ಬೀದರ್‌ | ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಬಿಡುಗಡೆ

Date:

ಬೀದರ್ ಬೆಟರ್‍ಮೆಂಟ್ ಫೌಂಡೇಷನ್‍ನಿಂದ ಹೊರ ತರಲಾದ ತುರ್ತು ನೆರವಿನ ಸಂಖ್ಯೆಗಳ ಸ್ಟಿಕ್ಕರ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ನಗರದಲ್ಲಿ ಗುರುವಾರ ಬಿಡುಗಡೆ ಮಾಡಿದರು.

ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ನೆರವಾಗುವ ದಿಸೆಯಲ್ಲಿ ಫೌಂಡೇಷನ್ ತುರ್ತು ಸಂಖ್ಯೆಗಳ ಸ್ಟಿಕ್ಕರ್ ಹೊರ ತಂದಿರುವುದು ಪ್ರಶಂಸನೀಯ ಎಂದು ಹೇಳಿದರು.

ಫೌಂಡೇಷನ್ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಮಾತನಾಡಿ, ʼಫೌಂಡೇಷನ್‍ನಿಂದ ಮನೆ-ಮನೆಗೆ ಅಂಟಿಸಲು ತುರ್ತು ನೆರವಿನ ಸಂಖ್ಯೆಗಳ ಒಟ್ಟು 10 ಸಾವಿರ ಸ್ಟಿಕ್ಕರ್ ವಿತರಿಸಲಾಗುತ್ತಿದೆ. ಸ್ಟಿಕ್ಕರ್ ಪೊಲೀಸ್ ಠಾಣೆ, ಆಸ್ಪತ್ರೆ, ಆಂಬುಲನ್ಸ್, ಮಹಿಳಾ ಸಹಾಯವಾಣಿ, ರಾಷ್ಟ್ರೀಯ ಟೆಲಿಮೆಂಟಲ್ ಹೆಲ್ತ್ ಕಾರ್ಯಕ್ರಮ, ಜೆಸ್ಕಾಂ, ಏರ್‍ಪೋರ್ಟ್, ಮಹಾನಗರ ಪಾಲಿಕೆ ಸೇರಿದಂತೆ ಮಹತ್ವದ ದೂರವಾಣಿ ಸಂಖ್ಯೆಗಳನ್ನು ಒಳಗೊಂಡಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼತುರ್ತು ಸಂಖ್ಯೆಗಳು ಕಳ್ಳತನ, ಅಪಘಾತ, ಅನಾರೋಗ್ಯ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗಲಿವೆ. ಕಾರಣ, ಸಾರ್ವಜನಿಕರು ಮನೆಯ ಗೋಡೆ, ಬಾಗಿಲು ಮತ್ತಿತರ ಗಮನ ಸೆಳೆಯುವ ಸ್ಥಳಗಳಲ್ಲಿ ಸ್ಟಿಕ್ಕರ್ ಅಂಟಿಸಬೇಕುʼ ಎಂದು ಕೋರಿದರು.

ಇದೇ ವೇಳೆ ಬೀದರ್ ಬೆಟರ್‍ಮೆಂಟ್ ಫೌಂಡೇಷನ್ ವತಿಯಿಂದ ಕೈಗೊಳ್ಳಲಾದ ವಿವಿಧ ಸಾಮಾಜಿಕ ಕಾರ್ಯಗಳ ಸಂಕ್ಷಿಪ್ತ ವರದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸಲ್ಲಿಸಲಾಯಿತು.

ಇದನ್ನೂ ಓದಿ : ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

ಫೌಂಡೇಷನ್‍ನ ಡಾ.ಮಕ್ಸೂದ್ ಚಂದಾ, ಮುಹಮ್ಮದ್ ರಫಿಕ್ ಅಹಮ್ಮದ್, ಮುಹಮ್ಮದ್ ಹುಸೇನಿ, ಮುಕ್ತಾರ್ ಅಹಮ್ಮದ್, ಹಾಮೇದ್ ಖಾದ್ರಿ, ತಾಹ ಕಲೀಮುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...