ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ : ಪಿಡಿಒ ಅಮಾನತು

Date:

ಗ್ರಾಮ ಪಂಚಾಯತಿ ಚುನಾಯಿತ ಅಧ್ಯಕ್ಷರ ಅಧಿಕಾರ ಚಲಾಯಿಸಿದ ಆರೋಪದಡಿ ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮ ಪಂಚಾಯತ್ ಪಿಡಿಒ ಮಹಾಲಕ್ಷ್ಮಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ್ ಬದೋಲೆ ಅವರು ಆದೇಶ ಹೊರಡಿಸಿದ್ದಾರೆ.

‘ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯನ್ನು ಕಾನೂನು ಬಾಹಿರವಾಗಿ/ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮಗಳನ್ನು ಉಲ್ಲಂಘಿಸಿ ಸಾಮಾನ್ಯ ಸಭೆಯನ್ನು ಜರುಗಿಸಿರುವ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಜೇಮ್ಸ್ ಅವರು ದೂರು ಸಲ್ಲಿಸಿದ್ದರು.

ಪಂಚಾಯತಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳದೆ ಅಧ್ಯಕ್ಷೆ, ಪಿಡಿಒ ಇಬ್ಬರೂ ಸೇರಿ ಸರ್ಕಾರದ ಹಣ ಲೂಟಿ ಮಾಡಿರುವುದಾಗಿ ಮತ್ತು ಗ್ರಾ.ಪಂ.ನಡವಳಿಯನ್ನು ಮನಸ್ಸಿಗೆ ಬಂದಂತೆ ಪಾಸು ಮಾಡಿರುವುದಾಗಿ ಹಾಗೂ ಸದರಿ ವಿಷಯದ ಕುರಿತು ವಿಚಾರಿಸಿದಾಗ ನನ್ನ ಮೇಲೆ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ಉಪಾಧ್ಯಕ್ಷ ಸೈಯದ್ ಶರಫೋದೀನ್ ಅವರು ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದರಿ ದೂರಿನ್ವಯ ಜಿ.ಪಂ.ಆಡಳಿತ ವಿಭಾಗದ ಸಹಾಯಕ ನಿರ್ದೇಶಕ‌ (ಆಡಳಿತ) ಜಯಪ್ರಕಾಶ ಚವ್ಹಾಣ ಮತ್ತು ಗ್ರಾ.ಪಂ.ವಿಷಯ ನಿರ್ವಾಹಕ ಹಣಮಂತ ಚಿದ್ರಿ ಅವರು ಜಂಟಿಯಾಗಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು.

‘2021ರಿಂದ ಮಹಾಲಕ್ಷ್ಮಿ ಅವರು ಹೆಡಗಾಪೂರ ಗ್ರಾಮ ಪಂಚಾಯತಿಯ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದು, ನಿಯಮಿತವಾಗಿ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳನ್ನು ಜರುಗಿಸಲು ಕ್ರಮ ಕೈಗೊಂಡಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆ ಕರೆಯುವಂತೆ ತಿಳಿಸಿದರೂ ಪಿಡಿಒ ಅವರು ಗ್ರಾ.ಪಂ.ಸಾಮಾನ್ಯ ಸಭೆಗಳನ್ನು ಕರೆಯದೆ ತಮಗೆ ಅನುಕೂಲವಾದಾಗ ಮಾತ್ರ ಸಭೆ ಕರೆಯುತ್ತಾರೆ.‌ ಇದರಿಂದ ನನ್ನ ಅಧ್ಯಕ್ಷೆ ಪದವಿಗೆ ಬೆಲೆ ಇಲ್ಲದಂತಾಗಿದೆ. ನಾನು ದಲಿತ ಮಹಿಳಾ ಅಧ್ಯಕ್ಷೆ ಎನ್ನುವ ಕಾರಣದಿಂದ ಪಿಡಿಒ ಅವರು ನನಗೆ ಗೌರವ ಕೊಡುತ್ತಿಲ್ಲ’ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಜೇಮ್ಸ್ ಅವರು ಗಂಭೀರ ಆರೋಪ ಮಾಡಿರುವ ಬಗ್ಗೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

‘ಪಂಚಾಯತಿಯ ಸಾಮಾನ್ಯ ಸಭೆಯ ನಿರ್ಣಯ ಪುಸ್ತಕಗಳು ಪರಿಶೀಲಿಸಿದಾಗ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆ ಇರದಿದ್ದರೂ ಪಿಡಿಒ ಅವರು ಗ್ರಾ.ಪಂ.ಉಪಾಧ್ಯಕ್ಷರನ್ನು ಸಭೆಯ ಅಧ್ಯಕ್ಷರನ್ನಾಗಿ ಮಾಡಿ ಸಭೆ ನಡೆಸಿ ಕರ್ತವ್ಯ ಲೋಪ ಹಾಗೂ ಪಂಚಾಯತ ರಾಜ್ ಅಧಿನಿಯಮದ ನಿಯಮಗಳಿಗೆ ವಿರುದ್ಧವಾಗಿ ನಡೆದಿರುವುದು ದುರುದ್ದೇಶದ ವರ್ತನೆಯಾಗಿದೆ’ ಎಂದು ಪರಿಶೀಲನಾ ವರದಿಯಿಂದ ತಿಳಿದುಬಂದಿದೆ.

ಇದನ್ನೂ ಓದಿ : ಬೀದರ್ | ಪ್ರೊಜೆಕ್ಟರ್ ಖರೀದಿ ಹೆಸರಲ್ಲಿ ಹಣ ದುರ್ಬಳಕೆ : ಆರೋಪ

ಚುನಾಯಿತ ಗ್ರಾ.ಪಂ.ಅಧ್ಯಕ್ಷರ ಅಧಿಕಾರವನ್ನು ಚಲಾಯಿಸಿ ಗ್ರಾ.ಪಂ.ಸಾಮಾನ್ಯ ಸಭೆಯನ್ನು ಕರೆಯುವ ಮತ್ತು ಮುಂದೂಡುವ ಕಾರ್ಯ ಮಾಡಿದ ಹಾಗೂ ಕಚೇರಿಯ ಲಿಖಿತ ಸೂಚನೆಗಳನ್ನು ಪಾಲಿಸದೆ ಪ್ರವಾಹದಂತಹ ಪ್ರಕೃತಿ ವಿಕೋಪದ ಸಂದರ್ಭದಲ್ಲಿಯೂ ಕೂಡಾ ಜವಾಬ್ದಾರಿಯುತ ಸರ್ಕಾರಿ ನೌಕರರಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸದೆ ಇರುವುದು ದೃಢಪಟ್ಟ ವರದಿ ಆಧರಿಸಿ ಪಿಡಿಒ ಮಹಾಲಕ್ಷ್ಮಿ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತು ಮಾಡಿ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...