ಬೀದರ್‌ | ಕುಡಿಯುವ ನೀರಿಗೆ ಹಾಹಾಕಾರ; ಮಹಿಳೆಯರಿಂದ ಗ್ರಾ.ಪಂ ಕಚೇರಿಗೆ ಮುತ್ತಿಗೆ

Date:

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಘಾಮಾ ತಾಂಡಾ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪಿಡಿಒ ಜತೆ ವಾಗ್ವಾದ ನಡೆಸಿ ಕೈ ಕೈ ಮಿಲಾಯಿಸಿರುವ ಘಟನೆ ಬೀದರ್‌ ಜಿಲ್ಲೆ ಔರಾದ್‌ ತಾಲೂಕಿನಲ್ಲಿ ನಡೆದಿದೆ.

ತೆಲಂಗಾಣ ರಾಜ್ಯದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಘಾಮಾ ತಾಂಡಾದ ಮಹಿಳೆಯರು ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಚೇರಿಗೆ ಬೀಗ ಹಾಕಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಸ್ಥಳಕ್ಕೆ ಬಂದ ಪಿಡಿಒ ಶ್ವೇತಾ ಜತೆ ವಾಗ್ವಾದ ನಡೆಸಿ, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

“ನಮ್ಮ ತಾಂಡಾ ಜನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ನಿತ್ಯ 2 ರಿಂದ 3 ಕಿ.ಮೀ. ನಡೆದುಕೊಂಡು ಹೋಗಿ ನೀರು ತರುತ್ತಿದ್ದರೂ ಗ್ರಾಮ ಪಂಚಾಯಿತಿಯವರು ನಮ್ಮ ಬಗ್ಗೆ ಗಮನ ಹರಿಸುತ್ತಿಲ್ಲ. ಪ್ರತಿಭಟನೆ ಮಾಡಲು ಬಂದ ನಮ್ಮ ಮೇಲೆಯೇ ಪಿಡಿಒ ಬೆದರಿಕೆ ಹಾಕುತ್ತಿದ್ದಾರೆ” ಎಂದು ಘಾಮಾ ತಾಂಡಾ ಮಹಿಳೆಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ನೀರು ಪೂರೈಕೆಗೆ ಆಗ್ರಹ; ಖಾಲಿ ಕೊಡ ಹಿಡಿದು ಗ್ರಾ.ಪಂ ಕಚೇರಿಗೆ ಮುತ್ತಿಗೆ

“ಘಾಮಾ ತಾಂಡಾಕ್ಕೆ ಬಾವಿಯಿಂದ ಪೈಪ್‍ಲೈನ್ ಮಾಡಿ ಕುಡಿಯಲು ನೀರು ಪೂರೈಸಿದ್ದೇವೆ. ಆದರೆ, ತಾಂಡಾ ನಿವಾಸಿಗಳೇ ಪದೇಪದೆ ಆ ಪೈಪ್ ಒಡೆದು ಹಾಕುತ್ತಿದ್ದಾರೆ. ಇದರಿಂದ ಸಮಸ್ಯೆಯಾಗುತ್ತಿದೆ. ನಿನ್ನೆ ಪಂಚಾಯಿತಿಗೆ ಬಂದಾಗ ಕೆಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಪೊಲೀಸರಿಗೂ ದೂರು ನೀಡಿದ್ದೇನೆ” ಎಂದು ಪಿಡಿಒ ಶ್ವೇತಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...