ಬೀದರ್‌ | ಅಲ್ಪಸಂಖ್ಯಾತರ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೀದರ್ ಜಿಲ್ಲೆಯಲ್ಲಿ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ.

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಬಾಲಕಿಯರ ವಸತಿ ಕಾಲೇಜು ಮೀರಾಗಂಜ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು ಕಪಲಾಪುರ, (ಉನ್ನತೀಕರಣಗೊಂಡ) ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಬಂಬಳಗಿ ಹಾಗೂ ಮೌಲಾನಾ ಆಜಾದ ಮಾದರಿ ಪದವಿ ಪೂರ್ವ ಕಾಲೇಜು ಮನಿಯಾರತಾಲಿಂ ಕಾಲೇಜುಗಳಲ್ಲಿ 2025-26ನೇ ಸಾಲಿನ ಪ್ರಥಮ ಪಿ.ಯು.ಸಿ (ವಿಜ್ಞಾನ ಮತ್ತು ವಾಣಿಜ್ಯ ವಿಭಾಗ)ಕ್ಕೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಅರ್ಹತೆ : ಶೇ.75ರಷ್ಟು ಸೀಟುಗಳನ್ನು ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ವಿದ್ಯಾರ್ಥಿಗಳಿಗೆ ಹಾಗೂ ಶೇ.25ರಷ್ಟು ಸೀಟುಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಳಿಗೆ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಮೀಸಲಿಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಬಯಸುವವರು ವೆಬ್‌ಸೈಟ್ https://sevasindhuservices.karnataka.gov.in/ ಮೂಲಕ 2025ರ ಮೇ 17ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ ಬೀದರ್ ಮತ್ತು ಸಂಬಂಧಪಟ್ಟ ವಸತಿ ಕಾಲೇಜುಗಳ ಪ್ರಾಂಶುಪಾಲರಿಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...