ಬೀದರ್‌ | ಕುಡಿಯುವ ನೀರಿನ ಸಮಸ್ಯೆ; ಖಾಲಿ ಕೊಡ ಹಿಡಿದು ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಹಿಳೆಯರು

Date:

ಬೀದರ್‌ ನಗರದ ಗರೀಬಿ ಕಾಲೋನಿಗೆ ಹೊಂದಿಕೊಂಡಿರುವ 35ನೇ ವಾರ್ಡ್‌ನಲ್ಲಿ ಕಳೆದ ವರ್ಷದಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿದ್ದು, ನೀರಿನ ಸಮಸ್ಯೆಯಿಂದ ಪರದಾಡುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದರು.

ಈ ಕುರಿತು ಮಂಗಳವಾರ ಭಾರತ ಕಮ್ಯೂನಿಷ್ಟ್‌ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿ ನೇತ್ರತ್ವದಲ್ಲಿ ಮಹಿಳೆಯರು ಖಾಲಿ ಕೊಡ ಹಿಡಿದು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ʼಈ ವಾರ್ಡ್‌ನಲ್ಲಿ 50ಕ್ಕೂ ಹೆಚ್ಚು ಮನೆಗಳಿವೆ. ಇಲ್ಲಿನ ನಿವಾಸಿಗಳಿಗೆ ನೀರು, ರಸ್ತೆ, ಚರಂಡಿ ವ್ಯವಸ್ಥೆ ಹಾಗೂ ವಿದ್ಯುತ್‌ ಸಂಪರ್ಕ ಇಲ್ಲದೇ ಈ ವಾರ್ಡ್‌ ಕೊಳಚೆ ಪ್ರದೇಶದಂತಿದೆ. ಎರಡು ಕೊಳವೆ ಬಾವಿಗಳಿದ್ದು, ದಿನಕ್ಕೆ 10 ಕೊಡ ನೀರು ಮಾತ್ರ ಸಿಗುತ್ತದೆ. ಇದೀಗ ಬೇಸಿಗೆ ಆರಂಭವಾಗಿದ್ದು, ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದೆ ಎಂದು ಸ್ಥಳೀಯರು ಗೋಳು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಗರ ಪ್ರದೇಶದಲ್ಲಿ ವಾಸಿಸುವ ನಮಗೆ ಕಳೆದ ವರ್ಷದಿಂದ ನೀರಿನ ಸಮಸ್ಯೆ ಉಂಟಾಗಿದೆ, ಸಮಪರ್ಕ ನೀರು ಸಿಗದಿರುವುದಕ್ಕೆ ದೂರದಿಂದ ತರಬೇಕಾದ ಪರಿಸ್ಥಿತಿ ಇದೆ. ಒಮ್ಮೊಮ್ಮೆ ಹಣ ಕೊಟ್ಟು ಟ್ಯಾಂಕರ್‌ ನೀರು ಖರೀದಿಸಬೇಕಾಗುತ್ತದೆ. ಈ ಬಗ್ಗೆ ಸ್ಥಳೀಯ ನಗರಸಭೆ ಸದಸ್ಯರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕೂಡಲೇ ನಮ್ಮ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಬಗೆಹರಿಸಿ, ವಿದ್ಯುತ್‌ ಸಂಪರ್ಕ ಕಂಬ ಅಳವಡಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವೃದ್ದಾಪ್ಯ ವೇತನ ಬಾರದೆ ವೃದ್ಧ ದಂಪತಿ ಪರದಾಟ; ಕಣ್ಣು ಹಾಯಿಸುವರೇ ಅಧಿಕಾರಿಗಳು?

ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ಬಾಬುರಾವ್‌ ಹೊನ್ನಾ, ಭಾರತೀಯ ರಾಷ್ಟ್ರೀಯ ಮಹಿಳಾ ಒಕ್ಕೂಟ ಸಂಚಾಲಕಿ ಜೀವಿಕಾ, ಸಹ ಸಂಚಾಲಕಿ ಅಮೀತಾ ಚೌವ್ಹಾಣ, ಶಾರದಾ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...