ಬೀದರ್‌ | ಸ್ಥಳಾಂತರಗೊಂಡ ಜಿಲ್ಲಾಧಿಕಾರಿ ಕಚೇರಿಗೆ ಬಸ್‌ ಓಡಿಸಿ

Date:

ಸ್ಥಳಾಂತರಗೊಂಡ ಜಿಲ್ಲಾಧಿಕಾರಿಗಳ ಕಚೇರಿಗೆ ನೂತನ ಬಸ್‌ ನಿಲ್ದಾಣದಿಂದ ಬಸ್‌ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುಲಾಮ್‌ ದಸ್ತಗೀರ್‌ ಅವರು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆ ನೂತನ ಪ್ರಜಾ ಸೌಧ ಕಟ್ಟಡ ನಿರ್ಮಾಣ ಕಾರ್ಯ ಮುಕ್ತಾಯ ಆಗುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿರುವ ವಿವಿಧ ಇಲಾಖೆಗಳ ಕಚೇರಿಗಳು ಬೇರೆ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯು ಚಿಕ್ಕಪೇಟ ರಸ್ತೆಯ ಗಾಂಧಿ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸ್ಥಳಾಂತರಗೊಂಡ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಇತರೆ ಕಚೇರಿಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಹೊಸ ಬಸ್‌ ನಿಲ್ದಾಣದಿಂದ ಎರಡು ಬಸ್‌ಗಳನ್ನು ಹಳೆ ನಿಲ್ದಾಣ, ಅಂಬೇಡ್ಕರ್‌ ವೃತ್ತ, ಜನವಾಡ ರಸ್ತೆ ಮಾರ್ಗವಾಗಿ ಚಿಕಪೇಟ್‌ ರಿಂಗ್‌ ರಸ್ತೆ, ಗುರುನಾನಕ್‌ ಝೀರಾ ಮುಖಾಂತರ ಹೊಸ ಬಸ್‌ ನಿಲ್ದಾಣಕ್ಕೆ ಚಲಿಸಬೇಕುʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಾರಿಗೆ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಬಸ್‌ ವ್ಯವಸ್ಥೆ ಕಲ್ಪಿಸಿದರೆ ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳಿಗೆ ಹಾಗೂ ನಗರ ಸೇರಿದಂತೆ ಬೇರೆ ತಾಲೂಕುಗಳಿಂದ ಬರುವ ಜನಸಾಮಾನ್ಯರಿಗೆ ಇದರಿಂದ ತುಂಬಾ ಅನುಕೂಲ ಆಗಲಿದೆʼ ಎಂದು ಗಮನ ಸೆಳೆದರು.

ಇದನ್ನೂ ಓದಿ : ಬೀದರ್‌ ಜಿಲ್ಲಾಡಳಿತ ಭವನ ನಿರ್ಮಾಣ : ಜಿಲ್ಲಾ ಕಚೇರಿಗಳ ಸ್ಥಳಾಂತರ : ಡಿಸಿ ಶಿಲ್ಪಾ ಶರ್ಮಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...