ಬೀದರ್‌ | ಪೋಷಕರಿಲ್ಲದ ಪ್ರತಿಭಾವಂತೆ ಶಿಕ್ಷಣಕ್ಕೆ ದಾನಿಗಳಿಂದ ₹2.35 ಲಕ್ಷ ಆರ್ಥಿಕ ನೆರವು

Date:

ಎಸ್ಸೆಸ್ಸೆಲ್ಸಿಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣಳಾದ ಗ್ರಾಮೀಣ ಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿನಿಗೆ ಸಾರ್ವಜನಿಕರಿಂದ ಆರ್ಥಿಕ ನೆರವು ಹರಿದುಬಂದಿದೆ.

ಬೀದರ್‌ ಜಿಲ್ಲೆ ಔರಾದ ತಾಲೂಕಿನ ಯನಗುಂದಾ ಪ್ರೌಢ ಶಾಲೆಯಲ್ಲಿ ಶೇ.92.48ರಷ್ಟು ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿ ಬಸವಜ್ಯೋತಿ ಅಜ್ಜ-ಅಜ್ಜಿಯ ಆಶ್ರಯದಲ್ಲಿ ಓದುತ್ತಿದ್ದಳು. ವಿದ್ಯಾರ್ಥಿನಿಯ ಮುಂದಿನ ವಿದ್ಯಾಭ್ಯಾಸದ ಖರ್ಚು-ವೆಚ್ಚ ಭರಿಸುವುದೇ ದೊಡ್ಡ ಚಿಂತೆ ಆಗಿತ್ತು. ಕಾಲೇಜು ಶಿಕ್ಷಣದಿಂದ ವಂಚಿತಳಾಗುವ ಭಯ ಕಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಈಕೆಯ ಮುಂದಿನ ಅಧ್ಯಯನಕ್ಕೆ ಆರ್ಥಿಕ ಸಹಕಾರ ನೀಡುವಂತೆ ಕೋರಿ ಈ ದಿನ.ಕಾಮ್‌ ಮೇ 16 ರಂದು “ಬೀದರ್ | ಪೋಷಕರಿಲ್ಲದ ಪ್ರತಿಭಾವಂತ ಬಾಲಕಿಯ ಶಿಕ್ಷಣಕ್ಕೆ ಬೇಕಿದೆ ಸಹಾಯಹಸ್ತ” ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.

ವರದಿಗೆ ಸ್ಪಂದಿಸಿದ ದಾನಿಗಳು ವಿದ್ಯಾರ್ಥಿನಿ ಓದಿಗೆ ಸಹಾಯ ಮಾಡಿದ್ದು, ಆರ್ಥಿಕ ನೆರವು ನೀಡಿದ್ದಾರೆ.‌ ಎಲ್ಲರ ಸಹಕಾರದಿಂದ ವಿದ್ಯಾರ್ಥಿನಿ ಬಸವಜ್ಯೋತಿಗೆ ಬರೋಬ್ಬರಿ ₹2,35,940 ಸಂಗ್ರಹವಾಗಿದೆ. ವರದಿ ಪ್ರಕಟಿಸಿದ ಈ ದಿನ.ಕಾಮ್ ತಂಡಕ್ಕೆ ಶಾಲೆಯ ಮುಖ್ಯಶಿಕ್ಷಕ ಶಾಮಸುಂದರ ಖಾನಾಪೂರಕರ್ ಧನ್ಯವಾದ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಶಿಕ್ಷಕ ಶಾಮಸುಂದರ ಖಾನಾಪೂರಕರ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬಸವಜ್ಯೋತಿಗೆ ರಾಜ್ಯದ ಹಲವು ಭಾಗಗಳಿಂದ ಪ್ರಜ್ಞಾವಂತರು ತಮ್ಮ ತಮ್ಮ ಕೈಲಾದಷ್ಟು ಆರ್ಥಿಕ ನೇರವು ‌ನೀಡಿದ್ದರ ಪ್ರತಿಫಲವಾಗಿ ಇಂದು ಆಕೆ ಬೀದರ್‌ನ ಪ್ರತಿಷ್ಠಿತ ಜ್ಞಾನ ಸುಧಾ ವಿದ್ಯಾಲಯದಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಾಳೆ. ಕಾಲೇಜಿನ ಆಡಳಿತ ಮಂಡಳಿ ಅವರು ಕಾಲೇಜು ಮತ್ತು ವಸತಿ ಶುಲ್ಕದಲ್ಲಿ ಒಂದಿಷ್ಟು ವಿನಾಯತಿ ನೀಡಿದ್ದಾರೆ. ಸದ್ಯ ನಡೆದ ಘಟಕ ಪರಿಕ್ಷೆಯಲ್ಲಿ ಬಸವಜ್ಯೋತಿ ಉತ್ತಮ ಅಂಕ ಪಡೆದುಕೊಳ್ಳುತ್ತಿದ್ದಾಳೆಂದು ಕಾಲೇಜಿನ ಉಪನ್ಯಾಸಕರು ತಿಳಿಸಿರುವುದು ನಮೇಲ್ಲರ ಪ್ರಯತ್ನ ದಾನಿಗಳ ಸಹಕಾರ ಸಾರ್ಥಕವಾಗುತ್ತದೆ ಎನ್ನುವ ಬಲವಾದ ನಂಬಿಕೆ ಮೂಡುವಂತೆ ಮಾಡಿದೆ” ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅಪ್ರಾಪ್ತೆಯನ್ನು ವಿವಾಹವಾದ ಸರ್ಕಾರಿ ಶಾಲೆ ಶಿಕ್ಷಕ; ಪ್ರಕರಣ ದಾಖಲು

ಸಾರ್ವಜನಿಕರ ಸಾಂಘಿಕ ಪ್ರಯತ್ನಕ್ಕೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಿವರಾಜ ಶೆಟಕಾರ ಸೇರಿದಂತೆ ಶಿಕ್ಷಕರುಗಳಾದ ಬಸವರಾಜ ಮಠಪತಿ, ಮಲ್ಲಿಕಾರ್ಜುನ ಟಂಕಸಾಲೆ, ಅನಿಲಕುಮಾರ ಮಾಟೆ, ಖುರ್ರಮ್ ಗುಲಾಮ, ಮುಸ್ತಫಾ ಆಜಾದ್, ಲಕ್ಷ್ಮಣರಡ್ಡಿ ಗಂಗಾಪೂರೆ, ತೇಜಸ್ವಿ ಚಾಂದಕವಠೆ, ಉದಯಕುಮಾರ್ ಹಾಗೂ ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...