ಬೀದರ್ | ಭಾರೀ ಮಳೆ; ಗುಂಡಿ ಬಿದ್ದ ರಸ್ತೆಗಳು

Date:

ಬೀದರ್ ಜಿಲ್ಲಾದ್ಯಂತ ಕಳೆದ ವಾರದಿಂದ ಬಿಟ್ಟು ಬಿಡದೇ ಸುರಿದ ಮಳೆಯಿಂದಾಗಿ ನಗರದ ರಸ್ತೆಗಳು ಕಿತ್ತು ಹೋಗಿದ್ದು, ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬೀದರ್‌ನ ದೇವಿ ಕಾಲೋನಿಯ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು, ಮಳೆ ನೀರು ಸಂಗ್ರಹವಾಗಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಕ್ಯಾರೇ ಎನ್ನುತ್ತಿಲ್ಲ” ಎಂದು ಸ್ಥಳೀಯರು ಆರೋಪಿಸಿದರು.

“ಚಿದ್ರಿ ರಸ್ತೆಯ ಸಂಗಮೇಶ್ವರ ಕಾಲೋನಿಯಲ್ಲಿ ಸಿಸಿ ರಸ್ತೆಗಳು ಹದಗೆಟ್ಟಿದ್ದು, ಹಾಳಾಗಿವೆ. ರಸ್ತೆ ಮಧ್ಯೆ ಇರುವ ಗುಂಡಿಗಳು ಅಪಾಯಕ್ಕೆ ಆಹ್ವಾನಿಸುವಂತಿವೆ. ಕಾಲೋನಿಯ ನಿವಾಸಿಗಳು ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ತಿರುಗಾಡಲು ಸಾಕಷ್ಟು ತೊಂದರೆಯಾಗುತ್ತಿದೆ. ಕೂಡಲೇ ನಗರಸಭೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಗುಂಡಿ ಮುಚ್ಚಬೇಕು” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ದೇವಿ ಕಾಲೋನಿಯ ರಸ್ತೆ
ದೇವಿ ಕಾಲೋನಿಯ ರಸ್ತೆ ಅವಾಂತರ

“ಬೀದರ್ ನಗರದಿಂದ ನೌಬಾದ್ ನಡುವಿನ ರಸ್ತೆ ಅಲ್ಲಲ್ಲಿ ಗುಂಡಿ ಬಿದ್ದ ಪರಿಣಾಮ ಜನರು ಸಂಚಾರಕ್ಕೆ ಹೈರಾಣಾಗುತ್ತಿದ್ದಾರೆ. ಕಳೆದ ಬೀದರ್ ಉತ್ಸವ ಸಂದರ್ಭದಲ್ಲಿ ನಗರದ ಹಲವೆಡೆ ರಸ್ತೆ ದುರಸ್ತಿ ಕಾಮಗಾರಿ ನಡೆಸಲಾಗಿತ್ತು. ಆದರೆ ವರ್ಷ ಕಳೆಯುವ ಮುನ್ನವೇ ರಸ್ತೆಗಳು ಕಿತ್ತು ಬಂದಿವೆ” ಎಂದು ನಾಗರಿಕರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರೀ ಮಳೆ; ಸಂಕಷ್ಟದಲ್ಲಿರುವ ಕುಟುಂಬಗಳ ಆಸರೆಗೆ ಶಾಸಕ ಹರೀಶ್‌ ಸೂಚನೆ

“ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ನಗರ ಸಾರಿಗೆ ಬಸ್ ನಿಲ್ದಾಣದ ಎದುರು ರಸ್ತೆ ಗುಂಡಿ ಬಿದ್ದು ನೀರು ಸಂಗ್ರಹವಾಗಿದೆ. ಇದರಿಂದ ಜನರು ಓಡಾಡಲು ಪರದಾಡುತ್ತಿದ್ದಾರೆ. ನಗರದ ಹೃದಯ ಭಾಗವಾದ ನಗರ ಸಾರಿಗೆ ಬಸ್ ನಿಲ್ದಾಣ ಹೆಚ್ಚಿನ ಜನರು ಓಡಾಡುವ ಸ್ಥಳವಾಗಿದ್ದರೂ ನೈರ್ಮಲ್ಯ ಇಲ್ಲದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಹಲವೆಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ, ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿಯಾಗದ ಕಾರಣ ಗಬ್ಬು ನಾರುತ್ತಿರುವ ಪರಿಣಾಮ ನಿವಾಸಿಗಳು ನಗರಸಭೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...