ಬೀದರ್‌ | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ನಾಳೆ ಮೆಗಾ ರಕ್ತದಾನ ಶಿಬಿರ

Date:

ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಬೀದರ್‌ ನಗರದ ಎಂ.ಡಿ.ಅಲೀಮುದ್ದೀನ್ ಫೌಂಡೇಶನ್ ಮತ್ತು ಮೂವ್ಮೆಂಟ್ ಆಫ್ ಜಸ್ಟೀಸ್ ಇವರ ಸಹಯೋಗದಲ್ಲಿ ನಾಳೆ (ಏ.14) ಮೆಗಾ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಬೀದರ್ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಸಮೀಪದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮೆಗಾ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಶಿಬಿರ ನಡೆಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರಕ್ತದಾನ ಶಿಬಿರದಲ್ಲಿ 18 ರಿಂದ 60 ವರ್ಷ ವಯಸ್ಸಿನವರು ರಕ್ತದಾನ ಮಾಡಬಹುದು. ದಾನಿಯಿಂದ ಸಂಗ್ರಹಿಸಿದ ಒಂದು ಯೂನಿಟ್ ರಕ್ತವು ಮೂರು ಜನರ ಜೀವ ಉಳಿಸಬಹುದು. ವಿಶೇಷವಾಗಿ ಯುವಕರು ಈ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ದಾನಗೈದು ಮತ್ತೊಬ್ಬರ ಜೀವ ಉಳಿಸುವ ಈ ಪ್ರಯತ್ನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಗಳಾದ ಮಹಮ್ಮದ್ ಅಸಾದುದ್ದೀನ್ ಹಾಗೂ ಸೈಯದ್ ಸರ್ಫರಾಜ್ ಹಾಶ್ಮಿ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...