ಬೀದರ್‌ | ಕನ್ನಡ ಶಾಲೆಗಳ ಉಳಿವಿಗೆ ಹೋರಾಟ; ಕಸಾಪ ಸಂಪೂರ್ಣ ಬೆಂಬಲ

Date:

ಕನ್ನಡ ಶಾಲೆಗಳ ಉಳಿವಿಗೆ ಬರುವ ದಿನಗಳಲ್ಲಿ ಹೋರಾಟ ನಡೆಸಲು ಕನ್ನಡ ಜನ ಜಾಗೃತಿ ಸಮಿತಿಯ ಜಿಲ್ಲಾ ಘಟಕ ಸೋಮವಾರ ಇಲ್ಲಿ ನಿರ್ಣಯಿಸಿತು.

ಬೀದರ್‌ ನಗರದ ಜಿಲ್ಲಾ ಕನ್ನಡ ಭವನದಲ್ಲಿ ಕನ್ನಡ ಜನ ಜಾಗೃತಿ ಸಮಿತಿಯ ಜಿಲ್ಲಾ ಘಟಕದ ಮುಂದಾಳತ್ವದಲ್ಲಿ ನಡೆದ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಈ ಕುರಿತು ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು.

ಕನ್ನಡ ಜನ ಜಾಗೃತಿ ಸಮಿತಿಯ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ʼಕನ್ನಡ ಪರ ಸಂಘಟನೆಗಳ ರಾಜ್ಯ ಪ್ರಮುಖರ ಭೇಟಿಗೆ ಶೀಘ್ರದಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ನಿಯೋಗ ಬೆಂಗಳೂರಿಗೆ ಒಯ್ಯಲಾಗುವುದು. ಕನ್ನಡ ಪರ ಸಂಘಟನೆಗಳ ಪ್ರಮುಖರಿಗೆ ಕನ್ನಡ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮನವರಿಕೆ ಮಾಡಲಾಗುವುದು. ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗುವುದುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸುರೇಶ ಚನಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಕನ್ನಡ ನೆಲ, ಜಲ, ಸಂಸ್ಕೃತಿಯ ಉಳಿವಿಗೆ ಕನ್ನಡ ಶಾಲೆಗಳ ಉಳಿವು ಬಹಳ ಅವಶ್ಯಕವಾಗಿದೆ. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಲು ನಡೆಸುವ ಎಲ್ಲ ಹೋರಾಟಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಸಂಪೂರ್ಣ ಬೆಂಬಲ ನೀಡಲಿದೆʼ ಎಂದು ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳಕರ್, ಜಯ ಕರ್ನಾಟಕ ಜನ ಪರ ವೇದಿಕೆಯ ಸಂಜು ಡೊಳ್ಳೆ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಪೀಟರ್ ಚಿಟಗುಪ್ಪ, ಕನ್ನಡ ಸೇನೆ ಕರ್ನಾಟಕದ ಜಿಲ್ಲಾಧ್ಯಕ್ಷ ರವಿ ಸ್ವಾಮಿ ನಿರ್ಣಾ, ಸಾಹಿತಿಗಳಾದ ಎಸ್.ಎಂ. ಜನವಾಡಕರ್, ಶಿಕ್ಷಣ ತಜ್ಞ ಸೋಮನಾಥ ಮುದ್ದಾ, ಗುರುನಾಥ ದೇಶಮುಖ ಸಂತಪುರ, ಬಸವರಾಜ ಶೆಟಕಾರ್ ಔರಾದ್, ಮಾಣಿಕಪ್ಪ ಗೋರನಾಳೆ ಮಾತನಾಡಿದರು.

ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಅಧ್ಯಕ್ಷ ರಾಜೇಂದ್ರ ಮಣಗೇರಿ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಕನ್ನಡ ಸಾಹಿತ್ಯ ಪರಿಷತ್‍ನ ರೂಪಾ ಪಾಟೀಲ್‌, ಶಿವಲೀಲಾ ಬಂಡೆ, ವಿನಯಕುಮಾರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...