ಬೀದರ್‌ | ಇಬ್ಬರು ನಕಲಿ ವೈದ್ಯರಿಗೆ ದಂಡ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

ಔರಾದ್‌ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದ ನಕಲಿ ವೈದ್ಯ ನಾರಾಯಣರಾವ್‌ ಕುಲಕರ್ಣಿ, ಬಸವರಾಜ ಒಂಟೆ ಅವರಿಗೆ ತಲಾ ₹50 ಸಾವಿರ ಹಾಗೂ ಸ್ಟಾಫ್ ನರ್ಸ್‌ ಪ್ರೇಮಾ ಜೀರಗೆ ಅವರಿಗೆ ₹1 ಲಕ್ಷ ದಂಡ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಬೀದರ್ ನಗರದಲ್ಲಿ ಗುರುವಾರ ನಡೆದ ಜಿಲ್ಲಾ ನೋಂದಣಿ ಮತ್ತು ಕುಂದು ಕೂರತೆ ಪರಿಹಾರ ಪ್ರಾಧಿಕಾರದ ಸಭೆಯ‌ ಅಧ್ಯಕ್ಷತೆ ವಹಿಸಿ‌ ಅವರು ಮಾತನಾಡಿದರು.

ʼಈ ಮೂವರು ಯಾವುದೇ ವೈದ್ಯಕೀಯ ಪದವಿ ಪಡೆದಿಲ್ಲ. ಇದರ ಬಗ್ಗೆ ದೂರುಗಳು ಬಂದಿದ್ದವು. ಔರಾದ್‌ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಗಾಯತ್ರಿ ಹಾಗೂ ಜಿಲ್ಲಾ ಕೆಪಿಎಂಇ ನೋಡಲ್‌ ಅಧಿಕಾರಿ ಡಾ ದಿಲೀಪ್ ಡೋಂಗ್ರೆ ಅವರು ಮುಧೋಳ(ಬಿ) ಗ್ರಾಮಕ್ಕೆ ಭೇಟಿ ನೀಡಿ ಕ್ಲಿನಿಕ್‌ಗಳನ್ನು ಸೀಜ್‌ ಮಾಡಿದ್ದಾರೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ.ರಂಜಿತ ಬಿರಾದಾರ ಅವರು ಮಹಾರಾಷ್ಟ್ರ ರಾಜ್ಯದಲ್ಲಿ ಆಯುರ್ವೇದ ಪದ್ದತಿಯಲ್ಲಿ ಪದವಿ ಹೊಂದಿದ್ದಾರೆ. ಆದರೆ, ಔರಾದ್‌ ತಾಲ್ಲೂಕಿನ ಏಕಂಬಾ ಗ್ರಾಮದಲ್ಲಿ ಅಲೋಪತಿ ವೈದ್ಯ ವೃತ್ತಿ ನಡೆಸುತ್ತಿದ್ದಾರೆ. ಆದರೆ, ಕರ್ನಾಟಕ ರಾಜ್ಯದಲ್ಲಿ ವೈದ್ಯ ವೃತ್ತಿ ನಡೆಸಬೇಕಾದರೆ ಕೆಪಿಎಂಇ ಕಾಯ್ದೆ ಪ್ರಕಾರ ಕರ್ನಾಟಕ ಆಯುರ್ವೇದ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿ ಮಾಡಿಸಿ ಮಂಡಳಿಯಿಂದ ಪ್ರಮಾಣ ಪತ್ರ ಪಡೆಯಬೇಕು. ಇದು ಕೆಪಿಎಂಇ ಕಾಯ್ದೆ 2007ರ ಕಲಂ 19 ಮತ್ತು 22ರ ಸ್ಪಷ್ಟ ಉಲ್ಲಂಘನೆ ಆಗಿರುವುದರಿಂದ ಕ್ರಮ ಕೈಗೊಳ್ಳಲಾಗಿದೆ. ಮುಂದೆ ವೈದ್ಯ ವೃತ್ತಿಯಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಆಯುರ್ವೇದ ವೈದ್ಯ ಡಾ. ರಂಜಿತ ಬಿರಾದಾರ ಅವರಿಗೆ ಕರ್ನಾಟಕ ಆಯುರ್ವೇದ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿ ಮಾಡಿಸಿ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಕೆಪಿಎಂಇ ನೋಂದಣಿ ಮಾಡಿಸಿ ಅದೇ ಪದ್ದತಿಯಲ್ಲಿ ವೈದ್ಯ ವೃತ್ತಿ ನಡೆಸಲು ಎಚ್ಚರಿಕೆ ನೀಡಲಾಗಿದೆ ಎಂದರು.

ಇದನ್ನೂ ಓದಿ : ಬೀದರ್‌| ʼಶಕ್ತಿ ಯೋಜನೆʼಗೆ 2 ವರ್ಷ: 8.29 ಕೋಟಿ ಮಹಿಳೆಯರು ಪ್ರಯಾಣ; ₹237.80 ಕೋಟಿ ಆದಾಯ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಜಿಲ್ಲಾ ಕೆಪಿಎಂಇ ನೋಡಲ್ ಅಧಿಕಾರಿ ಡಾ.ದಿಲೀಪ್ ಡೋಂಗ್ರೆ, ತಾಲೂಕಾ ಆರೋಗ್ಯ ಅಧಿಕಾರಿ ಡಾ. ಗಾಯತ್ರಿ, ಡಾ.ಸಂಗಾರೆಡ್ಡಿ,ಡಾ.ಶಿವಕುಮಾರ ಸಿದ್ದೇಶ್ವರ, ಡಾ.ರವಿ ಕಲಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...