ಬೀದರ್ | ಪ್ರಮಾಣ ಪತ್ರದ ಜೊತೆಗೆ ಉದ್ಯೋಗ

Date:

ಮಕ್ಕಳ ಶಿಕ್ಷಣ ಕಲಿಕೆ ನಿರಂತರವಾಗಿರಬೇಕು. ಕಾಲೇಜಿನಲ್ಲಿ ಬರೀ ಪ್ರಮಾಣ ಪತ್ರ ಕೊಟ್ಟು ಕಳಿಸುವುದಕ್ಕಿಂತ ಅವರ ಕೈಗೆ ಉದ್ಯೋಗ ಕೊಟ್ಟು ಕಳಿಸಬೇಕು. ಅದಕ್ಕಾಗಿ ನಮ್ಮಲ್ಲಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ್‌ನ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಮಲ್ಲಿಕಾರ್ಜುನ್ ಬಿ ಆರ್ ಹೇಳಿದರು.

ಬೀದರ್ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಡಿಪ್ಲೊಮಾ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ವರ್ಷದ ಡಿಪ್ಲೊಮಾ, ಮೆಕ್ಯಾನಿಕಲ್ ಹಾಗೂ ಆಟೋಮೊಬೈಲ್ ವಿದ್ಯಾರ್ಥಿಗಳಿಗೆ ಶೇ.100ರಷ್ಟು ಪ್ಲೇಸ್‌ಮೆಂಟ್ ದೊರಕಿದೆ. ಬಡ ವಿದ್ಯಾರ್ಥಿಗಳಿಗೆ ಕಲಿಯುವಿಕೆ ಜೊತೆಗೆ ತರಬೇತಿ ಹಾಗೂ ಉದ್ಯೋಗ ಕೊಡಿಸುವ ಕಾರ್ಯ ನಮ್ಮ ಪ್ಲೇ‌ಸ್‌ಮೆಂಟ್‌ ಘಟಕದ ಮುಖ್ಯ ಉದ್ದೇಶವಾಗಿದೆ” ಎಂದು ಪ್ಲೇಸ್‌ಮೆಂಟ್ ಅಧಿಕಾರಿ ಮಹೇಶ್ ಸ್ವಾಮಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ಪಾಲಿಟೆಕ್ನಿಕ್‌ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ವಿಜಯಕುಮಾರ್ ವಲ್ಲೂರು
ಮಾತನಾಡಿ, “ವಿದ್ಯಾರ್ಥಿಗಳು ಸಂದರ್ಶನದ ಸಂದರ್ಶನದ ಸದುಪಯೋಗ ಮಾಡಿಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ ಪಟ್ಟಣ ಪಂಚಾಯತಿಗೆ ಒಲಿಯುವುದೇ ಪುರಸಭೆ ಭಾಗ್ಯ?

ಜಿಲ್ಲೆಯ ಎಲ್ಲ ಕಾಲೇಜಿನ 120 ಮಂದಿ ಡಿಪ್ಲೊಮಾ ಹಾಗೂ ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ,ವೈಯಕ್ತಿಕ ಪರೀಕ್ಷೆ ನಡೆಸಿ ಡಿಪ್ಲೊಮಾ ಮೆಕ್ಯಾನಿಕಲ್, ಆಟೊಮೊಬೈಲ್, ಎಲೆಕ್ಟ್ರಿಕಲ್ ಸೇರಿದಂತೆ ಒಟ್ಟು 65 ಮಂದಿ ವಿದ್ಯಾರ್ಥಿಗಳು ಹಾಗೂ 10 ಮಂದಿ ಐಟಿಐ ವಿದ್ಯಾರ್ಥಿಗಳಿ ಉದ್ಯೋಗ ದೃಢೀಕರಣ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರೊಫೆಸರ್ ಅರುಣ್ ಮುಖಾಸಿ, ಪ್ಲೇಸ್‌ಮೆಂಟ್ ಅಧಿಕಾರಿ ಮಹೇಶ್ ಶಕೆದಾರ್, ರೆಜಿಸ್ಟರ್ ಶಿವರಾಜುದ್ದೀನ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...