ಬೀದರ್‌ | ಗ್ರಾ.ಪಂ.ಸದಸ್ಯರಿಗೆ 11 ತಿಂಗಳ ವೇತನ ಬಾಕಿ; ಸರ್ಕಾರ ಕೊಟ್ಟರೂ ಕೈಸೇರದ ಗೌರವಧನ

Date:

ಬೀದರ್‌ ತಾಲೂಕಿನ ಯರನಳ್ಳಿ ಗ್ರಾಮ ಪಂಚಾಯತಿ ಸದಸ್ಯರಿಗೆ ಕಳೆದ 11 ತಿಂಗಳ ಗೌರವಧನ ಬಿಡುಗಡೆಯಾದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನೀಡದೇ ಇರುವುದರಿಂದ ಸದಸ್ಯರು ಗೌರವಧನಕ್ಕಾಗಿ ಅಂಗಲಾಚಬೇಕಾದ ಸ್ಥಿತಿ ಬಂದಿದೆ.

ಯರನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯು ಯರನಳ್ಳಿ, ಬಂಪಳ್ಳಿ, ಸಾಂಗ್ವಿ, ಇಸ್ಲಾಂಪುರ ಹಾಗೂ ಸಿದ್ಧಾಪುರ ಗ್ರಾಮಗಳನ್ನು ಒಳಗೊಂಡಿದ್ದು, ಒಟ್ಟು 14 ಜನ ಸದಸ್ಯ ಬಲ ಹೊಂದಿದೆ. ಸರ್ಕಾರದ ಹೊಸ ಆದೇಶದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮಾಸಿಕ ₹6 ಸಾವಿರ, ಉಪಾಧ್ಯಕ್ಷರಿಗೆ ₹4 ಸಾವಿರ ಹಾಗೂ ಸದಸ್ಯರಿಗೆ ₹2 ಸಾವಿರ ಗೌರವ ಧನ ನಿಗದಿಪಡಿಸಲಾಗಿದೆ.

2024ರಲ್ಲಿ ಹಿಂದಿನ ಪಿಡಿಒ ಅವರ ಅವಧಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಒಟ್ಟು 11 ತಿಂಗಳ ಮಾಸಿಕ ಗೌರವಧನ ಬಿಡುಗಡೆಯಾಗಿದೆ. ಗೌರವ ಧನ ಕೊಡುವಂತೆ ಕೇಳಿದರೆ ʼಆ ಹಣ ಪಂಚಾಯತ್‌ ವ್ಯಾಪ್ತಿಯಲ್ಲಿ ವಿವಿಧ ಕೆಲಸ ಕಾರ್ಯಗಳಿಗೆ ಖರ್ಚು ಮಾಡಲಾಗಿದೆʼ ಎಂದು ಪಿಡಿಒ ಅವರು ಸಬೂಬು ಹೇಳಿದ್ದಾರೆʼ ಎಂದು ಸದಸ್ಯರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದಿಂದ ಬಿಡುಗಡೆಯಾಗಿ ಪಂಚಾಯತ್‌ ಖಾತೆಗೆ ಜಮೆಯಾದರೂ ಪಿಡಿಒಗಳು ಸದಸ್ಯರು ಗೌರವ ಧನ ನೀಡುತ್ತಿಲ್ಲ ಎಂದು ಆರೋಪಿಸಿ ಪಂಚಾಯಿತಿಯ 12 ಜನ ಸದಸ್ಯರು ಬೀದರ್‌ ತಾಲೂಕು ಪಂಚಾಯತಿ ಇಒ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ʼಕಳೆದ ಐದಾರು ತಿಂಗಳ ಹಿಂದೆ ಸದಸ್ಯರ ಗೌರವ ಧನ ಬಿಡುಗಡೆಯಾಗಿದೆ. ಹಿಂದಿನ ಪಿಡಿಒ ಅವರಿಗೆ ಅನೇಕ ಬಾರಿ ಕೇಳಿದರೂ ವೇತನ ನೀಡದೆ ವರ್ಗಾವಣೆಯಾದರು. ಇದೀಗ ಇರುವ ಪಿಡಿಒ ಅವರಿಗೆ ಕೇಳಿದರೆ ʼಈ ಬಗ್ಗೆ ಹಿಂದಿನ ಪಿಡಿಒ ಅವರಿಗೆ ಗೊತ್ತುʼ ಎಂದು ಹೇಳುತ್ತಿದ್ದಾರೆ. ಸದಸ್ಯರ ಗೌರವ ಧನ ಕೆಲಸಗಳಿಕೆ ಬಳಕೆ ಮಾಡಿಕೊಂಡರ ಕರ ವಸೂಲಾತಿ ಹಣ ನಮಗೆ ಕೊಡಿʼ ಎಂದು ಸದಸ್ಯರು ಕೇಳುತ್ತಿದ್ದಾರೆ.

ʼಪ್ರಜಾಪ್ರಭುತ್ವದ ಬುನಾದಿಯಾಗಿರುವ ಗ್ರಾಮ ಪಂಚಾಯತಿಗಳ ಸದಸ್ಯರಿಗೆ ಸರ್ಕಾರವೇ ಮಾಸಿಕ ಗೌರವಧನ ನಿಗದಿಪಡಿಸಿ ಕಾಲಕಾಲಕ್ಕೆ ಬಿಡುಗಡೆ ಮಾಡುತ್ತದೆ. ಆದರೆ ʼದೇವರು ಕೊಟ್ಟರೂ ಪೂಜಾರಿ ಕೊಡುತ್ತಿಲ್ಲʼ ಎಂಬಂತೆ ಗೌರವಧನ ಸಕಾಲಕ್ಕೆ ಕೈಗೆ ಸೇರದ ಪರಿಣಾಮ ಸದಸ್ಯರು ಪಿಡಿಒ ಬಳಿ ಕೈಕಟ್ಟಿ ನಿಲ್ಲಬೇಕಾದ ಪರಿಸ್ಥಿತಿಯಾಗಿದೆʼ ಸದಸ್ಯರು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : ಬೀದರ್‌ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಮುಕುಲ್‌ ಜೈನ್ ನೇಮಕ

ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗ್ರಾಮ ಪಂಚಾಯತಿ ಸದಸ್ಯರಿಗೆ ಬರಬೇಕಾದ ಮಾಸಿಕ ಗೌರವಧನ ಪಾವತಿಸಬೇಕೆಂದು ಗ್ರಾಮ ಪಂಚಾಯತಿ ಸದಸ್ಯರಾದ ತಾಜುದ್ದೀನ್‌, ರಾಜಪ್ಪಾ, ಲಕ್ಷ್ಮೀಬಾಯಿ, ಕಸ್ತೂರಿಬಾಯಿ, ಬಾಬು, ಮಾಣಿಕೇಶ್ವರಿ, ವಿಜಯಕುಮಾರ, ಪ್ರಭುಶೆಟ್ಟಿ, ರೇಣುಕಾ, ರೇಷ್ಮಾ ಹಾಗೂ ಕಾವೇರಿ ಅವರು ಪತ್ರಕ್ಕೆ ಸಹಿ ಹಾಕಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...