ಬೀದರ್‌ | ಮಧ್ಯಪ್ರದೇಶದಿಂದ ಗಾಂಜಾ ಖರೀದಿ : 43 ಕೆಜಿ ಗಾಂಜಾದೊಂದಿಗೆ ಸಿಕ್ಕಿಬಿದ್ದ ಮಹಿಳೆ ಪೊಲೀಸರ ವಶಕ್ಕೆ

Date:

ಬೀದರ್‌ ನಗರದ ಗಾಂಧಿ ಗಂಜ ಠಾಣೆಯ ಪೊಲೀಸರು ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆಯನ್ನು ಬಂಧಿಸಿ ₹43.47 ಲಕ್ಷ ಮೌಲ್ಯದ 43 ಕಿಲೋ 479 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಾತ್ಮೀದಾರರ ಮಾಹಿತಿ ಮೇರೆಗೆ ಡಿವೈಎಸ್ಪಿ ಶಿವನಗೌಡ ಪಾಟೀಲ್‌ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ, ಬೀದರ್‌ ನಗರದ ಆಶ್ರಾ ಕಾಲೋನಿ ಸಮೀಪ ಕಾರಿನಲ್ಲಿ ಬಂದ ಮೂವರು ವ್ಯಕ್ತಿಗಳು ಕಾರಿನಿಂದ ಗಾಂಜಾ ಚೀಲ ರಸ್ತೆ ಮೇಲೆ ಬೀಸಾಡಿ ಗೂನಳ್ಳಿ ರಸ್ತೆ ಮೂಖಾಂತರ ಓಡಿ ಹೋಗಿದ್ದರು.

ಕಾರಿನ ಸಮೀಪ ನಿಂತಿದ್ದ‌ ಓರ್ವ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ʼಬೀದರ್ ನಗರದ ಇರಾನಿ ಕಾಲೋನಿ ನಿವಾಸಿಯಾಗಿದ್ದು, ನಾನು ಕರೆ ಮಾಡಿದಾಗ ಮಧ್ಯಪ್ರದೇಶದಿಂದ ಗಾಂಜಾ ತಂದು ಕೊಡುತ್ತಾರೆ. ಹೆಚ್ಚಿನ ಹಣ ಸಂಪಾದನೆಗಾಗಿ ಸಾರ್ವಜನಿಕರಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತೇನೆʼ ಎಂದು ತಪ್ಪೊಪ್ಪಿಕೊಂಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮಧ್ಯಪ್ರದೇಶ ಮೂಲದಿಂದ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ತಂದು ಕೊಟ್ಟು ಪರಾರಿಯಾದ ರೇವಾ, ಕಿರು ಹಾಗೂ ರಾಹುಲ್‌ ಸೇರಿ ಬಂಧಿತ ಮಹಿಳೆ ಸೇರಿ ನಾಲ್ವರ ವಿರುದ್ಧ ಗಾಂಧಿ ಗಂಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆʼ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಇಳಿಮುಖ

ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಚಂದ್ರಕಾಂತ ಪೂಜಾರಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗಾಂಧಿ ಗಂಜ ಠಾಣೆಯ ಎಎಸ್‌ಐ ಶಶಿಕಲಾ, ಸಿಬ್ಬಂದಿಗಳಾದ ಇರ್ಫಾನ್‌, ನವೀನ್‌, ಸಂಜುಕುಮಾರ್‌, ಗಂಗಾಧರ, ಸುಧಾಕರ, ಇಸ್ಮಾಯಿಲ್‌, ಸಂಜನಾ ಹಾಗೂ ದೀಪಕ ಹಾಗೂ ನೂತನ ನಗರ ಠಾಣೆಯ ಸಿಬ್ಬಂದಿಗಳಾದ ನಿಂಗಪ್ಪ, ಭರತ, ಸತೀಷ ಹಾಗೂ ಎಲೀಷ್‌ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...