ಬೀದರ್ | ವ್ಯಾಪಕ ಮಳೆ :‌ ಔರಾದ್‌ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

Date:

ಔರಾದ್‌ (ಬಾ) ತಾಲೂಕಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್‌ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು (ಆ.18) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್‌ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರು ಆದೇಶ ಹೊರಡಿಸಿದ್ದಾರೆ.

ತೀವ್ರವಾಗಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಔರಾದ್‌ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಎಂದು ಸೋಮವಾರ ಬೆಳಿಗ್ಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಮಲನಗರ ತಾಲೂಕಿನ ಶಾಲೆಗಳಿಗೆ ರಜೆ : ಬಿಇಒ

ʼಎರಡ್ಮೂರು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಿಂದ ಔರಾದ್‌ ತಹಸೀಲ್ದಾರ್‌ ಅವರು ಔರಾದ್ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು (ಸೋಮವಾರ) ರಜೆ ಘೋಷಿಸಿದ್ದಾರೆ. ಕಮಲನಗರ ತಾಲೂಕಿನಲ್ಲಿಯೂ ಮಳೆಯ ಪ್ರಮಾಣ ಹೆಚ್ಚಿದ್ದು, ಇಲ್ಲಿನ ಶಾಲೆಗಳಿಗೆ ರಜೆ ಘೋಷಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ್ದೇನೆʼ ಎಂದು ಕಮಲನಗರ ತಹಸೀಲ್ದಾರ್‌ ಅಮಿತ್‌ ಕುಲಕರ್ಣಿ ಈದಿನಕ್ಕೆ ತಿಳಿಸಿದ್ದಾರೆ.

ʼಔರಾದ್-ಕಮಲನಗರ ತಾಲೂಕು ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ರಂಗೇಶ ಅವರು ಮಾತನಾಡಿ, ʼಔರಾದ್‌ ಸೇರಿದಂತೆ ಕಮಲನಗರ ತಾಲೂಕಿನ ಶಾಲೆಗಳಿಗೂ ರಜೆ ನೀಡುವಂತೆ ಈಗಾಗಲೇ ಮೌಖಿಕವಾಗಿ ಆದೇಶ ಮಾಡಲಾಗಿದೆʼ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ಬೀದರ್‌ | ಮಳೆಗೆ ಜಮೀನು ಜಲಾವೃತ : ಬೆಳೆ ಹಾನಿ ಆತಂಕದಲ್ಲಿ ರೈತರು

ಸೋಮವಾರ ಬೆಳಿಗ್ಗೆ ಎಂದಿನಂತೆ ಶಾಲಾ-ಕಾಲೇಜುಗಳಿಗೆ ತೆರಳಿದ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಬಗ್ಗೆ ತಡವಾಗಿ ಮಾಹಿತಿ ಬಂದ ಕಾರಣ ಮರಳಿ ಮನೆಗೆ ಬರಬೇಕಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...