ಬಸವಕಲ್ಯಾಣ ನಗರದಲ್ಲಿ ಅ.14ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹೊರಸಂಪನ್ಮೂಲದಿಂದ ಅಡುಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಮೋದಕುಮಾರ ಅಶೋಕಕುಮಾರ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಸಂಸ್ಥಾಪಕ ಗಗನ ಫುಲೆ ಅವರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ವಾಟ್ಸಾಪ್ ಮೂಲಕ ದೂರು ಸಲ್ಲಿಸಿದ್ದರು.
ಸರ್ಕಾರದಿಂದ ವೇತನ ಪಡೆಯುತ್ತಿರುವ ಖಾಯಂ/ಹೊರಸಂಪನ್ಮೂಲ ಸಿಬ್ಬಂದಿಯವರು ಯಾವುದೇ ಸಂಘ-ಸಂಸ್ಥೆಗಳಲ್ಲಿ ಭಾಗಿಯಾಗಿರುವುದು ಕಾನೂನಿನ ಪ್ರಕಾರ ನಿಷೇಧವಿರುತ್ತದೆ ಎಂದು ಪ್ರಮೋದಕುಮಾರ ಅವರನ್ನು ಬಸವಕಲ್ಯಾಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಸಿಬ್ಬಂದಿಯವರನ್ನು ಅ.21ರಂದು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.






