ಬೀದರ್‌ | ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ 30 ಮಕ್ಕಳಿಗೆ ಉಚಿತ ಶಿಕ್ಷಣ : ನಾಳೆ ಪ್ರವೇಶ ಪರೀಕ್ಷೆ

Date:

ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ನಾಳೆ (ಫೆ.16) ಬೆಳಿಗ್ಗೆ 9 ಗಂಟೆಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ 30 ವಿದ್ಯಾರ್ಥಿಗಳಿಗೆ 6 ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಜತೆಗೆ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಆಡಳಿತಾಧಿಕಾರಿ ಮೋಹನ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ 5ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಹರಾಗಿರುತ್ತಾರೆ. ಫೆ.16 ಮತ್ತು 23 ರಂದು ಎರಡು ದಿನ ಪರೀಕ್ಷೆ ನಡೆಯಲಿವೆ. ಕನ್ನಡ, ಇಂಗ್ಲಿಷ್, ಗಣಿತ ಮತ್ತು ಪರಿಸರ ಅಧ್ಯಯನ ಕುರಿತು ಪರೀಕ್ಷೆ ಒಳಗೊಂಡಿರುತ್ತದೆ. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಶ್ರೀ ಚನ್ನಬಸವೇಶ್ವರ ಗುರುಕುಲ ಪ್ರಾಥಮಿಕ ಶಾಲೆ ಕರಡ್ಯಾಳ ಸುಮಾರು 33 ವರ್ಷಗಳಿಂದ ಮಕ್ಕಳಿಗೆ ಉತ್ತಮ ಸಂಸ್ಕಾರಯುತ ಶಿಕ್ಷಣ ನೀಡುತ್ತ ಬರುತ್ತಿದ್ದು, ಇದೀಗ ವಿಶೇಷವಾಗಿ ಬಡ ಮತ್ತು ಪ್ರತಿಭಾವಂತ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಈ ಪರೀಕ್ಷೆ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ ಸಾಬೀತು ಪಡಿಸಬೇಕುʼ ಎಂದು ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗಲು ಆನ್‌ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

14blk6

ʼಕನ್ನಡ ಮಾಧ್ಯಮದ ಕಲಿಕೆಯನ್ನು ಮತ್ತಷ್ಟು ಗಟ್ಟಿಯಾಗಿಸುವ ಸದುದ್ದೇಶದಿಂದ ಬಡ, ಪ್ರತಿಭಾವಂತ 30 ಮಕ್ಕಳಿಗೆ 6 ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ, ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲು ನಿರ್ಧರಿಸಿದ್ದೇವೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿ ಈ ಸೌಲಭ್ಯಗಳನ್ನು ತಮ್ಮದಾಗಿಸಿಕೊಳ್ಳಬೇಕುʼ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠದ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...