ಬೀದರ್‌ | ಶರಣರ ವಚನಗಳಲ್ಲಿ ಪರಿಸರ ಪ್ರಜ್ಞೆ : ಶಿವಲಿಂಗ ಹೇಡೆ

Date:

ಬಸವಾದಿ ಶರಣರ ವಚನಗಳಲ್ಲಿ ಪರಿಸರ ಪ್ರಜ್ಞೆ ತುಂಬಿ ತುಳುಕುತ್ತಿದೆ ಎಂದು ಶಿಕ್ಷಕ ಡಾ.ಶಿವಲಿಂಗ ಹೇಡೆ ಹೇಳಿದರು.

ಲಿಂಗಾಯತ ಮಹಾ ಮಠದ ವತಿಯಿಂದ ನಗರದ ಬಸವಗಿರಿಯಲ್ಲಿ ಸೋಮವಾರ ನಡೆದ 264ನೇ ಶರಣ ಸಂಗಮ ಕಾರ್ಯಕ್ರಮದಲ್ಲಿ ‘ಶರಣರು ಮತ್ತು ಪರಿಸರ’ ಕುರಿತು ಅವರು ಉಪನ್ಯಾಸ ನೀಡಿದರು.

ಪಶು, ಪ್ರಾಣಿ, ಕ್ರಿಮಿ ಕೀಟ, ಸಸ್ಯ ಸಂಕುಲ ಸಮತೋಲನದಿಂದಿದ್ದರೆ ಜಗತ್ತು ಚೆನ್ನಾಗಿರುತ್ತದೆ. ಪರಿಸರ ಉತ್ತಮವಾಗಿದ್ದರೆ ಮಾತ್ರ ಎಲ್ಲರೂ ಸುಖವಾಗಿ ಬಾಳಲು ಸಾಧ್ಯವಾಗುತ್ತದೆ. ಪರಿಸರದ ಮೇಲೆ ಮಾನವನ ದೌರ್ಜನ್ಯ ನಿಲ್ಲಬೇಕು. ಪಂಚಭೂತಗಳು ದೇವರ ಭಿಕ್ಷೆ. ಅವುಗಳನ್ನು ಕಲುಷಿತಗೊಳಿಸುವುದು ಮನುಷ್ಯನಿಗೆ ಸಲ್ಲದು. ಬಸವಣ್ಣ ಒಂದು ಜೀವಿಗೂ ತೊಂದರೆ ಕೊಡಲಾರೆನೆಂದರು. ಕೊಲ್ಲೆನಯ್ಯ, ಮೆಲ್ಲೆನಯ್ಯ ಎಂದು ದಯವೇ ಧರ್ಮದ ಮೂಲವೆಂದರು. ಭಯದ ಧರ್ಮ ಬೇಡʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾನಿಧ್ಯ ವಹಿಸಿದ್ದ ಪ್ರಭುದೇವ ಸ್ವಾಮೀಜಿ ಮಾತನಾಡಿ, ʼಸಸ್ಯಗಳಲ್ಲಿಯೂ ಜೀವ ಇದೆ ಎಂದು ಶರಣರು 900 ವರ್ಷಗಳ ಹಿಂದೆಯೇ ಕಂಡುಕೊಂಡಿದ್ದರು. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭುದೇವರು ಸೇರಿದಂತೆ ಅನೇಕ ಶರಣರು ಪ್ರಕೃತಿ, ಗಿಡ-ಮರಗಳ ಕುರಿತು ತಮ್ಮ ವಚನಗಳಲ್ಲಿ ಉಲ್ಲೇಖಿಸಿದ್ದಾರೆ. ಅವುಗಳನ್ನು ಇಂದು ನಾವು ತಿಳಿದುಕೊಂಡು ಅನುಸರಿಸಬೇಕಿದೆʼ ಎಂದು ಹೇಳಿದರು.

ʼಎಲ್ಲರೂ ಪರಿಸರ ಉಳಿಸುವ ಪಣ ತೊಡಬೇಕು. ಒಬ್ಬ ವ್ಯಕ್ತಿ ವರ್ಷಕ್ಕೆ ಒಂದು ಸಸಿಯಾದರೂ ನೆಟ್ಟು ಬೆಳೆಸಬೇಕು. ಆಗ ಜಗತ್ತು ಸುಂದರವಾಗುತ್ತದೆ. ಮಹಾ ಮಠದಿಂದ ಆರಂಭಿಸಿರುವ ಹಸಿದವರಿಗೆ ಅನ್ನ ಕೊಡುವ ಅನ್ನಪೂರ್ಣ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ. ಯೋಜನೆಗೆ ಎಲ್ಲರೂ ಸಹಕರಿಸಬೇಕುʼ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಮೋಳಕೇರಿ ಉದ್ಘಾಟಿಸಿದರು. ನೀಲಮ್ಮನ ಬಳಗದ ಸಹೋದರಿಯರು ಪ್ರಾರ್ಥನೆ ನಡೆಸಿಕೊಟ್ಟರು. ಪರುಷಕಟ್ಟೆಯ ಚನ್ನಬಸವಣ್ಣ, ಶ್ಯಾಮಲಾ ಎಲಿ ಸುಶ್ರಾವ್ಯವಾಗಿ ವಚನ ಗಾಯನ ಮಾಡಿದರು.

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಹುದ್ದೆಯಿಂದ ನಿವೃತ್ತರಾದ ಮಲ್ಲಿಕಾರ್ಜುನ ಮೋಳಕೇರಿ, ಶಿಕ್ಷಕ ವೈಜಿನಾಥ ಹುಣಚಗೇರಿ, ಕರ್ನಾಟಕ ಸಿವಿಲ್ ಎಂಜಿನಿಯರ್ಸ್ ಪರಿಷತ್ ಸದಸ್ಯರಾಗಿ ನೇಮಕಗೊಂಡ ಹಾವಶೆಟ್ಟಿ ಪಾಟೀಲ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಶಿವಲಿಂಗ ಹೇಡೆ ಅವರಿಗೆ ಸನ್ಮಾನ ಪತ್ರ ನೀಡಿ ಅಭಿನಂದಿಸಲಾಯಿತು.

ಇದನ್ನೂ ಓದಿ : ಬೀದರ್‌ | ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು

ಮಾಣಿಕಪ್ಪ ಗೋರನಾಳೆ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ರಮೇಶ ಮಠಪತಿ ಉಪಸ್ಥಿತರಿದ್ದರು. ಚನ್ನಬಸಪ್ಪ ಹಂಗರಗಿ ಸ್ವಾಗತಿಸಿದರು. ಜಗದೇವಿ ಜಗನ್ನಾಥ ಚಿಮಕೋಡೆ ಗುರುಪೂಜೆಗೈದು, ಭಕ್ತಿ ದಾಸೋಹಗೈದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...