ಬೀದರ್‌ | ʼಈದಿನʼ ವರದಿಗೆ ಸ್ಪಂದನೆ : ಚಟ್ನಾಳ ಗ್ರಾಮಕ್ಕೆ ಜಿಪಂ ಸಿಇಒ ಭೇಟಿ, ಜೆಜೆಎಂ ಕಾಮಗಾರಿ ಪರಿಶೀಲನೆ

Date:

ಔರಾದ್‌ ತಾಲೂಕಿನ ಶೆಂಬೆಳ್ಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಟ್ನಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಮಂಗಳವಾರ ಭೇಟಿ ನೀಡಿ ಜಲ ಜೀವನ್‌ ಮಿಷನ್‌ ಕಾಮಗಾರಿ ಪರಿಶೀಲಿಸಿದರು.

ಚಟ್ನಾಳ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಜೆಜೆಎಂ ಕಾಮಗಾರಿ ನಡೆಯುತ್ತಿದ್ದು ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಬೇಸಿಗೆ ಸಂದರ್ಭದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿತು. ಮಳೆ ಆರಂಭವಾದರೂ ಗ್ರಾಮಸ್ಥರಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ. ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಕೊಳವೆ ಬಾವಿಯೊಂದರ ನೀರು ಕಲುಷಿತಗೊಂಡಿರುವ ಬಗ್ಗೆ ಪಂಚಾಯಿತಿ ಅಧಿಕಾರಿಗಳೇ ಖುದ್ದು ವರದಿ ನೀಡಿದ್ದಾರೆ. ಸಮಸ್ಯೆ ಕುರಿತು ಜುಲೈ 24ರಂದು ʼಈದಿನʼನಲ್ಲಿ ʼಜೆಜೆಎಂ ಅಪೂರ್ಣ : ಕೆಸರು ಗದ್ದೆಯಂತಾದ ರಸ್ತೆ, ಚರಂಡಿಗಳು; ಸ್ವಚ್ಛತೆ ಮರೀಚಿಕೆ!ʼ ತಲೆಬರಹದಲ್ಲಿ ವರದಿ ಪ್ರಕಟವಾಗಿತ್ತು.

WhatsApp Image 2025 07 29 at 5.27.51 PM
ಬಲ್ಲೂರ(ಜೆ) ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡ ಬಗ್ಗೆ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಜೆಜೆಎಂ ಕಾಮಗಾರಿ, ಅಂಗನವಾಡಿ ಕೋಣೆ ಕಾಮಗಾರಿ ವೀಕ್ಷಿಸಿದರು. ಜೆಜೆಎಂ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ತ್ವರಿತವಾಗಿ ಕಾಮಗಾರಿ ಮುಗಿಸಿ ಪೈಪ್‌ಲೈನ್ ಅಗೆದಿರುವ ರಸ್ತೆ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಗ್ರಾಮದ ಮುಖ್ಯರಸ್ತೆಯಲ್ಲಿ ಚರಂಡಿ, ರಸ್ತೆ ಅವ್ಯವಸ್ಥೆ ಕಂಡು ಅಸಮಧಾನ ವ್ಯಕ್ತಪಡಿಸಿದ ಅವರು, ʼಸೂಕ್ತ ಚರಂಡಿ ವ್ಯವಸ್ಥೆ, ಸ್ವಚ್ಛತೆ ಯಾಕಿಲ್ಲʼ ಎಂದು ಗ್ರಾಮ ಪಂಚಾಯತ್‌ ಅಧಿಕಾರಿಗಳಿಗೆ ಪ್ರಶ್ನಿಸಿದರು. ಆಗ ಅಧಿಕಾರಿಗಳು ಹತ್ತು ದಿನದ ಒಳಗಾಗಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸುವುದಾಗಿ ಹೇಳಿದರು. ಇನ್ನು ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಇತರೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಬೇಡಿಕೆಯಿಟ್ಟರು.

WhatsApp Image 2025 07 29 at 5.33.12 PM
ಸಂತಪೂರ ಗ್ರಾಮದಲ್ಲಿ ಕಾಮಗಾರಿ ನಡೆಯುತ್ತಿರುವ ತೆರೆದ ಬಾವಿಗೆ ಭೇಟಿ ನೀಡಿ ವೀಕ್ಷಿಸಿದರು.

ತಾಲ್ಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಲ್ಲೂರ(ಜೆ) ಭೇಟಿ ನೀಡಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸಿ ನಲ್ಲಿಗಳಿಗೆ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಮಾಹಿತಿ ಪಡೆದರು. ಇನ್ನು ಸಂತಪೂರ ಹಾಗೂ ಬೆಳಕುಣಿ(ಚೌ) ಗ್ರಾಮಗಳಿಗೆ ಭೇಟಿ ನೀಡಿದ ಸಿಇಒ ಅವರು ಜಲ ಜೀವನ್‌ ಮಿಷನ್‌ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಪರಿಶೀಲಿಸಿದರು.

ಇದನ್ನೂ ಓದಿ : ಔರಾದ್ | ಜೆಜೆಎಂ ಅಪೂರ್ಣ : ಕೆಸರು ಗದ್ದೆಯಂತಾದ ರಸ್ತೆ, ಚರಂಡಿಗಳು; ಸ್ವಚ್ಛತೆ ಮರೀಚಿಕೆ!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ರಾಮಲಿಂಗ ಬಿರಾದರ್‌, ಔರಾದ್‌ ತಾಲೂಕು ಪಂಚಾಯತ್‌ ಇಒ ಶಿವಕುಮಾರ್‌ ಘಾಟೆ ಸೇರಿದಂತೆ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ ಮುಕರಂಬೆ, ಸಂತೋಷ ಪಾಟೀಲ್‌, ಆತ್ಮರಾಮ, ರಘುನಾಥ ರೆಡ್ಡಿ ಹಾಗೂ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...