ಬೀದರ್‌ | ಪ್ರೀತಿಸುವಂತೆ ಯುವಕನಿಂದ ಕಿರುಕುಳ : ಅಪ್ರಾಪ್ತೆ ನೇಣಿಗೆ ಶರಣು

Date:

ಪ್ರೀತಿಸುವಂತೆ ಯುವಕ ನೀಡಿದ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.

ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಬಾಲಕಿಗೆ ಅದೇ ಗ್ರಾಮದ ಯುವಕ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ, ʼನಿನಗೆ ಮದುವೆ ಮಾಡಿಕೊಳ್ಳುತ್ತೇನೆʼ ಎಂದು ಸದಾ ಪೀಡಿಸುತ್ತಿದ್ದನು ಎಂದು ಬಾಲಕಿಯ ಪೋಷಕರು ದೂರಿದ್ದಾರೆ.

ʼಹಲವು ಬಾರಿ ಯುವಕನಿಗೆ ಬುದ್ಧಿವಾದ ಹೇಳಿದರೂ ಮತ್ತೆ ಸತಾಯಿಸುತ್ತಿದ್ದನು. ಯುವಕನ ಕಿರುಕುಳ ತಾಳಲಾರದೇ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ʼಸಾವಿಗೆ ಯುವಕನೇ ಕಾರಣʼ ಎಂದು ಇರುವ ಚೀಟಿ ಬಾಲಕಿ ತುಟಿಯಲ್ಲಿ ಇಟ್ಟುಕೊಂಡು ನೇಣು ಹಾಕಿಕೊಂಡಿದ್ದಾಳೆʼ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್ | ನೇಣು ಬಿಗಿದು ಸರ್ಕಾರಿ ಶಾಲೆ ಶಿಕ್ಷಕ ಆತ್ಮಹತ್ಯೆ

ಯುವಕ ಮತ್ತು ಆತನ ತಾಯಿ ನೀಡಿದ ಮಾನಸಿಕ ಕಿರುಕುಳ, ಬೆದರಿಕೆಯಿಂದ ಮನನೊಂದು ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಬ್ಬರ ವಿರುದ್ಧ ಕಾನೂನು ಕ್ರಮಕೈಗೊಂಡು ನ್ಯಾಯ ಒದಗಿಸಬೇಕೆಂದು ಮೃತಳ ತಂದೆ ನೀಡಿದ ದೂರಿನ ಮೇರೆಗೆ ಇಬ್ಬರ ವಿರುದ್ಧ ಮುಡಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...