ಬೀದರ್‌ | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ಸ್ವಾಗತ ಸಮಿತಿ ಅಧ್ಯಕ್ಷರ ಆಯ್ಕೆ; ಪೋಸ್ಟರ್‌ ಬಿಡುಗಡೆ

Date:

ಔರಾದ್‌ ಪಟ್ಟಣದಲ್ಲಿ ಏಪ್ರಿಲ್‌ 22ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನಿಸಲಾಗಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲಕುಮಾರ್‌ ದೇಶಮುಖ ಅವರನ್ನು ಆಯ್ಕೆ ಮಾಡಲಾಗಿದೆ.

ವಿಶ್ವರತ್ನ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 134ನೇ ಜನ್ಮೋತ್ಸವ ಸಮಿತಿ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ನಡೆಸಿದ ಸಭೆಯಲ್ಲಿ ದೇಶಮುಖ ಅವರನ್ನು ಆಯ್ಕೆ ಮಾಡಲಾಗಿದೆ.

ಅಂದಿನ ಕಾರ್ಯಕ್ರಮದಲ್ಲಿ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ.ಅಪ್ಪುಗೆರೆ ಸೋಮಶೇಖರ್‌ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಂಸದ ಸಾಗರ್‌ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭೀಮಾ ಕೋರೆಗಾಂವ್‌ ಖ್ಯಾತಿ ಕಲಾವಿದ ಅಜಯ್‌ ದಿಹಾಂಡೆ, ಉದಗೀರ್‌ ಶಾಸಕ ಸಂಜಯ್‌ ಭಾನಸೋಡೆ, ಮಾಜಿ ವಿಧಾನ ಪರಿಷತ್‌ ಸದಸ್ಯ ಕೆ.ಪುಂಡಲಿಕರಾವ್‌, ಮುಖಂಡರಾದ ಭೀಮಶೇನರಾವ್‌ ಸಿಂಧೆ, ಮಾರುತಿ ಬೌದ್ಧೆ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾಗತ ಸಮಿತಿ ಅಧ್ಯಕ್ಷ ಸುನೀಲಕುಮಾರ್‌ ದೇಶಮುಖ ಅವರು ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿ, ʼಔರಾದ್ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮೋತ್ಸವ ಕಾರ್ಯಕ್ರಮ ಐತಿಹಾಸಿಕವಾಗಲಿದೆ. ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣʼ ಎಂದು ಹೇಳಿದರು.

ಪ್ರಚಾರ ಸಮಿತಿ ಅಧ್ಯಕ್ಷ ಶಿವಕುಮಾರ ಕಾಂಬಳೆ ಮಾತನಾಡಿ, ʼಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಜಯಂತಿ ಆಚರಣೆ ಕುರಿತು ಈಗಾಗಲೇ ಅನೇಕ ಪೂರ್ವಸಿದ್ಧತಾ ಸಭೆಗಳು ನಡೆಸಿ ವಿವಿಧ ಸಮಿತಿ ರಚಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕುʼ ಎಂದರು.

ಈ ಸುದ್ದಿ ಓದಿದ್ದೀರಾ? Second PUC Result | ಪಿಯುಸಿ ಫಲಿತಾಂಶ : 19 ರಿಂದ 22ನೇ ಸ್ಥಾನಕ್ಕೆ ಕುಸಿದ ಬೀದರ್

ಪ್ರಮುಖರಾದ ಶರಣಪ್ಪ ಪಾಟೀಲ್, ಸೋಪಾನರಾವ ಡೊಂಗರೆ ಝರೇಪ್ಪ ನಾಗಮಾರಪಳ್ಳಿ, ಉತ್ತಮ ಮಾಂಜ್ರೆಕರ್, ಸುನಿಲ ಮೀತ್ರಾ, ಸಂತೋಷ ಶಿಂಧೆ, ಪ್ರಕಾಶ ಭಂಗಾರೆ, ವಿಶಾಲ್ ಶೇಳಕೆ, ಸಂತೋಷ ಸೂರ್ಯವಂಶಿ, ಆನಂದ ಕಾಂಬಳೆ, ಉತ್ತಮ ಗಾಯಕವಾಡ್, ರವಿ ಯರನಾಳೆ ಸೇರಿದಂತೆ ಅನೇಕರಿದ್ದರು. ಪ್ರಚಾರ ಸಮಿತಿ ಕಾರ್ಯದರ್ಶಿ ರತ್ನದೀಪ ಕಸ್ತೂರೆ ಸ್ವಾಗತಿಸಿ, ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...