ಬೀದರ್ ನಗರದ ರಿಶೈನ್ ಆರ್ಗನೈಜೇಶನ್ ವತಿಯಿಂದ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್, ಮೊರಂಬಿ ಹಾಗೂ ಔರಾದ್ ತಾಲೂಕಿನ ಸಂತಪೂರ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು.
ಸಂಸ್ಥೆಯ ಅಧ್ಯಕ್ಷ ರೋಹನ್ ಕುಮಾರ ಮಾತನಾಡಿ, ʼಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ನೋಟ್ ಬುಕ್, ಪೆನ್ ಹಾಗೂ ಬಟ್ಟೆ ವಿತರಿಸಲಾಗುತ್ತಿದೆ. ಮಕ್ಕಳಿಗೆ ಶಿಕ್ಷಣ ಜೊತೆಗೆ ಮಾನವೀಯ ಮೌಲ್ಯಗಳನ್ನು ತಿಳಿಸುವ ಕೆಲಸ ಆಗಬೇಕಿದೆʼ ಎಂದರು.

ʼಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಯುವಕರು ದುಷ್ಚಟಗಳಿಗೆ ಬಲಿಯಾಗಿ ಅಮೂಲ್ಯ ಬದುಕು ಹಾಳುಮಾಡಿಕೊಳ್ಳುತ್ತಿದ್ದಾರೆ. ಮಕ್ಕಳು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಂಡು ಉನ್ನತ ಹುದ್ದೆ ಪಡೆಯಬೇಕಿದೆ. ಶಿಕ್ಷಕರು, ವಿದ್ಯಾರ್ಥಿಗಳು ಸಮಾಜದಲ್ಲಿ ಮಾನವೀಯತೆ ಬಿತ್ತುವ ಕಾರ್ಯ ಮಾಡಬೇಕುʼ ಎಂದು ನುಡಿದರು.
ಇದನ್ನೂ ಓದಿ : ಬೀದರ್ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರಾದ ಸೈಮನ್, ಶ್ರೀಧರ್ ಸೋಮನೂರ್, ಸಿದ್ದಾರ್ಥ್ ಮಂಟಾಳೆ, ಸೂರ್ಯ ಮಚ್ಚೆ ಶ್ರೀ ಡೆಲ್ವಿನ್ ಮಾರ್ಕಸ್, ಬಾಬುರಾವ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.





