ಬೀದರ್‌ | ಯೋಗದಿಂದ ಉತ್ತಮ ಆರೋಗ್ಯ : ಪ್ರೊ.ಬಿ.ಎಸ್.ಬಿರಾದಾರ

Date:

ದಿನನಿತ್ಯ ಯೋಗ ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು.

ಶನಿವಾರ ಬೀದರ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ʼಪ್ರಾಚೀನ ಕಾಲದಿಂದಲೂ ಯೋಗ ಪರಂಪರೆಯನ್ನು ಪಾಲಿಸಿಕೊಂಡು ಬಂದಿರುವ ಪೂರ್ವಜರು ಸದೃಢ ಶರೀರ ಹಾಗೂ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದನ್ನು ಕಾಣಬಹುದಾಗಿದೆ. ಹೀಗಾಗಿ ಉತ್ತಮ ಆರೋಗ್ಯದಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯ. ಪ್ರಾಚೀನ ಕಾಲದಿಂದ ಭಾರತದಲ್ಲಿ ಪ್ರಚಲಿತವಿದ್ದ ಈ ಯೋಗ ಪರಂಪರೆಗೆ ಸುದೀರ್ಘವಾದ ಇತಿಹಾಸವಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಯೋಗದಿಂದ ರೋಗ ದೂರವಾಗುತ್ತದೆ ಮತ್ತು ಯೋಗದಲ್ಲಿ ಎಲ್ಲವೂ ಇದೆ. ಶಾರೀರಿಕ, ಮಾನಸಿಕ, ಆಧ್ಯಾತ್ಮಿಕದ ಸಮನ್ವಯವಿದೆ. ಪ್ರಾಚೀನ ಕಾಲದ ಋಷಿಮುನಿಗಳು, ಸಾಧುಸಂತರು, ಯೋಗಿವರ್ಯರು ಈ ಪರಂಪರೆಗೆ ನಾಂದಿಹಾಡಿದರು. ಇಂದು ಭಾರತದ ಯೋಗ ಪರಂಪರೆ ಜಗತ್ತಿನಾದ್ಯಂತ ಹರಡುತ್ತಿರುವುದು ಭಾರತೀಯರಾದ ನಮಗೆ ಹೆಮ್ಮೆಯ ಸಂಗತಿಯಾಗಿದೆʼ ಎಂದರು.      

ಉಪನ್ಯಾಸಕರಾದ ಡಾ.ಶಾಂತಕುಮಾರ ಚಿದ್ರಿ, ಡಾ.ನಾಗೇಶ ಸಾವಳೆ ಯೋಗ, ಪ್ರಾಣಾಯಾಮದ ಕುರಿತಾದ ಮಾಹಿತಿ ನೀಡುತ್ತಾ ಸರ್ವರಿಗೂ ಯೋಗವಿಧಾನದಂತೆ ಆಸನಗಳನ್ನು ಮಾಡಿಸಿದರು.‌

ಇದನ್ನೂ ಓದಿ : ಬೀದರ್‌ | ಜಾನಪದ ವಿಶ್ವವಿದ್ಯಾಲಯ ಪ್ರಾದೇಶಿಕ ಅಧ್ಯಯನ ಕೇಂದ್ರಕ್ಕೆ ಡಿಸಿ ಶಿಲ್ಪಾ ಶರ್ಮಾ ಭೇಟಿ; ಪರಿಶೀಲನೆ.

ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್., ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ.ಟಿ, ವಿಶೇಷಾಧಿಕಾರಿ ಡಾ.ರವೀಂದ್ರನಾಥ.ವಿ.ಗಬಾಡಿ, ಡಾ.ರಾಮಚಂದ್ರ ಗಣಾಪೂರ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...