ಬೀದರ್ | ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕು : ಪಟ್ಟು ಹಿಡಿದ ರೈತರು, ಧರಣಿ ಆರಂಭ

Date:

ಸರ್ಕಾರ ಘೋಷಿಸಿರುವ ಪ್ರತಿ ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕೆಂದು ಪಟ್ಟು ಹಿಡಿದ ಕಬ್ಬು ಬೆಳೆಗಾರರು ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ಮತ್ತೆ ಪುನಾರಂಭಿಸಿದ್ದಾರೆ.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ನೇತೃತ್ವದಲ್ಲಿ ಈ ಹಿಂದೆ ಎರಡು ಸಭೆ ನಡೆಸಲಾಗಿತ್ತು. ಜಿಲ್ಲಾಧಿಕಾರಿಗಳು ₹2,850 ನೀಡುವುದಾಗಿ ತಿಳಿಸಿದರು. ಅದಕ್ಕೆ ಒಪ್ಪದ ರೈತರು ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಬುಧವಾರ ಹುಮನಾಬಾದ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದರು. ಪ್ರತಿಭಟನೆಗೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸಾಥ್ ನೀಡಿದರು.

ಬುಧವಾರ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿ ಗುರುವಾರ ಮತ್ತೊಂದು ಸಭೆ ಮಾಡುವುದಾಗಿ ರೈತರಿಗೆ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರು, ಕಬ್ಬು ಬೆಳೆಗಾರರು ಹಾಗೂ ರೈತರ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

‘ಈ ವರ್ಷ ಅತಿವೃಷ್ಟಿಯಿಂದಾಗಿ ಬಹುತೇಕ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,100 ದರ ನಿಗದಿಪಡಿಸಬೇಕು’ ಎಂದು ಸಭೆಯಲ್ಲಿ ರೈತ ಮುಖಂಡರು ಆಗ್ರಹಿಸಿದರು

ಅದಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರತಿಕ್ರಿಯಿಸಿ, ‘ರೈತರು ಹಾಗೂ ಕಾರ್ಖಾನೆಗಳು ಇಬ್ಬರೂ ಉಳಿಯಬೇಕು. ಬೀದರ್ ಜಿಲ್ಲೆಯಲ್ಲಿ ಕಬ್ಬಿಗೆ 9.6ರಷ್ಟು ರಿಕವರಿ ಇದೆ. ಹಾವೇರಿಯಲ್ಲಿಯೂ ಸಹ ಇಷ್ಟೇ ಇದೆ. ಅಲ್ಲಿಯ ರೈತರು ₹2,900 ದರಕ್ಕೆ ಒಪ್ಪಿಕೊಂಡಿದ್ದಾರೆ. ನಿಮಗೂ ಅದೇ ದರ ನೀಡುತ್ತೇವೆ’ ಎಂದು ಹೇಳಿದರು.

1004642061
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ರೈತ ಮುಖಂಡರು, ಸಕ್ಕರೆ ಕಾರ್ಖಾನೆ ಅಧ್ಯಕ್ಷರು, ನಿರ್ದೇಶಕರು ಪಾಲ್ಗೊಂಡಿದ್ದರು.

ಬೀದರ್ ಜಿಲ್ಲೆಯಲ್ಲಿ ಪ್ರತಿ ಟನ್ ಕಬ್ಬಿಗೆ ₹2,900 ದರ ನಿಗದಿಪಡಿಸುವುದಾಗಿ ಎಂದ ಅವರು, ಕಳೆದ ವರ್ಷಕ್ಕಿಂತ ₹250 ಹೆಚ್ಚಿನ ದರ ರೈತರಿಗೆ ಲಭಿಸಲಿದೆ. ಅಲ್ಲದೇ ₹2,900 ದರದಂತೆ ಕಾರ್ಖಾನೆಗಳು ತಪ್ಪದೇ ಜಮೆ ಮಾಡುವಂತೆ ತಾವು ಜವಾಬ್ದಾರಿ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಬ್ಬಿಗೆ ₹2,900 ಬೆಲೆ ನಿಗದಿಗೆ ಒಮ್ಮತ ಸೂಚಿಸದ ರೈತ ಮುಖಂಡರು ತಮ್ಮ ಹೋರಾಟ ಮುಂದುವರೆಸುವುದಾಗಿ ತಿಳಿಸಿ ಹೊರ ಬಂದರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಕಾರ್ಯಾಲಯ ಎದುರು ಧರಣಿ ಆರಂಭಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನ್ಯಾಯಯುತ ಬೆಲೆ ನಿಗದಿಗೆ ಆಗ್ರಹಿಸಿದರು.

‘ಬೀದರ್ ಜಿಲ್ಲೆಯಲ್ಲಿ ಸುಮಾರು 50 ಸಾವಿರ ಎಕರೆಯಲ್ಲಿ ಕಬ್ಬು ಬೆಳೆಯಲಾಗಿದ್ದು, 15 ಲಕ್ಷ ಟನ್‌ಗಳಿಗಿಂತ ಅಧಿಕ ಉತ್ಪಾದನೆ ನಿರೀಕ್ಷೆಯಿದೆ. ಈ ಪರಿಸ್ಥಿತಿಯಲ್ಲಿ ರೈತರಿಗೆ ನ್ಯಾಯಯುತ ಬೆಲೆ ನೀಡಬೇಕು. ಕನಿಷ್ಠ ₹3,100 ಬೆಲೆ ಕೊಡದಿದ್ದರೆ ಜಿಲ್ಲಾದ್ಯಂತ ಹೋರಾಟ ಚುರುಕುಗೊಳಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

‘ಜಿಲ್ಲಾಧಿಕಾರಿಗಳು ಈ ಹಿಂದೆ ನಡೆಸಿದ ಎರಡು ಸಭೆಗಳು ವಿಫಲವಾಗಿದವು. ಮೂರನೇ ಸಭೆಯಲ್ಲಿ ಕಬ್ಬಿಗೆ ಸೂಕ್ತ ಬೆಲೆ ನಿಗದಿ ಆಗುವ ನಿರೀಕ್ಷೆಯಿತ್ತು. ಈಗ ಅದೂ ಹುಸಿಯಾಗಿದೆ. ಕಾರ್ಖಾನೆಗಳು ರೈತರನ್ನು ಶೋಷಣೆಗೆ ಒಳಪಡಿಸುತ್ತಿವೆ. ಕಬ್ಬಿಗೆ ಕನಿಷ್ಠ ₹3,100 ಬೆಲೆ ನೀಡಲೇಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಯಲಿದೆ’ ಎಂದು ಹೇಳಿದರು.

ಇದನ್ನೂ ಓದಿ : ಬೀದರ್ | ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದ ಆರೋಪ : ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಅಮಾನತು

ಧರಣಿಯಲ್ಲಿ ಸಿದ್ರಾಮಪ್ಪಾ ಆಣದೂರೆ, ದಯಾನಂದ ಸ್ವಾಮಿ, ಶಂಕರೆಪ್ಪಾ ಮರ್ಕಲ್, ಕೊಂಡಿಬಾ ಪಾಂಡ್ರೆ, ಶಿವರಾಜ ಪಾಟೀಲ್, ಬಾಬುರಾವ್ ಹೊನ್ನಾ, ನಜೀರ್ ಅಹ್ಮದ್ ಚೊಂಡಿ, ಪ್ರಕಾಶ ಬಾವಗೆ, ಶಾಂತಮ್ಮ ಮೂಲಗೆ, ಶಿವಲೀಲಾ ಹೋಳಸಮುದ್ರ, ಬಸವರಾಜ ಅಷ್ಟೂರೆ, ವಿಜಯಕುಮಾರ ಬಾವಗೆ, ವೀರಾರೆಡ್ಡಿ, ವಿಠಲರಾವ, ನಾಗಶೆಟ್ಟಿ, ಭೀಮರಾವ, ಖಮರ ಪಟೇಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...