ಬೀದರ್‌ | ಡಾ.ಅಂಬೇಡ್ಕರ್‌ ಪರಿನಿಬ್ಬಾಣ ದಿನ : ಮನೆ-ಮನೆಗೆ ಅಂಬೇಡ್ಕರ್‌ ಅಭಿಯಾನಕ್ಕೆ ಚಾಲನೆ

Date:

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಮಹಾಪರಿನಿಬ್ಬಾಣ ದಿನದಂದು ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಮನೆ-ಮನೆಗೆ ಅಂಬೇಡ್ಕರ್‌ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಟ್ರಸ್ಟ್‌ ಅಧ್ಯಕ್ಷರೂ ಆದ ಅಭಿಯಾನದ ಸಂಚಾಲಕ ಮಹೇಶ ಗೊರನಾಳಕರ್‌ ತಿಳಿಸಿದ್ದಾರೆ.

ʼಡಿ.6 ರಿಂದ 2026ರ ಏಪ್ರಿಲ್ 14ರವರೆಗೆ ನಡೆಯುವ ಮನೆ-ಮನೆಗೆ ಅಂಬೇಡ್ಕರ್ ಅಭಿಯಾನದ ಚಾಲನೆ ಕಾರ್ಯಕ್ರಮವು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದಂದು ಬೀದರ್‌ ನಗರದ ಡಾ.ಅಂಬೇಡ್ಕರ್‌ ವೃತ್ತದಲ್ಲಿ ಸಂಜೆ 4 ಗಂಟೆಗೆ ಸಾಂಕೇತಿಕವಾಗಿ ಚಾಲನೆ ದೊರೆಯಲಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೂಜ್ಯ ಭಂತೆ ವರಜ್ಯೋತಿ ಚಾಲನೆ ನೀಡುವವರು. ಮನೆ-ಮನೆಗೆ ಅಂಬೇಡ್ಕರ್ ಅಭಿಯಾನ ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಅಧ್ಯಕ್ಷತೆ ವಹಿಸುವರು. ಅಭಿಯಾನ ಅನುಷ್ಠಾನ ಸಮಿತಿ  ಸರ್ವ ಪದಾಧಿಕಾರಿಗಳು ಅತಿಥಿಗಳಾಗಿ ಭಾಗವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | 2026ರ ಜನವರಿ ಒಳಗೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆಗೊಳಿಸಿ : ಲಕ್ಷ್ಮಣ ದಸ್ತಿ

ಕಾರ್ಯಕ್ರಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ಅನುಯಾಯಿಗಳು, ಬೌದ್ಧ ಉಪಾಸಕ, ಉಪಾಸಕಿಯರು , ಹೋರಾಟಗಾರರು, ಸಾಹಿತಿಗಳು, ಚಿಂತಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಭಿಯಾನದ ಸಂಚಾಲಕರಾದ ಮಹೇಶ ಗೋರನಾಳಕರ್ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...