ಬೀದರ್ | ಬರ: ರೈತರ ಸಂಕಷ್ಟ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ : ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ

Date:

ಮಳೆಯ ಕೊರತೆಯಿಂದಾಗಿ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ ಬೆಳೆ ಚೆನ್ನಾಗಿ ಮೊಳಕೆಯೊಡೆದರೂ ಸಕಾಲಕ್ಕೆ ಮಳೆಯಾಗದ ಪರಿಣಾಮ ಫಸಲು ಕೈಕೊಟ್ಟಿದೆ ಎಂದು ಮಾಜಿ ಸಚಿವ, ಜೆಡಿಎಸ್‌ ನಾಯಕ ಬಂಡೆಪ್ಪ ಖಾಶೆಂಪುರ ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ರೈತ ಸಂಪರ್ಕ ಕೇಂದ್ರ, ಬಗದಲ್ ರೈತ ಸಂಪರ್ಕ ಕೇಂದ್ರ, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಜನವಾಡ ರೈತ ಸಂಪರ್ಕ ಕೇಂದ್ರ, ಔರಾದ ತಾಲೂಕಿನ ದಾಬಕಾ ರೈತ ಸಂಪರ್ಕ ಕೇಂದ್ರ ಸೇರಿದಂತೆ ವಿವಿಧ ರೈತ ಸಂಪರ್ಕ ಕೇಂದ್ರಗಳಾದ ಖಾಶೆಂಪುರ್, ಕಾಡವಾದ, ಬಗದಲ್ ತಾಂಡ, ಮರಕಲ್, ಮುರ್ಕಿ, ಚಿಕ್ಲಿ, ಗಣೇಶಪುರ್ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಮಳೆಯ ಕೊರತೆಯಿಂದ ಹಾಳಾದ ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿ, ರೈತರೊಂದಿಗೆ ಚರ್ಚಿಸಿ ಅವರು ಮಾತನಾಡಿದರು.

“ನಾನು ಈಗಾಗಲೇ ಜಿಲ್ಲೆಯ ವಿವಿಧೆಡೆ ಬೆಳೆ ವೀಕ್ಷಣೆ ನಡೆಸಿದ್ದೇನೆ. ನಮ್ಮ ರೈತರ ಸಂಕಷ್ಟದ ಪರಿಸ್ಥಿತಿಯ ಕುರಿತು ಸರ್ಕಾರದ ಗಮನಕ್ಕೆ ತರುತ್ತೇನೆ. ಶುಕ್ರವಾರ ಬೀದರ್ ನಗರದಲ್ಲಿನ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ಪಾದಯಾತ್ರೆ ಮೂಲಕ ಬಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಶೀಘ್ರವಾಗಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಂತೆ ಮನವಿ ಸಲ್ಲಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರೊಂದಿಗೆ ಸಂವಾದ ನಡೆಸಿದ್ದೇನೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಬಹುತೇಕ ರೈತರು ದುಃಖ ವ್ಯಕ್ತಪಡಿಸಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಳೆ ವಿಮೆ ಕೂಡ ಸರಿಯಾಗಿ ತಲುಪುತ್ತಿಲ್ಲ‌. ಎಲ್ಲಾ ರೀತಿಯಿಂದಲೂ ರೈತರು ಸಂಕಷ್ಟದಲ್ಲಿದ್ದೇವೆ. ಸರ್ಕಾರದ ನೆರವು ಅಗತ್ಯವಾಗಿದೆ” ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಕೃಷಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಜೆಡಿಎಸ್ ನಿಯೋಗ:
ಬರ ಅಧ್ಯಯನಕ್ಕಾಗಿ ಬೀದರ್ ಜಿಲ್ಲೆಯ ವಿವಿಧೆಡೆ ಸಂಚಾರ ನಡೆಸಿದ ಜೆಡಿಎಸ್ ನಾಯಕರು ಕೃಷಿ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬರ ಅಧ್ಯಯನದ ವೇಳೆಯಲ್ಲಿ ಜೆಡಿಎಸ್ ನಾಯಕರು, ವಿವಿಧೆಡೆ ರೈತರ ಮನೆಗಳಿಗೆ ತೆರಳಿ ರೈತರೊಂದಿಗೆ ಸಂವಾದ ನಡೆಸಿದರು. ರೈತರು ಎದುರಿಸುತ್ತಿರುವ ಸಮಸ್ಯೆಗಳು, ಅವರ ಬೆಳೆಗಳ ಸ್ಥಿತಿಗತಿಯ ಬಗ್ಗೆ ರೈತರಿಂದಲೇ ಮಾಹಿತಿ ಪಡೆದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಡಿ.2ರಂದು ಭೀಮಣ್ಣ ಖಂಡ್ರೆ ಶತಮಾನೋತ್ಸವ

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಾಪೂರ, ಬೀದರ್ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್ ಹಾರೂರಗೆರಿ, ಪಕ್ಷದ ಪ್ರಮುಖರಾದ ರಾಜು ಕಡ್ಯಾಳ, ಭೋಮಗೊಂಡ ಚಿಟ್ಟಾವಾಡಿ, ಅಭಿ ಕಾಳೆ, ತಾನಾಜಿ ತೋರಣೆಕರ್, ಐಲಿಂಜಾನ್ ಮಠಪತಿ, ಲಲಿತಾ ಕರಂಜೆ, ಸಂಗಮ್ಮ ಪಾಟೀಲ್, ಅಶಾದೋದ್ದೀನ್, ಬಸವರಾಜ ಶಾಹಪೂರ್, ಸಲಿಂ ಚಿಕಾನ್, ಸೂರ್ಯಕಾಂತ್ ದಂಡಿ, ದತ್ತು, ಆಶೀಶ್ ಸೆಳಗಿ, ಅಶೋಕ್ ಕಿಂಡಿವಾಲೆ, ಮುನಿರ್ ಸಂತ್ಪೂರ್, ಬೀದರ್ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಮ್.ಎ.ಕೆ ಅನ್ಸಾರಿ, ಔರಾದ ತಾಲೂಕು ಸಹಾಯಕ ಕೃಷಿ ನಿರ್ದೇಶಕ ದೂಳಪ್ಪ ಹೊಸಳ್ಳಿ, ಬಗದಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸಂಗಮೇಶ, ಜನವಾಡ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸಂತೋಷ ಪಾಟೀಲ್, ದಾಬಕಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಆನಂದ್ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...