ಬೀದರ್‌ | ʼಈದಿನʼ ಫಲಶೃತಿ : ಹಾಲಹಳ್ಳಿ(ಕೆ) ಪ್ರೌಢ ಶಾಲೆಗೆ ಬಿಇಒ ಭೇಟಿ; ಶಾಲೆ ಸ್ಥಳಾಂತರ

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ(ಕೆ) ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜೆ.ಹಳ್ಳದ ಬುಧವಾರ ಭೇಟಿ ನೀಡಿ ಶಾಲಾ ಕಟ್ಟಡ ಪರಿಶೀಲಿಸಿದರು.

ಶಾಲಾ ಕೋಣೆಗಳ ದುಸ್ಥಿತಿ ಕುರಿತು ನಿನ್ನೆ (ಜು.8) ರಂದು ʼಈದಿನ.ಕಾಮ್ʼ ನಲ್ಲಿ ʼಸೋರುವ ಕೊಠಡಿಯಲ್ಲಿ ಮಕ್ಕಳ ಕಲಿಕೆ : ಜೋರು ಮಳೆ ಬಂದ್ರೆ ಶಾಲೆಗೆ ರಜೆ!ʼ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು.

ಈ ವರದಿಗೆ ಸ್ಪಂದಿಸಿದ ಭಾಲ್ಕಿ ತಾಲ್ಲೂಕು ಬಿಇಒ ನೇತ್ರತ್ವದ ತಂಡ (ಇಂದು) ಬುಧವಾರ ಬೆಳಿಗ್ಗೆ ಶಾಲೆಗೆ ಭೇಟಿ ನೀಡಿ ಶಿಥಿಲಗೊಂಡ ಶಾಲಾ ಕೋಣೆಗಳನ್ನು ಪರಿಶೀಲಿಸಿ, ಶಿಕ್ಷಕರಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈದಿನʼ ಮಾಧ್ಯಮದಲ್ಲಿ ಪ್ರಕಟವಾದ ವರದಿ ಓದಿ ಇಂದು ಶಾಲೆ ಭೇಟಿ ನೀಡಿದ್ದೇನೆ. ಶಾಲೆಯ ಏಳು ಕೋಣೆಗಳು ದುರಸ್ತಿ ಕಾಣದಷ್ಟು ಶಿಥಿಲಾವಸ್ಥೆಗೆ ತಲುಪಿವೆ. ಏಳು ಕೊಠಡಿಗಳು ನೆಲಸಮಗೊಳಿಸಲು ಅನುಮತಿಗಾಗಿ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿದ್ದೇವೆ. ಈ ಶಾಲೆಯಲ್ಲಿ ಶೇ 50ರಷ್ಟು ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಲ್ಲಿ ಶೀಘ್ರದಲ್ಲಿ ಹೊಸ ಏಳು ಕೋಣೆ ನಿರ್ಮಾಣಕ್ಕೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಮುಖಾಂತರ ಕೆಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಲಾಗುವುದುʼ ಎಂದು ಬಿಇಒ ಸಿ.ಜೆ.ಹಳ್ಳದ ʼಈದಿನʼಕ್ಕೆ ತಿಳಿಸಿದ್ದಾರೆ.

ಶಾಲೆ ಸ್ಥಳಾಂತರ :

ʼಶಾಲೆಯ ಎಲ್ಲ ಕೋಣೆಗಳು ಪೂರ್ಣ ಶಿಥಿಲಗೊಂಡಿದ್ದು, ಮಳೆಯಾದರೆ ಮಕ್ಕಳ ಕಲಿಕೆ ತೀವ್ರ ತೊಂದರೆಯಾಗುತ್ತಿದೆ. ಶಿಕ್ಷಕರು, ಮಕ್ಕಳು ಜೀವ ಭಯದಲ್ಲೇ ಇರುವ ಪರಿಸ್ಥಿತಿಯನ್ನು ಕಂಡ ಬಿಇಒ ಅವರು ತಾತ್ಕಾಲಿಕವಾಗಿ ಅದೇ ಆವರಣದಲ್ಲಿರುವ ಕನ್ನಡ-ಉರ್ದು ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ನಾಲ್ಕು ಕೋಣೆಗಳಲ್ಲಿ ಪ್ರೌಢ ಶಾಲೆ ಮಕ್ಕಳಿಗೆ ತರಗತಿ ನಡೆಸಲು ತಿಳಿಸಲಾಗಿದೆʼ ಎಂದರು.

ಇದನ್ನೂ ಓದಿ : ಬೀದರ್‌ | ಸೋರುವ ಕೊಠಡಿಯಲ್ಲಿ ಮಕ್ಕಳ ಕಲಿಕೆ : ಜೋರು ಮಳೆ ಬಂದ್ರೆ ಶಾಲೆಗೆ ರಜೆ!

ʼಶಾಲೆಯಲ್ಲಿ 8 ರಿಂದ 10ನೇ ತರಗತಿವರೆಗೆ 119 ವಿದ್ಯಾರ್ಥಿಗಳ ಓದುತ್ತಿದ್ದಾರೆ. ಒಟ್ಟು 10 ಜನ ಶಿಕ್ಷಕರಿದ್ದಾರೆ. ಸೋರುವ ಕೊಠಡಿಗಳಲ್ಲೇ ಸುರಕ್ಷಿತವಾಗಿ ಮಕ್ಕಳನ್ನು ಕೂರಿಸಿ ಪಾಠ ಮಾಡುವುದು ಇಲ್ಲಿನ ಶಿಕ್ಷಕರಿಗೆ ತಲೆ ನೋವಾಗಿ ಪರಿಣಮಿಸಿತು. ʼಈದಿನʼ ವರದಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಿರುವುದು ಆತಂಕ ದೂರ ಮಾಡಿದೆʼ ಎಂದು ಶಿಕ್ಷಕರು, ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...