಸವಸ್ಥಾಪಿತ ಸಮತಾ ರಾಜ್ಯ ನಿರ್ಮಾಣಕ್ಕಾಗಿ ಬಲಿದಾನವನ್ನು ನೀಡಿದರು. ಲಿಂಗಾಯತ ಧರ್ಮ ಸಾವಿರಾರು ಶರಣರ ತ್ಯಾಗ ಮತ್ತು ಬಲಿದಾನದ ಮೇಲೆ ನಿಂತಿದೆ. ವಿಶೇಷವಾಗಿ ಹರಳಯ್ಯ ಮತ್ತು ಮಧುವಯ್ಯನವರು ಸಮತಾ
ತತ್ವಕ್ಕಾಗಿ ಎಳೆಹೂಟಿ ಶಿಕ್ಷೆಯನ್ನು ಅನುಭವಿಸಿದರು. ಆ ದಿನ ಮಹಾನವಮಿ ಅದಕ್ಕೆ ಶರಣರು ಮರಣವೇ ಮಹಾನವಮಿʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶರಣರಿಗೆ ಶಿಕ್ಷೆಯಾಗಿದ್ದರೂ ಅವರು ಶರಣತತ್ವಕ್ಕಾಗಿ ತಮ್ಮ ಬಲಿದಾನ ನೀಡಿದ್ದಾರೆಂದು ಅದು ನಮಗೆ ಸೋಲಲ್ಲ ಗೆಲವು ಎಂದು ತಿಳಿದು ಕಲ್ಯಾಣ ಕ್ರಾಂತಿ ವಿಜಯೋತ್ಸವವನ್ನು ಆಚರಿಸುತ್ತ ಬಂದಿದ್ದೇವೆ. ಶರಣರ ತ್ಯಾಗ ಬಲಿದಾನ ಜಗತ್ತಿಗೆ ಪರಿಚಯಿಸುವ ಹೊಣೆಗಾರಿಕೆ ನಮ್ಮೆಲ್ಲರದಾಗಿದೆʼ ಎಂದು ತಿಳಿಸಿದರು.

ಪಟ್ಟಣದಲ್ಲಿ ಮರಣವೇ ಮಹಾನವಮಿ ಮತ್ತು ಕಲ್ಯಾಣ ಕ್ರಾಂತಿ ವಿಜಯೋತ್ಸವ ಕಾರ್ಯಕ್ರಮದ ಅಂಗವಾಗಿ ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನೆರವೇರಿತು. ಹಿರೇಮಠ ಸಂಸ್ಥಾನದಿಂದ ಆರಂಭಗೊಂಡ ಪಲ್ಲಕ್ಕಿ ಮೆರವಣಿಗೆ ಪ್ರಮುಖ
ಬೀದಿ, ರಸ್ತೆ ಮೂಲಕ ಸಂಚರಿಸಿ ಚನ್ನಬಸವಾಶ್ರಮ ಪರಿಸರದಲ್ಲಿ ಸಮಾವೇಶಗೊಂಡಿತು.

ಅ.5 ರಂದು ಬಸವ ಸಂಸ್ಕೃತಿ ಅಭಿಯಾನ ಸಮಾರೋಪ :

ಅ.5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಸಮಾರಂಭ ಜರುಗಲಿದೆ ಜಿಲ್ಲೆಯ ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದರು. ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ವತಿಯಿಂದ ಕಳೆದ ಸೆ.1ರಿಂದ 30ರ ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಾಗಿಬಂದ ಬಸವ ಸಂಸ್ಕೃತಿ ಅಭಿಯಾನ ಅತ್ಯಂತ ಯಶಸ್ವಿ ಕಂಡಿದೆ’ ಎಂದು ತಿಳಿಸಿದರು.

ಇದನ್ನೂ ಓದಿ : ಕಲ್ಯಾಣದಲ್ಲಿ ನೆರೆ | ಪರಿಹಾರದ ವಿವರ ನೀಡುವಂತೆ ಸರಕಾರಕ್ಕೆ ಹೆಚ್.ಡಿ.ದೇವೇಗೌಡ ಗಡುವು

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಹರಳಯ್ಯ ಸಮಾಜದ ಅಧ್ಯಕ್ಷರು, ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಪಾರ್ವತಿ ಧೂಮ್ಮನಸೂರೆ ಸೇರಿದಂತೆ ಹಲವರು ಇದ್ದರು. ರಾಜು ಜುಬರೆ ವಚನ ಗಾಯನ ನಡೆಸಿಕೊಟ್ಟರು. ಶಂಭುಲಿಂಗ ಕಾಮಣ್ಣ ಸ್ವಾಗತಿಸಿದರು. ನವಲಿಂಗ ಪಾಟೀಲ್ ನಿರೂಪಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...