ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕೀಟ್‌ : 4 ಎಕರೆ ಕಬ್ಬು ಬೆಂಕಿಗಾಹುತಿ, ಪರಿಹಾರಕ್ಕೆ ಮನವಿ

Date:

ಬೀದರ್ ತಾಲೂಕಿನ ತಡಪಳ್ಳಿ ಗ್ರಾಮದಲ್ಲಿಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆಗೆ ಶುಕ್ರವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ತಗುಲಿ ಕಬ್ಬಿನ ಬೆಳೆ ಸುಟ್ಟುಹೋಗಿದೆ.

ತಡಪಳ್ಳಿ ಗ್ರಾಮದ ಭೀಮಣ್ಣ ತುಕ್ಕಪ್ಪಾ ಹಾಗೂ ಯಶೋಧ ದೇವೇಂದ್ರಪ್ಪ ಎಂಬುವರಿಗೆ ಸೇರಿದ ಸರ್ವೇ ನಂ-111ರಲ್ಲಿ ಬೆಳೆದಿದ್ದ ಒಟ್ಟು 4.20 ಎಕರೆ ಕಬ್ಬು ಸುಟ್ಟು ಕರಕಲಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಶಾರ್ಟ್‌ ಸರ್ಕ್ಯೂಟ್‌ ದುರಂತದಿಂದ ಅಂದಾಜು ₹4.50 ಲಕ್ಷ ಮೌಲ್ಯದ ಕಬ್ಬು ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ನಂದಿಸಿದ್ದಾರೆ. ಆದರೆ, ಕಟಾವಿಗೆ ಬಂದಿದ್ದ ಬಹುತೇಕ ಕಬ್ಬು ಸುಟ್ಟು ಭಸ್ಮವಾಗಿದೆ ಎಂದು ರೈತರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 19 at 3.20.54 PM
ಅಗ್ನಿಶಾಮಕ ಸಿಬ್ಬಂದಿ ಜಮೀನಿಗೆ ತೆರಳಿ ನಂದಿಸಿದರು.

ಬ್ಯಾಂಕ್‌ ಸಾಲ ಪಡೆದು ಕಬ್ಬು ಬೆಳೆದು, ಉತ್ತಮ ಆದಾಯ ನಿರೀಕ್ಷೆಯಲ್ಲಿದ್ದೆ. ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಬೆಳೆ ಸಂಪೂರ್ಣ ನಾಶವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ, ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೇಕೆ ಮಾಡುತ್ತಿಲ್ಲ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...