ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

Date:

ಕಾರ್ಮಿಕರಿಗೆ ಕನಿಷ್ಠ ₹36 ಸಾವಿರ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಬೀದರ್‌ ನಗರದ ಪಾಪನಾಶ ಕಮಾನ್‌ ಬಳಿಯಿಂದ ಜಿಲ್ಲಾ ಕಾರ್ಮಿಕ ಇಲಾಖೆ ಕಚೇರಿವರೆಗೆ ಪ್ರತಿಭಟನೆ ನಡೆಸಿ, ಕಾರ್ಮಿಕ ಸಚಿವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಮಹೇಶ ಕುಳಲಿ ಅವರಿಗೆ ಸಲ್ಲಿಸಿದರು.

ಮುಖಂಡರು ಮಾತನಾಡಿ, ʼಕಾರ್ಮಿಕ ಇಲಾಖೆಯು ತನ್ನ ಕನಿಷ್ಠ ವೇತನ ಕರಡು ಪ್ರಕಟಿಸಿದೆ. ಅದು ವೈಜ್ಞಾನಿಕವಾಗಿಲ್ಲ ಎಂಬುದು ನಮ್ಮ ಅಭಿಪ್ರಾಯ. ಇಂದಿನ ಬೆಲೆಗಳು ಹಾಗೂ ಜೀವನ ನಿರ್ವಹಣಾ ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿಪಡಿಸಿದಂತೆ ಕಾಣುತ್ತಿಲ್ಲ. ಕನಿಷ್ಠ ವೇತನ ನಿಗದಿ ವೇಳೆ ಪತಿ, ಪತ್ನಿ ಹಾಗೂ ಎರಡು ಮಕ್ಕಳಿರುವ ಕುಟುಂಬವನ್ನು 3 ಗ್ರಾಹಕ ಯೂನಿಟ್‌ಗಳಾಗಿ ಪರಿಗಣಿಸಲಾಗಿದೆ. ಇದನ್ನು 3.6 ಗ್ರಾಹಕ ಯೂನಿಟ್‌ಗಳಾಗಿ ಪರಿಗಣಿಸಬೇಕು. ಕನಿಷ್ಠ ₹36 ಸಾವಿರ ವೇತನ ನಿಗದಿ ಪಡಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಗ್ರಾಮ ಪಂಚಾಯತಿಗಳಲ್ಲಿ ದುಡಿಯುವ ಸಿಬ್ಬಂದಿಗಳಿಗೆ ʼಸೇವಾ ಹಿರಿತನದʼ ಮಾನ್ಯತೆ ನೀಡಿ, ಮೂಲ ವೇತನಕ್ಕೆ ಶೇ2ರಷ್ಟು ಹೆಚ್ಚಳವನ್ನು ಪ್ರತಿ ವರ್ಷ ಪರಿಗಣಿಸಿ, ಹೆಚ್ಚುವರಿ ಭತ್ಯೆ ನೀಡಬೇಕು. ವೈಜ್ಞಾನಿಕವಾದ ಕನಿಷ್ಠ ಕೂಲಿ ಆದೇಶವನ್ನು ವಿಳಂಬವಿಲ್ಲದೇ ಜಾರಿಗೊಳಿಸಬೇಕುʼ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜೀವನ ಕನ್ನಳ್ಳೆ, ಸಿಐಟಿಯು ಜಿಲ್ಲಾ ಸಂಚಾಲಕ ಪ್ರಭು ಸಂತೋಷಕರ್, ರಾಜ್ಯ ಸಮಿತಿ ಸದಸ್ಯರಾದ ವಿಜಯಕುಮಾರ ಎಚ್. ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...