ಬೀದರ್‌ | ಬಲಗೈ ಸಮುದಾಯಕ್ಕೆ ಪ್ರವರ್ಗ (ಎ) ಸ್ಥಾನಮಾನ ನೀಡಿ : ಜ್ಞಾನಪ್ರಕಾಶ ಸ್ವಾಮೀಜಿ

Date:

ಕರ್ನಾಟಕದ ಬಲಗೈ ಸಮುದಾಯಕ್ಕೆ ಪ್ರವರ್ಗ (ಎ) ಸ್ಥಾನಮಾನ ನೀಡದಿದ್ದರೆ, ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ಅಧ್ಯಕ್ಷ ಜ್ಞಾನಪ್ರಕಾಶ ಸ್ವಾಮೀಜಿ ಎಚ್ಚರಿಸಿದರು.

ಬೀದರ್ ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ ಒಳಮಿಸಲಾತಿ ವರದಿ ಒಳಸಂಚು ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು,ʼ ಒಂದು ವಾರದೊಳಗೆ ಕ್ಯಾಬಿನೆಟ್ ಸಭೆ ಕರೆಯಬೇಕು, ಇಲ್ಲದಿದ್ದರೆ ಸರ್ಕಾರ ಬಿಳಿಯುವ ಮಟ್ಟದ ಚಳುವಳಿ ಆರಂಭವಾಗಲಿದೆʼ ಎಂದು ಕರೆ ನೀಡಿದರು.

ʼಸಿದ್ದರಾಮಯ್ಯನವರ ರಾಜಕೀಯ ಜೀವನಕ್ಕೆ ನಾವು ಮುನ್ನುಡಿ ಬರೆದೆವು. ನಾವು ಬೆಂಬಲಿಸದಿದ್ದರೆ ಅವರು ಎರಡು ಬಾರಿ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಆದರೆ, ನಮ್ಮನ್ನೇ ಪ್ರವರ್ಗ (ಬಿ)ಯಲ್ಲಿ ಸೇರಿಸಿದ್ದಾರೆ. ಇದನ್ನು ಸರಿಪಡಿಸದಿದ್ದರೆ ಸಿಎಂ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರ ಕೈಗೊಂಡಿದ್ದೇವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಾಗಮೊಹನದಾಸ ವರದಿಯು ಬಲಗೈ ಸಮುದಾಯದ 60 ಸಾವಿರ ಜನರ ಸಂಖ್ಯೆಯನ್ನು ಕುಗ್ಗಿಸುವ ಹುನ್ನಾರವಾಗಿದೆ. ನಮ್ಮ ಸಮುದಾಯವನ್ನು ವಿಭಜಿಸುವ, ಕುಗ್ಗಿಸುವ ಪ್ರಯತ್ನ ಸರ್ಕಾರದಿಂದ ನಡೆಯುತ್ತಿದೆ. ನಾಗಪುರದ ಆರ್‌ಎಸ್‌ಎಸ್ ನಿಂದಲೇ ಈ ಕುತಂತ್ರ ನಡೆದಿದೆ. ಆದರೆ ನಾವು ಹೆದರದೆ ಜನ ಹೋರಾಟಕ್ಕೆ ಸಿದ್ಧರಾಗಿದ್ದೇವೆʼ ಎಂದು ಹೇಳಿದರು.

ಸಭೆಯ ಅಧ್ಯಕ್ಷ ಅನೀಲಕುಮಾರ ಬೇಲ್ದಾರ ಮಾತನಾಡಿ, ʼನಮ್ಮ ಸಮುದಾಯದ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ತಡೆಯಲು ನಾವು ಸಿದ್ಧರಿದ್ದೇವೆ. ಸ್ವಾಮೀಜಿಯವರ ನೇತೃತ್ವದಲ್ಲಿ ಬೀದರ್‌ನಿಂದ ಬೆಂಗಳೂರುವರೆಗೆ ಹೋರಾಟ ನಡೆಯಲಿದೆʼ ಎಂದರು.

ಇದನ್ನೂ ಓದಿ : ಬೀದರ್‌ | ಚೆಂಡು ಹೂವು ತೋಟದಲ್ಲಿ ಬೆಳೆದ ₹15 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಆರೋಪಿ ಬಂಧನ

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಶ್ರೀಪತರಾವ ದೀನೆ ಅವರು ಸಂವಿಧಾನ ಪೀಠಿಕೆ ಪಠಿಸಿದರು, ಬಾಬುರಾವ್ ಪಾಸ್ವನ್ ಸ್ವಾಗತಿಸಿದರು, ಪ್ರದೀಪ್ ನಾಟಿಕರ್ ನಿರೂಪಿಸಿದರು. ಒಕ್ಕೂಟದ ರಮೇಶ ಡಾಕುಳಗಿ, ಸಂದೀಪ್ ಕಾಂಟೆ, ಅಂಬದಾಸ್ ಗಾಯಕವಡ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...