ಬೀದರ್‌ | ಡಾ.ಬಿ.ಆರ್.ಅಂಬೇಡ್ಕರ್‌ ಚಿಂತನೆ ಮೈಗೂಡಿಸಿಕೊಳ್ಳಿ : ಶ್ಯಾಮಸುಂದರ ಖಾನಾಪುರ್

Date:

ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿಂತನೆಗಳು ಕೊನೆಗೊಳ್ಳಬಾರದು. ಬಾಬಾ ಸಾಹೇಬರ ಸಂದೇಶಗಳನ್ನು ಎದೆಯೊಳಗೆ ಇಳಿಸಿಕೊಂಡು ಸಮಾಜದಲ್ಲಿ ನಿರಂತರವಾಗಿ ಬಿತ್ತಬೇಕಾಗಿದೆ. ಒಡೆದು ಹೋಗುತ್ತಿರುವ ಎಲ್ಲಾ ಜಾತಿ ಸಮುದಾಯಗಳನ್ನು ಒಗ್ಗೂಡಿಸುವುದು ಇಂದು ಅಗತ್ಯವಾಗಿದೆ ಎಂದು ಚಿಂತಕ ಶ್ಯಾಮಸುಂದರ್‌ ಖಾನಾಪುರ್‌ ಹೇಳಿದರು.

ಔರಾದ್‌ ತಾಲ್ಲೂಕಿನ ಲಿಂಗದಳ್ಳಿ(ಕೆ) ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ಸಮಿತಿಯಿಂದ ಆಯೋಜಿಸಿದ ಮಹಾತ್ಮ ಜ್ಯೋತಿಬಾ ಫುಲೆ ಜಯಂತಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ʼಯಾವುದೇ ಖಡ್ಗದಿಂದ ಆಗದೇ ಇರುವ ಮಹತ್ವದ ಕಾರ್ಯವನ್ನು ಬಾಬಾ ಸಾಹೇಬರು ಪೆನ್ನು, ಪುಸ್ತಕದಿಂದ ಮಾಡಿ ತೋರಿಸಿದ್ದಾರೆ. ಭಾರತ ದೇಶದ ಕೋಟ್ಯಂತರ ಜನರಿಗೆ ಪೆನ್ನು, ಪುಸ್ತಕ ಮೂಲಕ ಸ್ವಾತಂತ್ರ್ಯ, ಸಮಾನತೆ, ನ್ಯಾಯ ಹಾಗೂ ಭಾತ್ರತ್ವವನ್ನು ನೀಡಿದ್ದಾರೆ. ಅಂಬೇಡ್ಕರ್‌ ಅವರನ್ನು ಆರಾಧನೆಗಷ್ಟೇ ಸೀಮಿತಗೊಳಿಸದೆ ಅವರ ವಿದ್ವತ್ತು, ಪ್ರೀತಿ, ಕರುಣೆ ನಾವೆಲ್ಲರೂ ಮೈಗೂಡಿಸಿಕೊಂಡರೆ ಮಾತ್ರ ಪ್ರಬುದ್ಧ ಭಾರತ ನಿರ್ಮಾಣವಾಗಲು ಸಾಧ್ಯʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಭೀಮಶೇನರಾವ್‌ ಸಿಂಧೆ ಮಾತನಾಡಿ, ʼಬುದ್ಧ, ಬಸವ, ಅಂಬೇಡ್ಕರ್‌ ಅವರ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಮೌಲ್ಯಗಳು ಸಮಾಜಕ್ಕೆ ಮಾದರಿಯಾಗಿವೆ. ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನ ರಚಿಸಿದ ಬಾಬಾ ಸಾಹೇಬರು ಹುಟ್ಟಿದ ದಿನವೇ ದೇಶಕ್ಕೆ ಹೊಸ ಬೆಳಕು ಬಂದಿದೆ. ಅವರ ಆದರ್ಶಗಳನ್ನು ನಿಜ ಜೀವನದಲ್ಲಿ ಆಚರಣೆಗೆ ತರಬೇಕುʼ ಎಂದು ತಿಳಿಸಿದರು.

ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳಕರ್‌ ಮಾತನಾಡಿ, ʼಸಮಾಜದಲ್ಲಿ ಬೇರೂರಿದ ಕೆಟ್ಟ ಸಂಪ್ರದಾಯವನ್ನು ಕಿತ್ತೊಗೆದು ಮಕ್ಕಳಿಗೆ ಮೌಲ್ಯ ಶಿಕ್ಷಣ ನೀಡಿ ಅಂಬೇಡ್ಕರ್‌ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ದೇಶದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಭಗವಾನ್‌ ಬುದ್ಧರ ಧಮ್ಮ ಮಾರ್ಗದಲ್ಲಿ ಸಾಗಬೇಕು. ಜಾತಿ ವ್ಯವಸ್ಥೆ ಹೋಗಲಾಡಿಸಲು ಬಾಬಾ ಸಾಹೇಬರು ಬದುಕಿನುದ್ದಕ್ಕೂ ಹೋರಾಟ ನಡೆಸಿದರು. ಮೀಸಲಾತಿ ಹೆಸರಿನಲ್ಲಿ ಯಾರೊಬ್ಬರೂ ಬಾಬಾ ಸಾಹೇಬರ ಧಮ್ಮ ಮತ್ತು ಸಿದ್ಧಾಂತಕ್ಕೆ ದ್ರೋಹ ಬಗೆಯಬಾರದುʼ ಎಂದರು.

WhatsApp Image 2025 04 12 at 2.20.22 PM
ಲಿಂಗದಳ್ಳಿ(ಕೆ) ಗ್ರಾಮದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪ್ರತಿಮೆ ಅನಾವರಣಗೊಳಿಸಲಾಯಿತು.

ನ್ಯಾಯವಾದಿ ಶಿವರುದ್ರ ಕಾಂಬಳೆ, ದಲಿತ ಯುನಿಟಿ ಮ್ಯೂಮೆಂಟ್‌ ಸಂಸ್ಥಾಪಕ ವಿನೋದ ರತ್ನಾಕರ್‌, ಬಸವರಾಜ ಬಿರಾದರ್ ಮಾತನಾಡಿದರು. ಯುವ ಹೋರಾಟಗಾರ ರಾಹುಲ್‌ ಖಂದಾರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಿಪ್ಪಳಗಾವ್‌ ಬುದ್ಧ ವಿಹಾರದ ಭಂತೆ ಬೋಧಿರತ್ನಾ, ಯಲ್ಲಾಲಿಂಗ ಮಠದ ಶಂಕ್ರಯ್ಯಾ ಸ್ವಾಮಿ ದಿವ್ಯ ಸಾನಿಧ್ಯ ವಹಿಸಿದ್ದರು. ಶರಣಪ್ಪ ವೀರಪ್ಪ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಂವಿಧಾನ ಮೇಲೆ ಬೆಳಕು ಚೆಲ್ಲುವ ʼಭಾಗ್ಯವಿದಾತʼ ಕೃತಿ : ಧನರಾಜ ತುಡಮೆ

ಬೀದರ್‌ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ, ಬೀದರ್ ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ, ಬಿಎಸ್ಪಿ ಜಿಲ್ಲಾಧ್ಯಕ್ಷ ಕಪಿಲ್‌ ಗೋಡಭೋಲೆ, ಲಿಂಗದಳ್ಳಿ ಗ್ರಾ.ಪಂ.ಸದಸ್ಯ ಶ್ರೀಶೈಲ ಪಾಟೀಲ್‌, ದಸಂಸ ಮುಖಂಡರಾದ ಸುಭಾಷ ಲಾಧಾ, ಗಣಪತರಾವ್‌ ವಾಸುದೇವ ಪ್ರಮುಖರಾದ ಸುಧಾಕರ ಕೊಳ್ಳೂರ್‌,‌ ಮಾಣಿಕ ಹೆಗಡೆ, ಪಂಡಿತ, ಮಾಸ್ಟರ್‌, ಬಾಬುರಾವ್‌ ಮಾನೆ, ಪವನ ಮಿಠಾರೆ, ಫೀರ್ದೊಶ್ ಖಾನ್‌ ಪಟೇಲ್‌, ಪಂಡರಿ ಕಸ್ತೂರೆ, ಸಚಿನ್‌ ಗಿರಿ, ಪ್ರಕಾಶ ರಾವಣ, ಸಂತೋಷ ಸಿಂಧೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...