ಬೀದರ್‌ | ಭಾರಿ ಮಳೆ : ಒಡೆದ ಐತಿಹಾಸಿಕ ತ್ರಿಪುರಾಂತ ಕೆರೆ

Date:

ಜಿಲ್ಲಾದ್ಯಂತ ಎರಡ್ಮೂರು ದಿನಗಳಿಂದ ಸತತ ಮಳೆಯಾಗುತ್ತಿದ್ದು, ಬಸವಕಲ್ಯಾಣ ನಗರದಲ್ಲಿರುವ ಐತಿಹಾಸಿಕ ತ್ರಿಪುರಾಂತ ಕೆರೆ ಭರ್ತಿಯಾಗಿ ಶನಿವಾರ ಒಡೆದಿದೆ.

ಕೆರೆ ಒಡೆದು ಅಪಾರ ಪ್ರಮಾಣದ ನೀರು ಪಕ್ಕದ ಬಡಾವಣೆ ಸೇರಿದಂತೆ ಗೌರ, ಪ್ರತಾಪುರ ಹಾಗೂ ಖಾನಾಪುರ ಗ್ರಾಮಗಳ ರಸ್ತೆಗಳಿಗೆ ಹರಿದಿದ್ದು ರಸ್ತೆ ಸಂಪರ್ಕ ಸ್ಥಗಿತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಕೆರೆ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. ಬಸವಕಲ್ಯಾಣದಿಂದ ಖಾನಾಪುರ, ಗೌರ್, ಪ್ರತಾಪುರ ಗ್ರಾಮಗಳಿಗೆ ತೆರಳುವ ರಸ್ತೆಗಳು ಜಲಾವೃತಗೊಂಡು ಸಂಚಾರ ಬಂದ್‌ ಆಗಿದೆ. ಸುತ್ತಮುತ್ತಲಿನ ಗ್ರಾಮದ ಜಮೀನಿಗೆ‌ ಕೆರೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ತತ್‌ಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

WhatsApp Image 2025 09 27 at 7.41.08 PM
ರಸ್ತೆ ಸಂಪರ್ಕ ಕಡಿತವಾದ ಹಿನ್ನೆಲೆ ಬ್ಯಾರಿಕೇಡ್‌ ಹಾಕಲಾಗಿದೆ.
image 62 3
ತ್ರಿಪುರಾಂತ ಕೆರೆ ಒಡೆದ ವಿಷಯ ತಿಳಿದು ಸ್ಥಳಕ್ಕೆ ಶಾಸಕ ಶರಣು ಸಲಗರ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...